ಬೆಂಗಳೂರು: ಕ್ವಿನ್ ಸಿಟಿ (KWIN City) ವೈಶಿಷ್ಟ್ಯ ಪೂರ್ಣ ಯೋಜನೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ (MB Patil) ತಿಳಿಸಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಗುರುವಾರ ನಡೆದ ಕ್ವಿನ್ ಸಿಟಿ (ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರ) ಯೋಜನೆ ಉದ್ಘಾಟನೆ ಬಳಿಕ ಅವರು ಮಾತನಾಡಿದರು.ಇದನ್ನೂ ಓದಿ: ಜಮೀರ್ ರೀತಿಯ ಹೊಗಳುಭಟ್ಟರ ಮಾತು ಕೇಳಬೇಡಿ: ಸಿದ್ದರಾಮಯ್ಯಗೆ ಸಿ.ಟಿ.ರವಿ ಸಲಹೆ
Advertisement
Advertisement
ಒಟ್ಟು 5,800 ಎಕರೆಯಲ್ಲಿ ಕ್ವಿನ್ ಸಿಟಿಯನ್ನು ಅಭಿವೃದ್ಧಿಪಡಿಸುವ ಉದ್ದೇಶವಿದ್ದು, ಮೊದಲ ಹಂತದಲ್ಲಿ 2,000 ಎಕರೆಯಲ್ಲಿ ಇದನ್ನು ಸಾಕಾರಗೊಳಿಸಲಾಗುವುದು. 5 ಲಕ್ಷ ಜನವಸತಿಯ ಗುರಿಯುಳ್ಳ ವಿನೂತನ ನಗರದ ಪರಿಧಿಯಲ್ಲಿ ಶೇ.40ರಷ್ಟು ಜಾಗವನ್ನು ಉದ್ಯಾನವನಗಳಿಗೆ ಮೀಸಲಿಡಲಾಗಿದೆ. ಜೊತೆಗೆ 0.69 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಘಟಕಕ್ಕೆ 465 ಎಕರೆ, ವರ್ಷಕ್ಕೆ 7 ಸಾವಿರ ಟನ್ ಹಣ್ಣು-ತರಕಾರಿ ಬೆಳೆಯಲು 200 ಎಕರೆ, ಶೇ.50ರಿಂದ 70ರಷ್ಟು ಜಲ ಮರುಪೂರಣ ವ್ಯವಸ್ಥೆ ಇರಲಿದೆ ಎಂದರು.
Advertisement
Advertisement
Karnataka has new address for Knowledge + Wellbeing + Innovation = KWIN CITY.
The 2000 acre city will house:
– Knowledge District
– Health District
– Innovation District
– Research District
KWIN City inaugurated by CM @siddaramaiah and Minister @MBPatil embodies Karnataka’s… pic.twitter.com/XDYCf519JI
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) September 26, 2024
ಉದ್ದೇಶಿತ ನಗರದಲ್ಲಿ ಮೊದಲಿಗೆ ಅತ್ಯುತ್ತಮ ಗುಣಮಟ್ಟದ ಶಾಲಾ ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಅವಕಾಶ ಮಾಡಿಕೊಡಲಾಗುವುದು. ಜೊತೆಗೆ ಜಗತ್ತಿನ ಅಗ್ರ 500 ವಿ.ವಿ.ಗಳು ತಮ್ಮ ಕ್ಯಾಂಪಸ್ ತೆರೆಯಲು ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಉತ್ಕೃಷ್ಟ ದರ್ಜೆಯ ಆಸ್ಪತ್ರೆಗಳು, ವೈದ್ಯಕೀಯ ಸಂಶೋಧನಾ ಸಂಸ್ಥೆಗಳು ಮತ್ತು ವೈದ್ಯಕೀಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು. ಒಟ್ಟಿನಲ್ಲಿ 40 ಸಾವಿರ ಕೋಟಿ ರೂ. ಹೂಡಿಕೆಯ ಯೋಜನೆಯಿಂದ ಒಂದು ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಯೋಜನೆಯ ವೈಶಿಷ್ಟ್ಯಗಳನ್ನು ವಿವರಿಸಿದರು.
A great moment is here! Hon’ble @CMofKarnataka, Sri @siddaramaiah, has unveiled the launch and logo of the futuristic #KWINCity.
A transformative leap towards innovation, development, and growth. Karnataka is ready to inspire the future!#InspiringInnovation #KwinCityLaunch pic.twitter.com/Xr8syiMPlQ
— M B Patil (@MBPatil) September 26, 2024
ಕ್ವಿನ್ ಸಿಟಿಯು ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ಮತ್ತು ಶ್ರೇಷ್ಠತೆಗೆ ಮಾನದಂಡವಾಗಿ ಹೊರಹೊಮ್ಮಲಿದೆ. ಬೆಂಗಳೂರಿನಲ್ಲಿರುವ (Bengaluru) ವಿಜ್ಞಾನ, ತಂತ್ರಜ್ಞಾನ, ಸಂಶೋಧನೆ, ನವೋದ್ಯಮ, ವೈಮಾಂತರಿಕ್ಷ ಮತ್ತು ರಕ್ಷಣಾ ವಲಯಗಳ ಕಾರ್ಯ ಪರಿಸರವನ್ನು ಇದಕ್ಕೆ ಪೂರಕವಾಗಿ ಬಳಸಿಕೊಳ್ಳಲಾಗುವುದು. ಇಲ್ಲಿ ಜ್ಞಾನ, ಆರೋಗ್ಯ, ನಾವೀನ್ಯತೆ ಮತ್ತು ಸಂಶೋಧನೆಗಳು ನಾಲ್ಕು ಪ್ರಮುಖ ವಲಯಗಳಾಗಿದ್ದು, ಮುಂಬರುವ ದಿನಗಳ ಸ್ಮಾರ್ಟ್ ಸಿಟಿಗಳಿಗೆ ಮೇಲ್ಪಂಕ್ತಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಇದನ್ನೂ ಓದಿ: ನಿರುದ್ಯೋಗ ಸಮಸ್ಯೆ, ಯುಜನರ ವಲಸೆಗೆ ಬಿಜೆಪಿ ಆಡಳಿತವೇ ಕಾರಣ – ರಾಹುಲ್ ಗಾಂಧಿ ಕಿಡಿ