ಕಾರವಾರ: ಜಿಲ್ಲೆಯಲ್ಲಿ ಒಂದೇ ದಿನ 8 ಮಂದಿಯಲ್ಲಿ ಮಂಗನ ಕಾಯಿಲೆ (Kyasanur forest disease) ಇರುವುದು ಪತ್ತೆಯಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಮಂಗನಕಾಯಿಲೆ ಪತ್ತೆಯಾಗಿದ್ದು, ಈ ಮೂಲಕ ಕಳೆದ 10 ದಿನದಲ್ಲಿ ಕೆಎಫ್‍ಡಿ ಪ್ರಕರಣ 16ಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಘೋಷಣೆಗಳು ಬೋಗಸ್ ಭರವಸೆ: ರೇಣುಕಾಚಾರ್ಯ
Advertisement
Advertisement
10 ವರ್ಷದ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಸಿದ್ದಾಪುರದ ಕೊರ್ಲಕೈ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಜಿಡ್ಡಿಯಲ್ಲಿ 7 ಪ್ರಕರಣ ಉಳಿದಂತೆ ಇತರೆ ಭಾಗದಲ್ಲಿ 9 ಒಟ್ಟು ಪ್ರಕರಣಗಳು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಸದ್ಯ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ.
Advertisement
ಹೇಗೆ ಹರಡುತ್ತದೆ?: ಕ್ಯಾಸನೂರ ಕಾಯಿಲೆ ಮೂಲತಃ ಪ್ರಾಣಿಗಳ ರೋಗವಾಗಿದ್ದು, ಮುಖ್ಯವಾಗಿ KFDV ವೈರಾಣು ಇರುವ ಉಣ್ಣಿ ಅಥವಾ ಉಣುಗು (Ticks) ಕಚ್ಚಿದಾಗ ರೋಗಕಾರಕ ವೈರಸ್‍ಗಳನ್ನು ಒಂದು ಪ್ರಾಣಿಯಿಂದ ಇನ್ನೊಂದು ಪ್ರಾಣಿಗೆ ಹರಡುತ್ತದೆ. ಸಾಮಾನ್ಯವಾಗಿ ಈ ರೋಗಗ್ರಸ್ತ ಉಣ್ಣೆಗಳು ಮಾನವನನ್ನು ಕಚ್ಚುವುದರಿಂದ ಆಕಸ್ಮಿಕವಾಗಿ ಮಾನವನಿಗೆ ಸೋಂಕು ತಗಲುತ್ತದೆ. ಆದರೆ ಮಾನವನಿಂದ ಮಾನವನಿಗೆ ಈ ಸೋಂಕು ಹರಡುವುದಿಲ್ಲ.