ಬೆಂಗಳೂರು: ಇದೊಂದು ರಾಜಕೀಯ ಪ್ರೇರಿತ ದಾಳಿ ಎಂದು ಕೆಎಎಸ್ ಅಧಿಕಾರಿ ಎಲ್.ಸಿ.ನಾಗರಾಜ್ ಪ್ರತಿಕ್ರಿಯಿಸಿದ್ದಾರೆ.
Advertisement
ಎಸಿಬಿ ದಾಳಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ಅಧಿಕಾರಿಯೊಬ್ಬರು ಬೇಕಂತಲೇ ದಾಳಿ ಮಾಡಿದ್ದಾರೆ. ನಾನು ಪ್ರಮಾಣಿಕವಾಗಿ ಇದ್ದೇನೆ. ಪದೇ ಪದೇ ನನ್ನ ಮೇಲೆ ದಾಳಿ ಮಾಡಿದ್ದಾರೆ. ದಾಳಿಗೆ ಭಯ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ತಾಯಿಯಾಗ್ತಿದ್ದಾರಾ ಪ್ರಿಯಾಂಕಾ ಚೋಪ್ರಾ?
Advertisement
ನನ್ನನ್ನು ಗುರಿಯಾಗಿಸಿ ಇದು 3 ನೇ ಬಾರಿ ದಾಳಿ ಮಾಡಲಾಗಿದೆ. 43 ಲಕ್ಷ ರೂ. ಹಣಕ್ಕೆ ದಾಖಲಾತಿಗಳು ಇವೆ. ನನ್ನ ಪತ್ನಿಗೆ ಸಂಬಂಧಿಸಿದ ಆಸ್ತಿ ಮಾರಾಟ ಮಾಡಲು ಯತ್ನಿಸಿದ್ದೆ. 2.4 ಕೋಟಿಗೆ ಆಸ್ತಿ ಮಾರಾಟ ಮಾಡಿದ್ದೆ. ಅದರ ಹಣವನ್ನು ನಾನು ಪಡೆದಿದ್ದೆ. ಎಲ್ಲಾ ಕೂಡ ವೈಟ್ ಎಂದು ಸ್ಪಷ್ಟಪಡಿಸಿದ್ದಾರೆ.
Advertisement
Advertisement
ನನ್ನ ಅತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅದಕ್ಕೆ ಹಣ ತಂದು ಇಟ್ಟಿದ್ದೆ. ಯಾರೋ ಬೇರೆ ಉದ್ದೇಶ ಇಟ್ಟುಕೊಂಡು ದಾಳಿ ಮಾಡಿದ್ದಾರೆ. ನನ್ನ ನಿಯಂತ್ರಣ ಮಾಡುವ ಉದ್ದೇಶಕ್ಕೆ ದಾಳಿ ನಡೆದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಹೆಚ್ಚಿದ ವಾಯುಮಾಲಿನ್ಯ- ಎಲೆಕ್ಟ್ರಿಕ್, ಸಿಎನ್‌ಜಿ ವಾಹನಗಳ ಸಂಚಾರಕ್ಕಷ್ಟೇ ಅನುಮತಿ
ನೆಲಮಂಗಲ ನಗರದಲ್ಲಿ ಮೂರು ಕಡೆ ಎಸಿಬಿ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ನಡೆಸಿದ್ದರು. ಐಎಂಎ ಪ್ರಕರಣದ ಆರೋಪಿಯೂ ಆಗಿರುವ ಕೆಎಎಸ್ ಅಧಿಕಾರಿ ಎಲ್.ಸಿ.ನಾಗರಾಜು ಹಾಗೂ ಸಂಬಂಧಿಗಳ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಅಪಾರ ಪ್ರಮಾಣದ ನಗದು, ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.