ಮೋಹನ್ ಲಾಲ್ ನಟನೆಯ ಬಹುನಿರೀಕ್ಷಿತ ಸಿನಿಮಾ ‘ಎಲ್ 2 ಎಂಪುರಾನ್’ (L2: Empuraan) ಮಾ.27ರಂದು ರಿಲೀಸ್ ಆಗಿದೆ. ಬಿಡುಗಡೆಯಾಗಿ ಎರಡೇ ದಿನಕ್ಕೆ 100 ಕೋಟಿ ರೂ. ಗಳಿಗೆ ಮಾಡಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಕುರಿತು ಚಿತ್ರತಂಡವೇ ಅಧಿಕೃತವಾಗಿ ತಿಳಿಸಿದೆ. ಇದನ್ನೂ ಓದಿ:‘ಕ್ರಿಶ್ 4’ ಚಿತ್ರಕ್ಕೆ ಹೃತಿಕ್ ರೋಷನ್ ಆ್ಯಕ್ಷನ್ ಕಟ್
ಮಾಲಿವುಡ್ ಸೂಪರ್ ಸ್ಟಾರ್ ಮೋಹನ್ ಲಾಲ್ (Mohan Lal), ನಟಿ ಮಂಜು ವಾರಿಯರ್, ನಟ ಟೊವಿನೋ ಥಾಮಸ್ ನಟಿಸಿರುವ ಈ ಸಿನಿಮಾ ಗೆಲ್ಲಾಪೆಟ್ಟಿಗೆಯಲ್ಲಿ ಉತ್ತಮ ಕಲೆಕ್ಷನ್ ಮಾಡುತ್ತದೆ. ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್ ನಿರ್ದೇಶನ ಈ ಚಿತ್ರವು ಈಗ 100 ಕೋಟಿ ರೂ. ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಇದನ್ನೂ ಓದಿ:ಗೆಲುವಿನ ನಿರೀಕ್ಷೆಯಲ್ಲಿ ಸಲ್ಮಾನ್ ಖಾನ್- ರಶ್ಮಿಕಾ ಜೊತೆಗಿನ ‘ಸಿಕಂದರ್’ ಚಿತ್ರ ನಾಳೆ ರಿಲೀಸ್
View this post on Instagram
ಪೃಥ್ವಿರಾಜ್ ಸುಕುಮಾರನ್ ನಿರ್ದೇಶಿಸಿ ನಟಿಸಿರುವ ‘ಎಲ್ 2 ಎಂಪುರಾನ್’ ಇಂದು ಮಲಯಾಳಂ, ತೆಲುಗು, ತಮಿಳು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ವಿಶ್ವದಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ‘ಲೂಸಿಫರ್’ ಸೀಕ್ವೆಲ್ ಆಗಿರುವುದರಿಂದ ಈ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿತ್ತು. ಪ್ರೇಕ್ಷಕರ ನಿರೀಕ್ಷೆಗೆ ತಕ್ಕಂತೆ ಮೂಡಿ ಬಂದಿದೆ. ಈ ಚಿತ್ರಕ್ಕೆ ಸ್ಯಾಂಡಲ್‌ವುಡ್ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್÷್ಸ ಸಾಥ್ ನೀಡಿದೆ. ಕರ್ನಾಟಕದಾದ್ಯಂತ ಹೊಂಬಾಳೆ ಫಿಲಂಸ್ ಸಂಸ್ಥೆಯ ವಿಜಯ್ ಕಿರಗಂದೂರ್ `ಎಲ್ 2 ಎಂಪುರಾನ್’ ಚಿತ್ರವನ್ನು ಬಿಡುಗಡೆ ಮಾಡಿದೆ.
ಈ ಚಿತ್ರದಲ್ಲಿ ಸ್ಟೀಫನ್ ನೆಡುಂಪಲ್ಲಿ ಪಾತ್ರದಲ್ಲಿ ಮೋಹನ್ ಲಾಲ್ ನಟಿಸಿದ್ದು, ನಿರ್ದೇಶನದ ಜೊತೆಗೆ ಪೃಥ್ವಿರಾಜ್ ಸುಕುಮಾರನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇಂದ್ರಜಿತ್ ಸುಕುಮಾರನ್, ಟೊವಿನೋ ಥಾಮಸ್, ಮಂಜು ವಾರಿಯರ್, ಸಾನಿಯಾ ಅಯ್ಯಪ್ಪನ್, ಸಾಯಿ ಕುಮಾರ್ ಮತ್ತು ಬೈಜು ಸಂತೋಷ್ ತಾರಾಬಳಗದಲ್ಲಿದ್ದಾರೆ.
View this post on Instagram
ಈ ಚಿತ್ರಕ್ಕೆ ಕಥೆ ಮುರಳಿ ಗೋಪಿ ಬರೆದಿದ್ದಾರೆ. ದೀಪಕ್ ದೇವ್ ಸಂಗೀತ ಸಂಯೋಜನೆ ಮಾಡಿದ್ರೆ, ಸುಜಿತ್ ವಾಸುದೇವ್ ಅವರ ಛಾಯಾಗ್ರಹಣವಿದೆ. ಸುರೇಶ್ ಬಾಲಾಜೆ ಮತ್ತು ಜಾರ್ಜ್ ಪಯಸ್ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ. ಇನ್ನೂ 2019ರಲ್ಲಿ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿದ್ದ ‘ಲೂಸಿಫರ್’ ಚಿತ್ರಕ್ಕೆ ಪೃಥ್ವಿರಾಜ್ ಸುಕುಮಾರ್ ನಿರ್ದೇಶನ ಮಾಡಿದ್ದರು.