ಬೆಂಗಳೂರು: ಥಿಯೇಟರ್‌ಗಳಲ್ಲಿ ನಾವು ರಾಜೀಯಾಗುವುದಿಲ್ಲ ಎಂದು ರಾಕಿಂಗ್ ಸ್ಟಾರ್ ಯಶ್ ಬಾಲಿವುಡ್ ನಟ ಅಮೀರ್ ಖಾನ್ ಗೆ ಉತ್ತರಿಸಿದ್ದಾರೆ.
Advertisement
ಕೆಜಿಎಫ್ ಚಾಪ್ಟರ್-2 ರಿಲೀಸ್ ದಿನವೇ `ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಸಹ ರಿಲೀಸ್ ಆಗುತ್ತಿದೆ. ಈ ಹಿನ್ನೆಲೆ ಅಮೀರ್ ಖಾನ್ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಯಶ್ ಅವರನ್ನು ಟೆಕ್ಸ್ಟ್ ಮೆಸೇಜ್ ನಲ್ಲಿ ಕ್ಷಮೆ ಕೇಳಿಕೊಂಡಿದ್ದರು.
Advertisement
ಅದಕ್ಕೆ ಪ್ರತಿಕ್ರಿಯಿಸಿದ ಯಶ್, ಅಮೀರ್ ಜೀ ನಿಮ್ಮ ಅನಿವಾರ್ಯತೆ ನಮಗೆ ಅರ್ಥವಾಗುತ್ತೆ. ಪರವಾಗಿಲ್ಲ ನೀವೂ ಅಂದೇ ಸಿನಿಮಾವನ್ನು ರಿಲೀಸ್ ಮಾಡಬಹುದು. ನೀವು ಬಾಲಿವುಡ್‍ಗೆ ಹಿರಿಯರು. ನಿಮ್ಮ ಕೋರಿಕೆಯನ್ನು ತಿರಸ್ಕರಿಸಲಾಗದು. ಆದರೆ ಥಿಯೇಟರ್‍ಗಳಲ್ಲಿ ನಾವು ರಾಜಿಯಾಗುವುದಿಲ್ಲ. ನಮ್ಮ ನಿರ್ಮಾಪಕರಿಗೂ ಕಷ್ಟವಾಗಬಾರದಲ್ಲವೇ? ನಮ್ಮ ಹಂಚಿಕೆದಾರರ ಜೊತೆ ಈ ಬಗ್ಗೆ ಒಂದು ಸಲ ಮಾತನಾಡುತ್ತೇನೆ. ನಿಮ್ಮ ಬೆಂಬಲಕ್ಕೆ ನಾನಿರುತ್ತೇನೆ. ನೀವು ಸಹಕರಿಸಿ ಎಂದು ಉತ್ತರಿಸಿದ್ದಾರೆ. ಇದನ್ನೂ ಓದಿ: ಯಶ್, ಪ್ರಶಾಂತ್ ನೀಲ್ ಬಳಿ ಕ್ಷಮೆ ಕೇಳಿದ ಅಮೀರ್ ಖಾನ್
Advertisement
Advertisement
ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಅಮೀರ್ ನಾನು ಬೇರೆಯವರನ್ನು ಅತಿಕ್ರಮಿಸಿಕೊಳ್ಳುತ್ತಿದ್ದೇನೆ ಎಂಬ ಭಾವನೆ ಸೃಷ್ಟಿ ಆಗುವುದನ್ನು ದ್ವೇಷಿಸ್ತೇನೆ. ಆದರೆ ನಾನು ಮೊದಲ ಬಾರಿಗೆ ಸಿಖ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಕಾರಣ ಏಪ್ರಿಲ್ 14ರಂದು ಬೈಸಾಖಿ ದಿನ ಸಿನಿಮಾ ರಿಲೀಸ್ ಮಾಡುವುದು ಸೂಕ್ತ ಎಂದು ಭಾವಿಸಿದ್ದೆ. ಹೀಗಾಗಿ ನಾನು ಕೆಜಿಎಫ್ ನಿರ್ಮಾಪಕ, ನಿರ್ದೇಶಕ ಮತ್ತು ಯಶ್ ಅವರಲ್ಲಿ ಕ್ಷಮೆ ಕೇಳಿದ್ದೇನೆ ಎಂದಿದ್ದರು.
ಬೈಸಾಖಿ ದಿನ ನನ್ನ ಸಿನಿಮಾ ಬಿಡುಗಡೆಯಾದರೆ ಸೂಕ್ತ ಎಂದು ಅವರಿಗೆ ತಿಳಿಸಿದೆ. ಅವರು ನನ್ನ ಅಭಿಪ್ರಾಯವನ್ನು ಒಪ್ಪಿಕೊಂಡರು. ಅವರ ಸಿನಿಮಾ ರಿಲೀಸ್ ಇದ್ದರೂ ಅದೇ ನೀವು ಸಿನಿಮಾ ಬಿಡುಗಡೆ ಮಾಡಿ ಎಂದು ನನಗೆ ಹೇಳಿದರು. ಅವರ ಸ್ಪಂದನೆ ನನಗೆ ಇಷ್ಟ ಆಯಿತು. ನನ್ನ ಯೋಚನೆಗೆ ಯಶ್ ತುಂಬಾನೇ ಬೆಂಬಲವಾಗಿ ನಿಂತರು ಎಂದು ಅಮೀರ್ ಹೇಳಿಕೊಂಡಿದ್ದರು. ಇದನ್ನೂ ಓದಿ: ಅಭಿಮಾನಿಯಿಂದ ಅಪ್ಪುಗೆ ಅಯ್ಯಪ್ಪನ ದರ್ಶನ