ರಾಯಚೂರು: ಸರ್ಕಾರಿ ಆಸ್ಪತ್ರೆಯ ಮಹಿಳಾ ಲ್ಯಾಬ್ ಟೆಕ್ನಿಷಿಯನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು (Police) ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸಮೀರ್ ಸೋಹೆಲ್ ಹಾಗೂ ಮೊಹಮ್ಮದ್ ಕೈಫ್ ಎಂದು ಗುರುತಿಸಲಾಗಿದೆ. ಆರೋಪಿಗಳು ಅ.26 ರಂದು ಜಿಲ್ಲೆಯ ಲಿಂಗಸುಗೂರಿನ (Lingsugur) ಹಟ್ಟಿಯಲ್ಲಿ ಮಂಜುಳಾ (45) ಎಂಬವರನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೈದಿದ್ದರು. ಆರೋಪಿಗಳು ಕೊಲೆಗೂ ಮುನ್ನ ಮಹಿಳೆಯ ಬ್ಲಾಕ್ ಮೇಲ್ ಮಾಡಿ ಹಣ ಹಾಗೂ ಚಿನ್ನಾಭರಣ ದೋಚಿದ್ದರು. ಇದನ್ನೂ ಓದಿ: ವಯನಾಡಿನಲ್ಲಿ ನಕ್ಸಲರು ಪೊಲೀಸರ ನಡುವೆ ಗುಂಡಿನ ಚಕಮಕಿ – ಕೊಡಗಿನಲ್ಲಿ ಹೈ ಅಲರ್ಟ್
ಮೃತಳ ಸಹೋದರ ಅಸಹಜ ಸಾವು ಎಂದು ಮೊದಲು ಪ್ರಕರಣ ದಾಖಲಿಸಿದ್ದ. ಬಳಿಕ ಮೃತಳ ಪುತ್ರ ಹಟ್ಟಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿದ್ದ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಬಂಧಿತ ಆರೋಪಿಗಳಿಂದ 22,51,965 ರೂ. ಮೌಲ್ಯದ ವಸ್ತುಗಳನ್ನ ಪೊಲೀಸರು ಜಪ್ತಿ ಮಾಡಿದ್ದಾರೆ. 7.49 ಲಕ್ಷ ರೂ. ನಗದು, 9.77 ಲಕ್ಷ ರೂ. ಮೌಲ್ಯದ 163 ಗ್ರಾಂ ಚಿನ್ನಾಭರಣ, ಒಂದು ಕಾರು ಹಾಗೂ ಒಂದು ಬೈಕ್ ಜಪ್ತಿ ಮಾಡಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದನ್ನೂ ಓದಿ: KEA ಪರೀಕ್ಷೆ – ಮಂಗಳಸೂತ್ರ, ಕಾಲುಂಗರಕ್ಕೆ ಮಾತ್ರ ವಿನಾಯಿತಿ : ಟಫ್ ರೂಲ್ಸ್ ಏನು?