– ಕೊಡಗು ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ

ಮಡಿಕೇರಿ: ಕಾಡಾನೆ ದಾಳಿಗೆ (Wild Elephant Attack) ಕೂಲಿ ಕಾರ್ಮಿಕ ಬಲಿಯಾಗಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ (Virajpet) ತಾಲೂಕಿನ ಸಿದ್ದಾಪುರ ಸಮೀಪದ ಶಿಲ್ಪಿ ಎಸ್ಟೇಟ್‌ನಲ್ಲಿ ನಡೆದಿದೆ.
ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಕಾಡಾನೆ ದಾಳಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಗೋಪಾಲನ್ ಪಾವರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಕಾರ್ಮಿಕ ಜಾದವ್ ಪಾವರಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿದ್ದಾರೆ. ಅಲ್ಲದೇ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಕಾಡಾನೆ ದಾಳಿಯಿಂದ ಎಸ್ಟೇಟ್ ಕಾರ್ಮಿಕರಲ್ಲಿ ಆತಂಕ ಮನೆಮಾಡಿದೆ. ಇದನ್ನೂ ಓದಿ: ‘ಉಚಿತ ಎಲೆಕ್ಟ್ರಿಕ್ ಸ್ಟೌ’ ಸುಳ್ಳು ಸಂದೇಶವನ್ನು ನಂಬಬೇಡಿ: ಪ್ರಹ್ಲಾದ್ ಜೋಶಿ ಎಚ್ಚರಿಕೆ

ಇನ್ನು ಕಾಡಾನೆ ದಾಳಿಗೆ ಕಾರ್ಮಿಕ ಬಲಿಯಾದ ಹಿನ್ನೆಲೆ ಮಲ್ದಾರೆ ಗ್ರಾಮದಲ್ಲಿ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದಾರೆ. ನಿರಂತರ ಕಾಡಾನೆ ದಾಳಿಯಿಂದ ಮನೆಯಿಂದ ಹೊರಗೆ ಹೋಗದ ಪರಿಸ್ಥಿತಿ ಎದುರಾಗಿದೆ ಎಂದು ಅರಣ್ಯ ಇಲಾಖೆಯ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಐಪಿಎಸ್ ಅಧಿಕಾರಿಯ ತಾಯಿ ಶವವಾಗಿ ಪತ್ತೆ – ಚಿನ್ನಾಭರಣ ನಾಪತ್ತೆ, ಕೊಲೆ ಶಂಕೆ
ಅಲ್ಲದೇ ಕೊಡಗು ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಹಾಕಿದೆ. ಏಕಾಏಕಿ ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ತಳ್ಳಾಟ-ನೂಕಾಟ ನಡೆದಿದೆ. ಅರಣ್ಯ ಭವನದ ಬಾಗಿಲಿಗೆ ಬ್ಯಾರಿಕೇಡ್ ಹಾಕಿ ನಿರ್ಬಂಧ ಹೇರಲಾಗಿದೆ. ಕಾಂಗ್ರೆಸ್ ಸರ್ಕಾರ ಹಾಗೂ ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನಾಕಾರರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ʻಎನ್‌ಕೌಂಟರ್ʼ ಸದ್ದು – ವಿಪಕ್ಷಗಳು ನಿಗಿ ನಿಗಿ, ಗದ್ದಲ ಕೋಲಾಹಲ
