ಮಡಿಕೇರಿ: ಕಳೆದ ಎರಡು ದಿನಗಳ ಹಿಂದೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ (Virajpete) ತಾಲೂಕಿನ ಪಲಿಬೆಟ್ಟ ಗ್ರಾಮದ ಮಸ್ಕಲ್ ಕಾಫಿತೋಟದಲ್ಲಿ ಕಾಡಾನೆ (Wild Elephant) ದಾಳಿಗೆ ಒಳಗಾಗಿದ್ದ ಕಾರ್ಮಿಕ ಬಾಬಿ ಚಿಕಿತ್ಸೆ ಫಲಕಾರಿಯಾಗದೇ ಮೈಸೂರಿನ (Mysuru) ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಎರಡು ದಿನಗಳ ಹಿಂದೆ ಬಾಬಿ ಮಸ್ಕಲ್ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಕಾಡಾನೆಯೊಂದು ಅವರ ಮೇಲೆ ದಾಳಿ ನಡೆಸಿತ್ತು. ಇದರಿಂದ ಗಂಭೀರ ಗಾಯಗೊಂಡಿದ್ದ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಬಾಬಿ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಇದೇ ತಿಂಗಳು ಉದ್ಘಾಟನೆಗೊಳ್ಳಬೇಕಿದ್ದ ಸಮುದಾಯ ಭವನದಲ್ಲಿ ಡಬಲ್ ಮರ್ಡರ್
Advertisement
Advertisement
ಮೃತ ಬಾಬಿ ಕುಟುಂಬಕ್ಕೆ ವಿರಾಜಪೇಟೆಯ ನೂತನ ಶಾಸಕ ಎ.ಎಸ್ ಪೊನ್ನಣ್ಣ (M.S.Ponnanna) ದೂರವಾಣಿ ಮೂಲಕ ಸಂಪರ್ಕ ಮಾಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ತಕ್ಷಣ ತುರ್ತು ಪರಿಹಾರ ನೀಡುವಂತೆ ಅರಣ್ಯ ಇಲಾಖೆಗೆ (Forest Department) ಸೂಚನೆ ನೀಡಿದ ಅವರು, ಸದ್ಯದಲ್ಲೇ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾಡಾನೆಗಳ ಉಪಟಳದ ಬಗ್ಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ದೃಷ್ಟಿಯಿಂದ ಆದಷ್ಟು ಬೇಗ ಸಭೆ ಕರೆಯಬೇಕು ಎಂದರು. ಇದನ್ನೂ ಓದಿ: ಮಹಿಳೆಯ ಕತ್ತು ಕೊಯ್ದು ಭೀಕರ ಹತ್ಯೆಗೈದ ಪತಿಯ ಅಣ್ಣ!
Advertisement
Advertisement
ಕಾಫಿ ತೋಟದಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರು ಕಳೆದ ಒಂದು ವಾರದಿಂದ ಕಾಫಿ ತೋಟಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದರು. ಅರಣ್ಯ ಇಲಾಖೆ ಸಿಬ್ಬಂದಿಗಳು ಕಾಡಾನೆಗಳನ್ನು ಬೇರೆಡೆಗೆ ಓಡಿಸುವ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಅಪ್ರಾಪ್ತ ಮಕ್ಕಳ ಮದುವೆಗೆ ಮುಂದಾಗಿದ್ದ ಪತ್ನಿ ಕೊಂದು ಪೊಲೀಸರಿಗೆ ಶರಣಾದ ಪತಿ