ರಾಯಚೂರು: ಜಿಲ್ಲೆಯ ಶಕ್ತಿನಗರದಲ್ಲಿರುವ ಆರ್‌ಟಿಪಿಎಸ್‌ನಲ್ಲಿ ಅವಘಡ ಸಂಭವಿಸಿದ್ದು, ಗುತ್ತಿಗೆ ಕಾರ್ಮಿಕನೋರ್ವ ಕಲ್ಲಿದ್ದಲು ಶಾಖಕ್ಕೆ ಸುಟ್ಟು ಕರಕಲಾದ ದುರಂತ ನಡೆದಿದೆ.
ಓರಿಸ್ಸಾ ಮೂಲದ ದೀಪಕ್ ನಾಯಕ್(27) ಮೃತ ಕಾರ್ಮಿಕ. ಗುತ್ತಿಗೆ ಆಧಾರದ ಮೇಲೆ ದೀಪಕ್ ಆರ್‌ಟಿಪಿಎಸ್‌ನಲ್ಲಿ ಕೆಲಸ ಮಾಡುತ್ತಿದ್ದನು. ಕಲ್ಲಿದ್ದಲು ಬಂಕರ್‌ನಲ್ಲಿ ದೀಪಕ್ ಕೆಲಸ ಮಾಡುವಾಗ ಈ ಘಟನೆ ನಡೆದಿದೆ. ರಾತ್ರಿ ಸುಮಾರು 11:30ರ ವೇಳೆಗೆ ಈ ದುರಂತ ನಡೆದಿದೆ ಎನ್ನಲಾಗಿದೆ. ರಾತ್ರಿ ತನ್ನ ಪಾಳಿ ಸಮಯ ಮುಗಿದ ಮೇಲೂ ಕಾರ್ಮಿಕ ಹೆಚ್ಚುವರಿ ಕೆಲಸ ಮಾಡುತ್ತಿದ್ದ ವೇಳೆ ಕಲ್ಲಿದ್ದಲು ಶಾಖಕ್ಕೆ ಸಾವನ್ನಪ್ಪಿದ್ದಾನೆ.
Advertisement
Advertisement
ಅಧಿಕಾರಿಗಳ ನಿರ್ಲಕ್ಷ್ಯವೇ ಕಾರ್ಮಿಕನ ಸಾವಿಗೆ ಕಾರಣ. ಅಧಿಕಾರಿಗಳು ಯಾವುದೇ ಸುರಕ್ಷತಾ ಕ್ರಮಗಳನ್ನು ಕಾರ್ಮಿಕರಿಗೆ ಒದಗಿಸಿದೆ ನಿರ್ಲಕ್ಷ್ಯ ತೋರಿದ್ದಾರೆ. ಆದ್ದರಿಂದಲೇ ಕಾರ್ಮಿಕ ಸಾವನ್ನಪ್ಪಿದ್ದಾನೆ ಎಂದು ಇತರೆ ಕಾರ್ಮಿಕರು ಆರೋಪಿಸಿದ್ದಾರೆ. ಸದ್ಯ ಈ ಸಂಬಂಧ ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.