9 ಸಾವಿರ ಲಂಚಕ್ಕೆ ಬೇಡಿಕೆ – ಲೋಕಾಯುಕ್ತಕ್ಕೆ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್

Public TV
1 Min Read
Karnataka Lokayukta

ಬೆಂಗಳೂರು: 9 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ರೆಡ್‌ಹ್ಯಾಂಡಾಗಿ ಲೋಕಾಯುಕ್ತ ಪೊಲೀಸರ (Lokayukta Police) ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

Money

ಹೋಟೆಲ್‌ವೊಂದರ ಪರವಾನಗಿ (Hotel License) ಕೊಡಲು ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ಭೋಪಾಲ್ 9 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟದ್ದ. ಈ ಬಗ್ಗೆ ಮಂಗಳೂರು ಮೂಲದ ಹೋಟೆಲ್ ಮಾಲೀಕ ದೀಕ್ಷಿತ್ ಅವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಇದನ್ನೂ ಓದಿ: ಬೆಂಗ್ಳೂರಲ್ಲಿ ಕಾಲರಾ ಪತ್ತೆ ಬೆನ್ನಲ್ಲೇ ಪಿಜಿ ಅಸೋಸಿಯೇಷನ್‍ನಿಂದ ಪ್ರತ್ಯೇಕ ಗೈಡ್‍ಲೈನ್ಸ್

ಲಂಚ ಪಡೆಯುತ್ತಿದ್ದಾಗಲೇ ಕಾರ್ಮಿಕ ಭವನದಲ್ಲೇ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಸೈದ್ಧಾಂತಿಕವಾಗಿ ಇಬ್ಬರಿಗೂ ಹೊಂದಾಣಿಕೆ ಆಗಲ್ಲ: ಕಾಂಗ್ರೆಸ್‌ ಶಾಸಕಿ ಪತ್ನಿಯಿದ್ದ ಮನೆ ಬಿಟ್ಟು ಹೋದ ಬಿಎಸ್‌ಪಿ ಅಭ್ಯರ್ಥಿ

Share This Article