ಬೆಂಗಳೂರು: ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಬರಿಗೈನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕನೊಬ್ಬನ ಬೆರಳುಗಳು ಮಷಿನ್ಗೆ ಸಿಲುಕಿ ತುಂಡಾದ ಘಟನೆ ಕಾಮಾಕ್ಷಿಪಾಳ್ಯದಲ್ಲಿ ಇಂದು ನಡೆದಿದೆ.
ಕಾಮಾಕ್ಷಿಪಾಳ್ಯದ ತಿಮ್ಮೇಗೌಡ ಎಂಬ ವ್ಯಕ್ತಿಗೆ ಸೇರಿದ ಪ್ಲ್ಯಾಸ್ಟಿಕ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಅನಂತ್ ಬರ್ಮನ್ ಎಂಬ ಯುವಕ ನಾಲ್ಕು ಬೆರಳಗಳನ್ನು ಕಳೆದುಕೊಂಡಿದ್ದಾನೆ. ಈ ಫ್ಯಾಕ್ಟರಿಯಲ್ಲಿ ಕಾರ್ಮಿಕರಿಗೆ ತಿಮ್ಮೇಗೌಡ ಸುರಕ್ಷತಾ ವಸ್ತ್ರ ನೀಡದೆ ಕೆಲಸ ಮಾಡಿಸಿಕೊಳ್ಳುತ್ತಿದ್ದರು. ಅನಂತ್ ಬರಿಗೈಯಲ್ಲಿ ಪ್ಲಾಸ್ಟಿಕ್ ಅನ್ನು ಮೆಷಿನ್ಗೆ ಹಾಕುವ ವೇಳೆ ಆತನ ಬೆರಳುಗಳು ಸಿಲುಕಿ ತುಂಡಾಗಿದೆ. ಕೂಡಲೆ ಗಾಯಗೊಂಡ ಅನಂತ್ನನ್ನು ಸ್ಥಳೀಯ ಆಸ್ಪತ್ರೆಗೆ ಸಹೋದರ ಹೇಮಂತ್ ದಾಖಲಿಸಿದ್ದಾನೆ.
Advertisement
Advertisement
ಈ ಸಂದರ್ಭದಲ್ಲಿ ಸಹೋದರನ ಚಿಕಿತ್ಸಾ ವೆಚ್ಚಕ್ಕಾಗಿ ಹೇಮಂತ್ ಮಾಲೀಕನ ಬಳಿ ಹಣ ಕೇಳಲು ಹೋದಾಗ, ಮಾಲೀಕ ಆತನಿಗೆ ಬಾಯಿಗೆ ಬಂದಂತೆ ಬೈದು, ಚಿಕಿತ್ಸಾ ವೆಚ್ಚ ಭರಿಸಲು ನಿರಾಕರಿಸಿದ್ದಾನೆ. ಬಳಿಕ ಮಾಲೀಕ ಹಾಗೂ ಹೇಮಂತ್ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಚಿಕಿತ್ಸಾ ವೆಚ್ಚ ಭರಿಸದಿದ್ದರೆ ಪೊಲೀಸರಿಗೆ ದೂರು ನೀಡೋದಾಗಿ ಹೇಮಂತ್ ಹೇಳಿದ್ದಾರೆ. ಈ ವೇಳೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಮಾಲೀಕ ಬೆದರಿಕೆ ಹಾಕಿದ್ದಾನೆ ಎಂದು ಹೇಮಂತ್ ಆರೋಪಿಸಿದ್ದಾರೆ.
Advertisement
ಇದ್ಯಾವುದಕ್ಕು ಹೆದರದ ಹೇಮಂತ್ ನ್ಯಾಯ ಕೊಡಿಸುವಂತೆ ಕಾಮಾಕ್ಷಿಪಾಳ್ಯದ ಪೊಲೀಸ್ ಠಾಣೆಯಲ್ಲಿ ತಿಮ್ಮೇಗೌಡ ವಿರುದ್ಧ ದೂರು ನೀಡಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv