Connect with us

ಮಲಗಿದ್ದ ಇಬ್ಬರು ಮಕ್ಕಳನ್ನು ಕೊಡಲಿಯಿಂದ ಬರ್ಬರವಾಗಿ ಕೊಂದ ತಂದೆ!

ಮಲಗಿದ್ದ ಇಬ್ಬರು ಮಕ್ಕಳನ್ನು ಕೊಡಲಿಯಿಂದ ಬರ್ಬರವಾಗಿ ಕೊಂದ ತಂದೆ!

ಭೋಪಾಲ್: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಂದೆಯೇ ತನ್ನ ಇಬ್ಬರು ಮಕ್ಕಳನ್ನು ಕೊಡಲಿಯಿಂದ ಕೊಲೆ ಮಾಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ನಡೆದಿದೆ.

ಮಗಳು ಕಾಶಿಶ್(14) ಮತ್ತು ಮಗ ಸಾಹೀಲ್(12) ತಂದೆಯಿಂದ ಕೊಲೆಯಾದ ದುರ್ದೈವಿಗಳು. ಕೊಟ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಖಿರಾನಿ ಫಾಟಾಕ್ ಪ್ರದೇಶದಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಆರೋಪಿ ರಾಕೇಶ್ ನಿಶಾದ್(36) ಈ ಕೃತ್ಯವೆಸಗಿದ್ದಾನೆ. ಭಾನುವಾರ ರಾತ್ರಿ ಮಲಗಿದ್ದ ಕಾಶಿಶ್ ಮತ್ತು ಸಾಹೀಲ್ ಇಬ್ಬರನ್ನೂ ಕೊಡಲಿಯಿಂದ ಕೊಲೆ ಮಾಡಿದ್ದಾನೆ. ಮಕ್ಕಳನ್ನು ಕೊಂದ ನಂತರ ಆರೋಪಿ ತಂದೆ ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ನಿಶಾದ್ ಪತ್ನಿ ಫುಲ್ವಾಟಿ ಎಚ್ಚರಗೊಂಡು ಪತಿ ಮನೆಯಿಂದ ಓಡಿಹೋಗುತ್ತಿರುವುದನ್ನು ಗಮನಿಸಿ ತಕ್ಷಣ ಮಕ್ಕಳ ರೂಮಿಗೆ ಹೋಗಿದ್ದಾರೆ. ಅಲ್ಲಿ ತನ್ನ ಇಬ್ಬರು ಮಕ್ಕಳು ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ನೋಡಿ ಆಘಾತಗೊಂಡಿದ್ದು, ನಂತರ ಪೊಲೀಸ್ ಠಾಣೆಗೆ ಹೋಗಿ ದೂರು ಸಲ್ಲಿಸಿದ್ದಾರೆ. ಪತ್ನಿಯ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿ ತಂದೆಯನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ಕೊಟ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಶೈಲೇಶ್ ಮಿಶ್ರಾ ತಿಳಿಸಿದ್ದಾರೆ.

Advertisement
Advertisement