ಚಿಕ್ಕಬಳ್ಳಾಪುರ: ಕೆಮಿಕಲ್ (Chemical) ದುರ್ವಾಸನೆಯಿಂದ ಉಸಿರುಗಟ್ಟಿ, ತಲೆ ಸುತ್ತು ಬಂದು ಲಾರಿಯಿಂದ ಕೆಳಗೆ ಬಿದ್ದು ಕಾರ್ಮಿಕನೋರ್ವ ದುರ್ಮರಣಕ್ಕೀಡಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಬಿಹಾರ ಮೂಲದ ಮಹಮದ್ ರಜೀಕ್ (33) ಮೃತ ಕಾರ್ಮಿಕ. ಘಟನೆಯಲ್ಲಿ ವಿಕಾಸ್ ಹಾಗೂ ಸೋನು ಎಂಬ ಸಹ ಕಾರ್ಮಿಕರು (labours) ಉಸಿರಾಟದ ಸಮಸ್ಯೆಯಿಂದ (Breathing problem) ಅಸ್ವಸ್ಥಗೊಂಡು ಆಸ್ಪತ್ರೆ ಪಾಲಾಗಿದ್ದಾರೆ. ಇದನ್ನೂ ಓದಿ: ಪ್ರೀತಿ ನಿರಾಕರಿಸಿದ್ದಕ್ಕೆ ನೂರಾರು ಜನರ ಮುಂದೆ ಯುವತಿಯ ಬರ್ಬರ ಹತ್ಯೆ – ಆರೋಪಿಗೆ ಧರ್ಮದೇಟು
Advertisement
Advertisement
ಮಹಮದ್ ರಜೀಕ್ ಮೂಲತಃ ಬಿಹಾರದವನು, ಕಳೆದ 5 ವರ್ಷಗಳ ಹಿಂದೆ ಹೆಂಡತಿಯೊಂದಿಗೆ ಕೂಲಿ ಕೆಲಸ ಹರಸಿ ಚಿಕ್ಕಬಳ್ಳಾಪುರಕ್ಕೆ ಬಂದಿದ್ದ. ನಗರ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿನ ಮಾಲೀಕ ಶ್ರೀನಿವಾಸಮೂರ್ತಿ ಎಂಬುವವರಿಗೆ ಸೇರಿದ ರಾಮ್ ಕೀ ಕೆಮಿಕಲ್ ತಯಾರಿಕಾ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ. ಈತನ ಜೊತೆ ಸೋನು ಹಾಗೂ ವಿಕಾಸ್ ಸಹ ಕೆಲಸ ಮಾಡ್ತಿದ್ರು. ಇದನ್ನೂ ಓದಿ: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ನಟ ಕಿಶೋರ್ ನೇಮಕ
Advertisement
Advertisement
ಎಂದಿನಂತೆ ಬುಧವಾರ ಸಂಜೆ ಫ್ಯಾಕ್ಟರಿಗೆ ಕೆಮಿಕಲ್ ವೇಸ್ಟ್ ತುಂಬಿಕೊಂಡು ಹೋಗಲು ಟ್ಯಾಂಕರ್ ಲಾರಿ ಬಂದಿದೆ. ಈ ವೇಳೆ ಟ್ಯಾಂಕರ್‌ನ ಮೇಲ್ಭಾಗದ ಕ್ಯಾಪ್ ಒಪನ್ ಆಗಿದೆ. ಇದರಿಂದ ಕೆಮಿಕಲ್ ದುರ್ವಾಸನೆ ಹೊರಸೂಸಿದ್ದು, ಏಕಾಏಕಿ ಮೂವರಿಗೂ ಉಸಿರುಗಟ್ಟಿದಂತಾಗಿದೆ. ತಲೆ ಸುತ್ತು ಬಂದು ಲಾರಿಯಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಮಹಮದ್ ರಜೀಕ್ ತಲೆಗೆ ಗಂಭೀರ ಗಾಯವಾಗಿ ಸಾವನ್ನಪ್ಪಿದ್ರೆ ವಿಕಾಸ್ ಹಾಗೂ ಸೋನು ಉಸಿರಾಟದ ಸಮಸ್ಯೆಗೆ ತುತ್ತಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ನಂತರ ಲಾರಿ ಚಾಲಕ ಲಾರಿಯೊಂದಿಗೆ ಎಸ್ಕೇಪ್ ಆಗಿದ್ದಾನೆ. ಮೃತದೇಹವನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯೆ ಶವಾಗರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಇನ್ನೂ ಮೃತದೇಹವನ್ನ ಮೃತನ ಸ್ವಗ್ರಾಮ ಬಿಹಾರಕ್ಕೆ ಕಳುಹಿಸಿಕೊಡಲು ತಯಾರಿ ಮಾಡಲಾಗಿದೆ. ಕೆಮಿಕಲ್ ಕಾರ್ಖಾನೆ ಮಾಲೀಕ ಶ್ರೀನಿವಾಸಮೂರ್ತಿ ಮೃತರ ಜೊತೆಗಾರರ ಜೊತೆ ಮಧ್ಯಸ್ಥಿಕೆ ಮಾಡಿಸಿ ಪ್ರಕರಣ ಮುಚ್ಚಿ ಹಾಕಿವ ಹುನ್ನಾರ ಸಹ ನಡೆಸಿದ್ರು ಎಂಬ ಆರೋಪ ಕೇಳಿಬಂದಿದೆ. ಆದ್ರೆ ಕಾರ್ಮಿಕ ಇಲಾಖಾಧಿಕಾರಿಗಳಿಗೆ ʻಪಬ್ಲಿಕ್ ಟಿವಿʼ ಮಾಹಿತಿ ಮುಟ್ಟಿಸಿದ್ದು ಸ್ಥಳಕ್ಕೆ ಬಂದ ಅಧಿಕಾರಿಗಳು ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.
ಮಾಲೀಕನ ನಿರ್ಲಕ್ಷ್ಯ ಆರೋಪದಡಿ ಕಾರ್ಮಿಕನ ಸಾವು ಸಂಭವಿಸಿದ್ದು, ನಂದಿಬೆಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇನ್ನೂ ಕಾರ್ಮಿಕ ಇಲಾಖೆ ಸಹ ಕಾರ್ಮಿಕರಿಗೆ ಬೇಕಾದ ಯಾವುದೇ ಸುರಕ್ಷತಾ ಕ್ರಮಗಳನ್ನ ಕೈಗೊಂಡಿಲ್ಲ ಅಂತ ಮಾಲೀಕನ ಮೇಲೆ ಕ್ರಮಕ್ಕೆ ಮುಂದಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ತ್ರಿಬಲ್ ಮರ್ಡರ್ ಕೇಸ್ – ಎರಡನೇ ಪತ್ನಿ, ಮಲ ಮಗಳ ಮೇಲೆ ಅಕ್ರಮ ಸಂಬಂಧ ಅನುಮಾನ