ಬಾಗಲಕೋಟೆ: ಬೀಳಗಿ ಪಟ್ಟಣದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ(Bilagi Residential School) ಅವ್ಯವಸ್ಥೆಗಳನ್ನು ಖಂಡಿಸಿ, ಶಾಲೆಯ ಪ್ರಾಂಶುಪಾಲರು ಹಾಗೂ ನಿಲಯ ಪಾಲಕರನ್ನು ಕೂಡಲೇ ಅಮಾನತುಗೊಳಿಸುವಂತೆ ಆಗ್ರಹಿಸಿ ದಲಿತ ಮತ್ತು ಕನ್ನಡಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ (Protest) ನಡೆಸಲಾಯಿತು.
ವಸತಿ ನಿಲಯದ ಪಾಲಕ ಎನ್.ಆರ್. ಹುದ್ದಾರ ಹಾಗೂ ಪ್ರಾಂಶುಪಾಲ ಎಲ್.ಎ. ಬಿರಾದಾರ ಅವರ ನಿರ್ಲಕ್ಷ್ಯ ಧೋರಣೆಯಿಂದಾಗಿ ವಿದ್ಯಾರ್ಥಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.
ವಿದ್ಯಾರ್ಥಿಗಳಿಗೆ ಸರ್ಕಾರದ ನಿಯಮಾವಳಿ ಪ್ರಕಾರ ಗುಣಮಟ್ಟದ ಹಾಗೂ ಪೌಷ್ಟಿಕ ಆಹಾರವನ್ನು ನೀಡದೆ ಕಳಪೆ ಆಹಾರ ವಿತರಿಸಲಾಗುತ್ತಿದೆ. ಶೌಚಾಲಯ, ಶುದ್ಧ ಕುಡಿಯುವ ನೀರು ಸೇರಿದಂತೆ ಕನಿಷ್ಠ ಮೂಲಸೌಕರ್ಯಗಳಿಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಬೇಜವಾಬ್ದಾರಿಯಿಂದಾಗಿ ಮುಗ್ಧ ವಿದ್ಯಾರ್ಥಿಗಳ ಆರೋಗ್ಯ ಮತ್ತು ಜೀವದ ಜೊತೆ ಅಧಿಕಾರಿಗಳು ಚೆಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಕಾನ್ಪುರದಲ್ಲಿ ತರಬೇತಿ ವಿಮಾನ ಪತನ – ಕರ್ನಾಟಕದ ಪೈಲಟ್ ಸೇರಿ ಇಬ್ಬರು ದುರ್ಮರಣ
