ಬೆಂಗಳೂರು: ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದು ಪ್ರೇಯಿಸಿ ಕೂಡ ಆತ್ಮಹತ್ಯೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ರಾಚೇನಹಳ್ಳಿಯಲ್ಲಿ (Rachenahalli) ನಡೆದಿದೆ.
ಮೃತರನ್ನು ಜಾನ್ಸನ್ ಹಾಗೂ ದಿಲ್ಶಾದ್ ಎಂದು ಗುರುತಿಸಲಾಗಿದೆ. ಥಣಿಸಂದ್ರ ಮೂಲದ ಜಾನ್ಸನ್ ಎಂಬುವವನನ್ನು ದಿಲ್ಶಾದ್ ಪ್ರೀತಿಸುತ್ತಿದ್ದಳು. ಆದರೆ ಮಹಿಳೆಗೆ ವಿಜಯಪುರ ಮೂಲದ ಕೃಷ್ಣ ಎಂಬುವವರ ಜೊತೆ ಮದುವೆಯಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಆಕೆಯ ಗಂಡ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ.ಇದನ್ನೂ ಓದಿ: ಸರ್ಕಾರವೇ ನಕ್ಸಲರಿಗೆ ಶರಣಾಗಿದೆ: ಛಲವಾದಿ ನಾರಾಯಣಸ್ವಾಮಿ
Advertisement
Advertisement
ಆದಾಗ್ಯೂ ಜಾನ್ಸನ್ -ದಿಲ್ಶಾದ್ ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ ಸಮಾಜ ನಮ್ಮ ಪ್ರೀತಿ ಒಪ್ಪಲ್ಲ ಎಂದು ಜಾನ್ಸನ್ ಮನನೊಂದಿದ್ದ. ಇಂದು ಬೆಳಗ್ಗೆ ಕೆಲಸಕ್ಕೆ ಹೋದ ಜಾಗದಲ್ಲಿ ಜಾನ್ಸನ್ ಆತ್ಮಹತ್ಯೆ ಮಾಡಿಕೊಂಡಿದ್ದ. ಅಲ್ಲಿಗೆ ಹೋಗಿದ್ದ ದಿಲ್ಶಾದ್ ಶವ ನೋಡಿಕೊಂಡು ಬಂದಿದ್ದಳು. ಜಾನ್ಸನ್ ಆತ್ಮಹತ್ಯೆಯಿಂದ ಮನನೊಂದಿದ್ದ ಮಹಿಳೆ ಮಧ್ಯಾಹ್ನದ ವೇಳೆಗೆ ತಾನೂ ನೇಣಿಗೆ ಶರಣಾಗಿದ್ದಾಳೆ.
Advertisement
ಪ್ರಿಯಕರನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಹೆಣ್ಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ನೂ ಮಹಿಳೆಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಂಪಿಗೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: 5 ವರ್ಷಗಳಲ್ಲಿ 64 ಜನರಿಂದ ಲೈಂಗಿಕ ಶೋಷಣೆ – ಕರಾಳ ಅನುಭವ ಬಿಚ್ಚಿಟ್ಟ ದಲಿತ ಬಾಲಕಿ