ರಾಮನಗರ: ಇತ್ತೀಚೆಗೆ ಎಲ್ಲ ಕೆರೆಗಳನ್ನು ಪುನಶ್ಚೇತನಗೊಳಿಸುವುದಾಗಿ ಸಿಎಂ ತಿಳಿಸಿದ್ದರು. ಆದರೆ, ಇದೀಗ ಸ್ವತಃ ಸಿಎಂ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿಯೇ ಕೆರೆ ಒತ್ತುವರಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
Advertisement
ಚನ್ನಪಟ್ಟಣ ನಗರದಲ್ಲಿರುವ ಶೆಟ್ಟಿಹಳ್ಳಿ ಕೆರೆಯ ಸಾಕಷ್ಟು ಜಮೀನನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಶೆಟ್ಟಿಹಳ್ಳಿ ಕೆರೆ ಒಟ್ಟು 22 ಎಕರೆ 14 ಗುಂಟೆ ವಿಸ್ತೀರ್ಣವನ್ನು ಹೊಂದಿದೆ. ಆದರೆ, ಇದೀಗ ಕೆರೆಯ ಸುಮಾರು 9 ಎಕರೆಯಷ್ಟು ಜಾಗವನ್ನು ಒತ್ತುವರಿ ಮಾಡಿಕೊಂಡು ಮನೆ, ಕಟ್ಟಡ ಸಂಕೀರ್ಣ, ಮಸೀದಿ, ದೇವಾಲಯ ಅಲ್ಲದೇ ಸಮತಟ್ಟು ಮಾಡಿಕೊಂಡು ವ್ಯವಸಾಯಕ್ಕೂ ಬಳಕೆ ಮಾಡಲಾಗುತ್ತಿದೆ.
Advertisement
Advertisement
ಶೆಟ್ಟಿಹಳ್ಳಿ ಕೆರೆಯ ಒತ್ತುವರಿ ಬಗ್ಗೆ ಸಾಕಷ್ಟು ಬಾರಿ ದೂರು ನೀಡಿದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಇದೀಗ ಸ್ಥಳೀಯರು ಲೋಕಾಯುಕ್ತಕ್ಕೆ ದೂರು ನೀಡಿದ್ದು, ಲೋಕಾಯುಕ್ತ ಎಸ್‍ಪಿ ಅಂಜಲಿಯವರು ಇಂದು ಚನ್ನಪಟ್ಟಣಕ್ಕೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ನಡೆಸಿದರು. ಮೇಲ್ನೋಟಕ್ಕೆ ಕೆರೆ ಒತ್ತುವರಿಯಾಗಿರುವುದು ಕಂಡುಬಂದಿದ್ದು, ಒತ್ತುವರಿ ತೆರವಿಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.