– ಮಗನ ಪರ ಮತ್ತೆ ತಂದೆ ಬ್ಯಾಟಿಂಗ್
ನವದೆಹಲಿ: ಚಾಲಕನ ಮೇಲೆ ದಾಳಿಯಾದಾಗ ನಿಯಂತ್ರಣ ತಪ್ಪಿದ ಕಾರು ಸ್ಥಳದಲ್ಲಿದ್ದ ರೈತರ ಮೇಲೆ ಹರಿದಿದೆ ಎಂದು ಕೇಂದ್ರ ಸಚಿವ ಅಜಯ್ ಮಿಶ್ರಾ ಸಮರ್ಥನೆ ಮಾಡಿಕೊಂಡಿದ್ದಾರೆ.
Advertisement
ಲಖೀಂಪುರ ಖೇರಿ ಪ್ರಕರಣ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅವರು, ಮಗ ಆಶಿಶ್ ಮಿಶ್ರಾ ಪರ ಮತ್ತೆ ಹೇಳಿಕೆಯನ್ನು ನೀಡಿದ್ದಾರೆ. ಘಟನೆ ನಡೆದ ಸಂದರ್ಭದಲ್ಲಿ ನನ್ನ ಮಗ ಅಲ್ಲಿ ಇರಲಿಲ್ಲ ಎಂದು ಮತ್ತೆ ಪುನರುಚ್ಛರಿಸಿರುವ ಅಜಯ್ ಮಿಶ್ರಾ, ಕಾರು ಕಂಟ್ರೋಲ್ ತಪ್ಪಿದ್ದರಿಂದ ಈ ಅವಘಢ ಸಂಭವಿಸಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹತ್ಯೆ ಸ್ಥಳದಲ್ಲಿ ನನ್ನ ಮಗ ಇದ್ದಿದ್ದು ನಿಜವಾದ್ರೆ ರಾಜೀನಾಮೆ ನೀಡುತ್ತೇನೆ: ಅಜಯ್ ಮಿಶ್ರಾ
Advertisement
We have evidence to prove that neither I nor my son were present at spot. We are ready to face any investigating agency. Culprits, who have planned this incident won't be spared: MoS Home Ajay Mishra Teni on Lakhimpur Kheri violence pic.twitter.com/Ic8s14CbHu
— ANI UP/Uttarakhand (@ANINewsUP) October 5, 2021
Advertisement
ಪ್ರಕರಣ ಸಂಬಂಧ ಈ ಹಿಂದೆ ಮಾತನಾಡಿದ್ದ ಅಜಯ್ ಮಿಶ್ರಾ, ಘಟನೆ ನಡೆದ ವೇಳೆ ನನ್ನ ಮಗ ಕಾರಿನಲ್ಲಿ ಇರಲಿಲ್ಲ. ಒಂದು ವೇಳೆ ಆತ ಸ್ಥಳದಲ್ಲಿ ಇದ್ದಿದ್ದು ನಿಜವಾಗಿದ್ದರೆ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಇದೀಗ ಮತ್ತೆ ಹೇಳಿಕೆ ನೀಡುವ ಮೂಲಕ ಮಗನನ್ನು ಅಪ್ಪ ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಲಖೀಂಪುರದಲ್ಲಿ ನಾಲ್ವರು ರೈತರನ್ನು ಕೊಂದ ಪ್ರಕರಣ – ಇನ್ನೂ ಅರೆಸ್ಟ್ ಆಗಿಲ್ಲ ಮಂತ್ರಿ ಮಗ
Advertisement
ದುರ್ಘನೆ ನಡೆದ ಸಂದರ್ಭದಲ್ಲಿ ನನ್ನ ಮಗ ಕಾರಿನಲ್ಲಿ ಇರಲಿಲ್ಲ. ಪ್ರತಿಭಟನೆ ನಡೆಸುತ್ತಿದ್ದ ರೈತರು ಕಾರಿನ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಚಾಲಕನಿಗೂ ಗಾಯಗಳಾಗಿತ್ತು. ಗಾಯಗೊಂಡಿದ್ದರಿಂದ ಚಾಲಕ ಕಾರಿನ ನಿಯಂತ್ರಣ ಕಳೆದುಕೊಂಡಿದ್ದಾನೆ. ಪರಿಣಾಮ ಸ್ಥಳದಲ್ಲಿದ್ದ ರೈತರ ಮೇಲೆ ಕಾರು ಹರಿದಿದೆ. ಅವಘಡದಲ್ಲಿ ಜೀವ ಕಳೆದುಕೊಂಡು ರೈತರ ಬಗ್ಗೆ ನನಗೂ ಮರುಕವಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಲು ನಾನು ಒತ್ತಾಯಿಸುತ್ತೇನೆ ಎಂದು ಅಜಯ್ ಮಿಶ್ರಾ ಹೇಳಿದ್ದಾರೆ.
We aren't aware of how incident happened. Based on info&video,it's visible that driver was killed after being pulled out of car. If it were my son,he'd have been dead. It's impossible to get out of a place where car ran over people amid gathering of thousands:MoS Ajay Mishra Teni pic.twitter.com/raBF35jRjC
— ANI UP/Uttarakhand (@ANINewsUP) October 5, 2021
ಒಟ್ಟಾರೆ ಪ್ರಕರಣ ಸಂಬಂಧ ಅಜಯ್ ಮಿಶ್ರಾ ಪುತ್ರ ಆಶೀಶ್ ಮಿಶ್ರಾ ವಿರುದ್ಧ ಲಖೀಂಪುರ್ ಖೇರಿ ಠಾಣೆಯ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಆದರೆ ಇದುವರೆಗೆ ಆರೋಪಿಯ ಬಂಧನವಾಗಿಲ್ಲ. ಸದ್ಯ ಇದನ್ನು ವಿರೋಧ ಪಕ್ಷಗಳು ಪ್ರಶ್ನಿಸುತ್ತಿವೆ. ಇದನ್ನೂ ಓದಿ: ರೈತರ ಮೇಲೆ ವಾಹನ ಹತ್ತಿಸಿದ ವೀಡಿಯೋ ಲಭ್ಯ- ಅಜಯ್ ಮಿಶ್ರಾ ಪುತ್ರನ ವಿರುದ್ಧ ಕೊನೆಗೂ FIR
Lakhimpur Kheri incident | It may prove as an evidence in the incident but we can't reach any conclusion by seeing just one video: ADG Lucknow Zone on a video showing farmers being run over by a vehicle pic.twitter.com/KT4vaFQQDq
— ANI UP/Uttarakhand (@ANINewsUP) October 6, 2021