ಲಕ್ನೋ: ಉತ್ತರಪ್ರದೇಶದ ಲಖೀಂಪುರ್ ಖೇರಿಯಲ್ಲಿ ರೈತರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾನ ಮಗ ಮಹೀಂದ್ರ ಜೀಪ್ ಹತ್ತಿಸಿದ್ದ ಹೊಸ ವೀಡಿಯೋ ಲಭ್ಯವಾಗಿದೆ.
Advertisement
ಅತೀ ವೇಗದಲ್ಲಿದ್ದ ಮಹೀಂದ್ರ ಜೀಪ್‍ನ್ನು ಕಪ್ಪು ಬಾವುಟ ಹಿಡಿದು ನಡೆದುಹೋಗ್ತಿದ್ದ ರೈತರ ಮೇಲೆ ಹತ್ತಿಸಲಾಗಿದೆ. ಆ ಜೀಪ್ ಹಿಂದೆ ಇನ್ನೊಂದು ಕಾರು ಕೂಡಾ ಅತೀ ವೇಗದಲ್ಲಿ ನುಗ್ಗಿದೆ. ಜೀಪ್ ಹತ್ತಿಸಿದ ಪರಿಣಾಮ ನಾಲ್ವರು ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಆ ಜೀಪ್‍ನಿಂದ ಇಳಿದು ಓಡಿಹೋಗ್ತಿರುವ ದೃಶ್ಯವೂ ಲಭ್ಯ ಆಗಿದೆ. ಇದನ್ನೂ ಓದಿ: ಚಾಲಕನ ಮೇಲೆ ದಾಳಿಯಾದಾಗ ನಿಯಂತ್ರಣ ತಪ್ಪಿ ಕಾರು ರೈತರ ಮೇಲೆ ಹರಿದಿದೆ: ಮಿಶ್ರಾ
Advertisement
Advertisement
ಜೀಪ್ ಹತ್ತಿಸಿದ್ದರಿಂದ ಆಕ್ರೋಶಗೊಂಡ ರೈತರ ಗುಂಪು ಬಿಜೆಪಿ ಕಾರ್ಯಕರ್ತರಿದ್ದ ಜೀಪಿನ ಮೇಲೆ ಪ್ರತಿದಾಳಿ ನಡೆಸಿದೆ. ಲಖೀಂಪುರ್ ಖೇರಿ ಹಿಂಸಾಚಾರದ ಬಗ್ಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠ ಇಂದು ವಿಚಾರಣೆ ನಡೆಸಲಿದೆ. ಇದನ್ನೂ ಓದಿ: ಹತ್ಯೆ ಸ್ಥಳದಲ್ಲಿ ನನ್ನ ಮಗ ಇದ್ದಿದ್ದು ನಿಜವಾದ್ರೆ ರಾಜೀನಾಮೆ ನೀಡುತ್ತೇನೆ: ಅಜಯ್ ಮಿಶ್ರಾ
Advertisement
ಲಖೀಂಪುರ್‍ಖೇರಿಯಲ್ಲಿ ಮೃತರ ರೈತರ ಕುಟುಂಬವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ನಾಯಕಿ ಪ್ರಿಯಾಂಕ ಗಾಂಧಿ ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್‍ಮಿಶ್ರಾ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ಬೇಕು ಎಂದಿರುವ ಪ್ರಿಯಾಂಕ, ‘ಎಫ್‍ಐಆರ್ ಇಲ್ಲದೆಯೇ ನಮ್ಮನ್ನು ಅರೆಸ್ಟ್ ಮಾಡುವುದಾದ್ರೆ ಮಂತ್ರಿ ಮಗ ಆಶಿಶ್ ಮಿಶ್ರಾನನ್ನು ಯಾಕೆ ಬಂಧಿಸ್ತಿಲ್ಲ’ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಲಖೀಂಪುರದಲ್ಲಿ ನಾಲ್ವರು ರೈತರನ್ನು ಕೊಂದ ಪ್ರಕರಣ – ಇನ್ನೂ ಅರೆಸ್ಟ್ ಆಗಿಲ್ಲ ಮಂತ್ರಿ ಮಗ