ನವದಹಲಿ: ಲಖೀಂಪುರ ಖೇರಿ ಗಲಭೆ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾರವರ ಪುತ್ರ ಆಶಿಶ್ ಮಿಶ್ರಾ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ ಮತ್ತು ಒಂದು ವಾರದೊಳಗೆ ಶರಣಾಗುವಂತೆ ಆದೇಶಿಸಿದೆ.
ಹೈಕೋರ್ಟ್ ಹಲವಾರು ಅಪ್ರಸ್ತುತ ಸಮಸ್ಯೆಗಳನ್ನು ಪರಿಗಣನೆಗೆ ತೆಗೆದುಕೊಂಡಿದೆ. ಪ್ರಕರಣವನ್ನು ಮತ್ತೆ ವಿಚಾರಣೆ ನಡೆಸುವಂತೆ ಹೈಕೋರ್ಟ್‍ಗೆ ಸುಪ್ರೀಂ ಸೂಚನೆ ನೀಡಿದೆ. ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಶಿವಸೇನೆ ಶಾಸಕನ ಪತ್ನಿ ಶವ ಪತ್ತೆ
ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ, ಕಳೆದ ವರ್ಷ ಅಕ್ಟೋಬರ್‍ನಲ್ಲಿ ಉತ್ತರ ಪ್ರದೇಶದ ಲಖೀಂಪುರ ಖೇರಿ ಪ್ರದೇಶದಲ್ಲಿ ನಡೆದ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಅವರನ್ನು ಅಕ್ಟೋಬರ್ 9 ರಂದು ಬಂಧಿಸಲಾಗಿತ್ತು. ಅಲಹಾಬಾದ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಬಿಡುಗಡೆ ಮಾಡಲಾಗಿತ್ತು. ಇದನ್ನೂ ಓದಿ: 8 ವರ್ಷದ ಮಗನನ್ನೇ ಕತ್ತು ಸೀಳಿ ಕೊಂದ ಕ್ರೂರಿ ತಾಯಿ
ಕಳೆದ ವರ್ಷದ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಲಖೀಂಪುರಕ್ಕೆ ಭೇಟಿ ನೀಡುವ ವೇಳೆ ರೈತರ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪ್ರತಿಭಟನನಿರತ ನಾಲ್ವರು ರೈತರು ಸೇರಿದಂತೆ 8 ಮಂದಿ ಬಲಿಯಾಗಿದ್ದರು.