ಮೈಸೂರು: ಪ್ರತಿ ವರ್ಷದಂತೆ ಈ ವರ್ಷವೂ ಮೈಸೂರಿನ ಅಧಿದೇವತೆಯಾದ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಆಷಾಢ ಮಾಸದ ವಿಶೇಷ ಪೂಜೆ ನಡೆಯುತ್ತಿದ್ದು, ಲಕ್ಷಾಂತರ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ.
ಆಷಾಢ ಮಾಸದ ನಾಲ್ಕು ಶುಕ್ರವಾರಗಳಲ್ಲಿ ವಿಶೇಷ ಪೂಜೆ ನೆರವೇರಲಿದ್ದು. ಶುಕ್ರವಾರ ಮುಂಜಾನೆ 3.30ಕ್ಕೆ ಮಹಾನ್ಯಾಸ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ನೇರವೇರಿಸಿ ತಾಯಿ ಚಾಮುಂಡಿಗೆ ಲಕ್ಷೀ ರೂಪದಲ್ಲಿ ಅಲಂಕಾರ ಮಾಡಿ ಮಹಾಮಂಗಳಾರತಿ ನೆರವೇರಲಿದೆ.
Advertisement
ಈ ದೃಶ್ಯ ಕಣ್ತುಂಬಿಕೊಳ್ಳಲು ಲಕ್ಷಾಂತಕರ ಭಕ್ತರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡುತ್ತಿದ್ದು, ಸ್ವತಹ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸಹ ಬೆಟ್ಟಕ್ಕೆ ಭೇಟಿ ನೀಡಿ ಆಷಾಢ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ಆಷಾಢ ಶುಕ್ರವಾರದಂದು ಹೆಚ್ಚು ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಮುಂಜಾನೆ 5.30 ರಿಂದ ರಾತ್ರಿ 10.00 ಗಂಟೆಯವರೆಗು ದರ್ಶನದ ಅವಕಾಶ ಕಲ್ಪಿಸಲಾಗಿದೆ. ಮೂರು ಸರತಿ ಸಾಲು ನಿರ್ಮಿಸಿದ್ದು, ಧರ್ಮದರ್ಶನ, 50 ರೂ. ಹಾಗೂ 300 ರೂ. ಟಿಕೆಟ್ ನೀಡಿ ಚಾಮುಂಡಿಯ ದರ್ಶನ ಪಡೆಯಬಹುದಾಗಿದೆ.
Advertisement
Advertisement
ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಈ ವರ್ಷವೂ ಹೆಲಿಪ್ಯಾಡ್ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಿ ಅಲ್ಲಿಂದ ಸರ್ಕಾರಿ ಬಸ್‍ನಲ್ಲಿ ಉಚಿತವಾಗಿ ಬೆಟ್ಟಕ್ಕೆ ಕರೆದುಕೊಂಡು ಹೋಗಿ ವಾಪಸ್ ಕರೆ ತರುವ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಖಾಸಗಿ ವಾಹನಗಳು ಬೆಟ್ಟಕ್ಕೆ ತೆರಳುವಂತಿಲ್ಲ ಗಣ್ಯರಿಗೆ ಪಾಸ್ ಮೂಲಕ ವಾಹನ ನಿಲುಗಡೆಗೆ ಅವಕಾಶ ನೀಡಲಾಗಿದೆ.
Advertisement
ಆಷಾಢ ಮಾಸ, ಈ ಮಾಸದಲ್ಲಿ ಯಾವುದೇ ಶುಭಕಾರ್ಯಗಳನ್ನ ನಡೆಸೋದಿಲ್ಲ. ಆದ್ರೆ ಇದೇ ಮಾಸದಲ್ಲಿ ದೇವರ ಆರಾಧನೆಯಿಂದ ಸಂಪೂರ್ಣ ಫಲ ಪ್ರಾಪ್ತಿಯಾಗುತ್ತದೆ ಅನ್ನೋದು ಆಸ್ತಿಕರ ನಂಬಿಕೆ. ಅದರಲ್ಲೂ ಆಷಾಢ ಮಾಸದಲ್ಲಿ ಶಕ್ತಿದೇವತೆಗಳ ಆರಾಧನೆಯಿಂದ ಕುಟುಂಬ ಸದಸ್ಯರ ಆರೋಗ್ಯ, ಐಶ್ವರ್ಯ ಸಂಪತ್ತು ಅಭಿವೃದ್ದಿಯಾಗುತ್ತೆ ಅನ್ನೋದು ಭಕ್ತರ ನಂಬಿಕೆ. ಈ ನಂಬಿಕೆಯಿಂದಲೇ ನೂರಾರು ವರ್ಷಗಳಿಂದ ಮೈಸೂರಿನ ಅಧಿದೇವತೆಯಾದ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಆಷಾಢ ಮಾಸದ ವಿಶೇಷ ಪೂಜಾ ಕೈಂಕರ್ಯಗಳನ್ನು ಆಯೋಜಿಸುತ್ತಾ ಬರಲಾಗಿದೆ.