ರಾಮನಗರ: ಚನ್ನಪಟ್ಟಣ (Channapatna) ತಾಲೂಕಿನ ಗೌಡಗೆರೆಯ (Gowdagere) ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಇಂದು ಲಕ್ಷದೀಪೋತ್ಸವ (Lakshadeepotsava) ಕಾರ್ಯಕ್ರಮ ಹಿನ್ನೆಲೆ ಕ್ಷೇತ್ರಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಹರಿದುಬರುತ್ತಿದ್ದಾರೆ.
ಸುಮಾರು 60 ಅಡಿ ಎತ್ತರದ ಚಾಮುಂಡೇಶ್ವರಿ ಪಂಚಲೋಹ ವಿಗ್ರಹ ಜನರನ್ನು ಕ್ಷೇತ್ರದತ್ತ ಆಕರ್ಷಿಸುತ್ತಿದೆ. ಇಂದು ಸಂಜೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ ಹಾಗೂ ಸಿಡಿಮದ್ದುಗಳ ಪ್ರದರ್ಶನ ಆಯೋಜನೆ ಮಾಡಲಾಗಿದೆ. ಈ ಹಿನ್ನೆಲೆ ಬೆಳಗ್ಗೆಯಿಂದಲೂ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಗಿದೆ. ಇದನ್ನೂ ಓದಿ: ಶಿರಸಿ, ಕುಮಟಾದ ಪಶ್ಚಿಮ ಘಟ್ಟ ಭಾಗದಲ್ಲಿ ಭೂಕಂಪನ – ಭಯಭೀತರಾದ ಜನ
ಸರತಿ ಸಾಲಿನಲ್ಲಿ ನಿಂತು ಭಕ್ತಾದಿಗಳು ಚಾಮುಂಡೇಶ್ವರಿ ದರ್ಶನ ಪಡೆದು ಪ್ರಸಾದ ಸ್ವೀಕರಿಸುತ್ತಿದ್ದಾರೆ. ಕ್ಷೇತ್ರದ ಧರ್ಮಾಧಿಕಾರಿ ಮಲ್ಲೇಶ್ ಗುರೂಜಿ ನೇತೃತ್ವದಲ್ಲಿ ಲಕ್ಷದೀಪೋತ್ಸವ ಕಾರ್ಯಕ್ರಮ ಜರುಗಲಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ಕೋಲಾರಕ್ಕೆ ಈ ಬಾರಿ ಮಂತ್ರಿ ಸ್ಥಾನ ನೀಡಲೇಬೇಕು, ನಾನು ಅರ್ಹನಿದ್ದೇನೆ: ಕೆವೈ ನಂಜೇಗೌಡ