ಮೇ 21ರಂದು ಹಸೆಮಣೆ ಏರಲು ಸಜ್ಜಾದ ‘ಲಕ್ಷ್ಮಿ ಬಾರಮ್ಮ’ ನಟ

Public TV
1 Min Read
shamanth gowda

‘ಲಕ್ಷ್ಮಿ ಬಾರಮ್ಮ’ (Lakshmi Baramma) ನಟ ಶಮಂತ್ ಬ್ರೋ ಗೌಡ (Shamanth Bro Gowda) ಅವರು ಮೇ 21ರಂದು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಮೇಕಪ್ ಆರ್ಟಿಸ್ಟ್ ಮೇಘನಾ ಜೊತೆ ದಾಂಪತ್ಯ ಜೀವನಕ್ಕೆ (Wedding) ಕಾಲಿಡಲಿದ್ದಾರೆ. ಇದೀಗ ಮದುವೆ ತಯಾರಿ ಜೋರಾಗಿ ನಡೆಯುತ್ತಿದೆ. ಅರಿಶಿನ ಶಾಸ್ತ್ರದಲ್ಲಿ ನಟ ಮಿಂದೆದಿದ್ದಾರೆ. ಇದನ್ನೂ ಓದಿ:ಮತ್ತೆ ಪ್ರೀತಿಯಲ್ಲಿ ಬಿದ್ರಾ ನಟಿ?- ನಿರ್ಮಾಪಕನ ತೋಳಲ್ಲಿ ತಲೆಯಿಟ್ಟು ಮಲಗಿದ ಸಮಂತಾ

shamanth gowdaಕಾಲೇಜ್ ಕಾರ್ಯಕ್ರಮವೊಂದರಲ್ಲಿ ಶಮಂತ್ ಗೆಸ್ಟ್ ಆಗಿ ಆಗಮಿಸಿದ್ದರು. ಅಲ್ಲಿ ಮೇಘನಾ (Meghana) ಪರಿಚಯ ಆಗಿತ್ತು. ಅಲ್ಲಿಂದ ಶುರುವಾದ ಸ್ನೇಹ ಮದುವೆಗೆ ಮುನ್ನುಡಿ ಬರೆದಿದೆ. ಮನೆಯವರ ಸಮ್ಮತಿ ಪಡೆದು ಇತ್ತೀಚೆಗೆ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಮೇ 21ರಂದು ಇಬ್ಬರ ಮದುವೆ ನಡೆಯಲಿದೆ. ಇದನ್ನೂ ಓದಿ:ರಾಜಕಾರಣಿಗಳ ಜೊತೆ ಡೇಟಿಂಗ್‌ಗೆ ಬಾ – ಟಾರ್ಚರ್ ಕೊಟ್ಟವನ ಚಳಿ ಬಿಡಿಸಿದ ನಮ್ರತಾ

ಶಮಂತ್ ಮೂಲತಃ ಉತ್ತರ ಕರ್ನಾಟಕದವರು. ಶಮಂತ್ ಹಿರೇಮಠ ಅವರ ಪೂರ್ಣ ಹೆಸರು, ಇನ್ನೂ ಮೇಘನಾ ಮರಾಠಿಗರು. ಹೀಗಾಗಿ ಎರಡು ರೀತಿಯ ಪದ್ಧತಿಯಂತೆ ಮದುವೆ ಶಾಸ್ತ್ರಗಳು ನಡೆಯಲಿದೆ.

‘ಬಿಗ್ ಬಾಸ್ ಕನ್ನಡ 8’ರಲ್ಲಿ ಶಮಂತ್ ಸ್ಪರ್ಧಿಯಾಗಿದ್ದರು. ಈ ಶೋನಲ್ಲಿ ಮಂಜು ಪಾವಗಡ ಗೆದ್ದಿದ್ದರು. ಈ ಕಾರ್ಯಕ್ರಮ ಬಳಿಕ ‘ಲಕ್ಷ್ಮಿ ಬಾರಮ್ಮ’ ಸೀರಿಯಲ್‌ನಲ್ಲಿ ಶಮಂತ್ ಲೀಡ್ ಹೀರೋ ಆಗಿ ನಟಿಸಿದ್ದರು.

Share This Article