‘ಲಕ್ಷ್ಮಿ ಬಾರಮ್ಮ’ (Lakshmi Baramma) ನಟ ಶಮಂತ್ ಗೌಡ (Shamanth Bro Gowda) ಅವರ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಸದ್ಯ ಬೆಂಗಳೂರಿನಲ್ಲಿ ನಟನ ಆರತಕ್ಷತೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ. ಈ ಸಂಭ್ರಮದಲ್ಲಿ ಕಿರುತೆರೆ ನಟ-ನಟಿಯರು ಭಾಗಿಯಾಗಿದ್ದಾರೆ.
ಭಾವಿ ಪತ್ನಿ ಮೇಘನಾ (Meghana) ಜೊತೆ ಶಮಂತ್ ಅದ್ಧೂರಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಡ್ಯಾನ್ಸ್ ಮಾಡುತ್ತಲೇ ವೇದಿಕೆ ಏರಿದ್ದಾರೆ. ವಧು ಮೇಘನಾ ಗಿಳಿ ಹಸಿರು ಡ್ರೆಸ್ನಲ್ಲಿ ಮಿಂಚಿದ್ರೆ, ವರ ಶಮಂತ್ ಕಪ್ಪು ಬಣ್ಣದ ಸೂಟ್ ಧರಿಸಿದ್ದಾರೆ. ಇಬ್ಬರೂ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ಸಿನಿಮಾ ಗೆದ್ದ ಬೆನ್ನಲ್ಲೇ ದೇವಿ ಮೊರೆ ಹೋದ ಶ್ರೀನಿಧಿ ಶೆಟ್ಟಿ
ಈ ಮದುವೆ ಆರತಕ್ಷತೆಗೆ ರ್ಯಾಪರ್ ಆಲ್ ಓಕೆ, ನಟಿ ಮೌನ ಗುಡ್ಡೆಮನೆ, ‘ಭಾಗ್ಯಲಕ್ಷ್ಮಿ’ ಸೀರಿಯಲ್ ಬಾಲನಟ ಗುಂಡಣ್ಣ ಅಲಿಯಾಸ್ ನಿಹಾರ್, ತನ್ವಿ ಅಲಿಯಾಸ್ ಅಮೃತಾ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ. ಇದನ್ನೂ ಓದಿ:‘ಸಿಕಂದರ್’ ಸೋಲಿನ ಬಳಿಕ ಆರ್ಮಿ ಆಫೀಸರ್ ಪಾತ್ರದಲ್ಲಿ ಸಲ್ಮಾನ್ ಖಾನ್?
ಕಾಲೇಜ್ ಕಾರ್ಯಕ್ರಮವೊಂದರಲ್ಲಿ ಶಮಂತ್ ಗೆಸ್ಟ್ ಆಗಿ ಆಗಮಿಸಿದ್ದರು. ಅಲ್ಲಿ ಮೇಘನಾ ಪರಿಚಯ ಆಗಿತ್ತು. ಅಲ್ಲಿಂದ ಶುರುವಾದ ಸ್ನೇಹ ಮದುವೆಗೆ ಮುನ್ನುಡಿ ಬರೆದಿದೆ. ಮನೆಯವರ ಸಮ್ಮತಿ ಪಡೆದು ಇತ್ತೀಚೆಗೆ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.
ಶಮಂತ್ ಮೂಲತಃ ಉತ್ತರ ಕರ್ನಾಟಕದವರು. ಶಮಂತ್ ಹಿರೇಮಠ ಅವರ ಪೂರ್ಣ ಹೆಸರು. ಇನ್ನೂ ಮೇಘನಾ ಮರಾಠಿಗರು. ಹೀಗಾಗಿ ಎರಡು ರೀತಿಯ ಪದ್ಧತಿಯಂತೆ ಮದುವೆ ಶಾಸ್ತ್ರಗಳು ನಡೆಯಲಿದೆ.
‘ಬಿಗ್ ಬಾಸ್ ಕನ್ನಡ 8’ರಲ್ಲಿ ಶಮಂತ್ ಸ್ಪರ್ಧಿಯಾಗಿದ್ದರು. ಈ ಶೋನಲ್ಲಿ ಮಂಜು ಪಾವಗಡ ಗೆದ್ದಿದ್ದರು. ಈ ಕಾರ್ಯಕ್ರಮ ಬಳಿಕ ‘ಲಕ್ಷ್ಮಿ ಬಾರಮ್ಮ’ ಸೀರಿಯಲ್ನಲ್ಲಿ ಶಮಂತ್ ಲೀಡ್ ಹೀರೋ ಆಗಿ ನಟಿಸಿದ್ದರು.