ಉಡುಪಿ: ಕುಮಾರಸ್ವಾಮಿ (HD Kumaraswamy) ಬಹಳ ಅನುಭವಸ್ಥರು, ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿ ಆಗಿದ್ದವರು. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿಲ್ಲ ಎಂದು ಹೇಳುತ್ತಾರೆ. ಧೈರ್ಯವಿದ್ದರೆ ಮುಂದೆ ಬಂದು ಹೇಳಲಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebalkar) ಗುಡುಗಿದ್ದಾರೆ.
ಉಡುಪಿಯಲ್ಲಿ ಗೃಹಜ್ಯೋತಿ ಯೋಜನೆಗೆ (Gruhajyothi Scheme) ಸಾಂಕೇತಿಕವಾಗಿ ಚಾಲನೆ ನೀಡಿದ ಸಚಿವರು ಮಾಧ್ಯಮಗಳೊಂದಿಗೆ ಮಾತನಾಡಿ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪಗಳಿಗೆ ತಿರುಗೇಟು ನೀಡಿದರು. ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರ (Congress Government) ನುಡಿದಂತೆ ನಡೆಯುತ್ತಿಲ್ಲ ಎಂದು ಹೇಳುತ್ತಾರೆ. ಧೈರ್ಯವಿದ್ದರೆ ಮುಂದೆ ಬಂದು ಹೇಳಲಿ. ಕುಮಾರಸ್ವಾಮಿ ಅವರ ಬಗ್ಗೆ ಬಹಳ ಗೌರವವಿದೆ. ಅವರು ಸಿಎಂ ಆಗಿದ್ದಾಗ ನಾನೂ ಶಾಸಕಿಯಾಗಿ ಕೆಲಸ ಮಾಡಿದ್ದೇನೆ. ಹೆಚ್‌ಡಿಕೆ ಹಿಟ್ ಅಂಡ್ ರನ್ ಕೇಸ್ ಮಾಡೋದಕ್ಕೆ ಹೋಗ್ಬಾರದು. ನಾವು ಐದು ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ. ಜನರಿಗೆ ಇದ್ರಿಂದ ಲಾಭ ಇಲ್ಲ, ಮುಚ್ಚಿಬಿಡಿ ಎಂದು ಮುಂದೆ ಬಂದು ಹೇಳಲಿ ಎಂದು ಸವಾಲ್ ಹಾಕಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಕುರಿತು ಮಾತನಾಡುತ್ತಾ, 1.28 ಕೋಟಿ ಕುಟುಂಬಗಳ ಫಲಾನುಭವಿಗಳಿದ್ದಾರೆ. ಅದರಲ್ಲಿ 1 ಕೋಟಿ ಕುಟುಂಬಗಳು ನೋಂದಣಿಯಾಗಿದೆ. ಆಗಸ್ಟ್ 18 ಅಥವಾ ಆಗಸ್ಟ್ 20ರಂದು ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಚಾಲನೆ ನೀಡಲಿದ್ದಾರೆ. ಡಿಬಿಟಿ ಮೂಲಕ ಮನೆ ಯಜಮಾನಿ ಖಾತೆಗೆ ಹಣ ಹಾಕುವ ಮೂಲಕ ಯೋಜನೆಗೆ ಚಾಲನೆ ನಿಡಲಾಗುತ್ತದೆ ಎಂದರು. ಇದನ್ನೂ ಓದಿ: ಹರಿಯಾಣದಲ್ಲಿಯೂ ಘರ್ಜಿಸಿದ ಬುಲ್ಡೋಜರ್- ಅಕ್ರಮವಾಗಿ ನಿರ್ಮಿಸಿದ್ದ ಎರಡು ಡಜನ್ ಕಟ್ಟಡಗಳ ತೆರವು
ಉಡುಪಿ ವೀಡಿಯೋ ಚಿತ್ರೀಕರಣ ಕೇಸ್ ಕುರಿತು ಮಾತನಾಡಿ, ಕಾನೂನು ಚೌಕಟ್ಟಿನಲ್ಲಿ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ. ನಿಷ್ಪಕ್ಷಪಾತವಾಗಿ ತನಿಖೆ ಆಗುವಂತೆ ಜಿಲ್ಲಾ ಉಸ್ತುವಾರಿ ಸಚಿವೆಯಾಗಿ ನೋಡಿಕೊಳ್ಳುತ್ತೇನೆ. ಒಬ್ಬ ಮಹಿಳೆಯಾಗಿ ಯಾವುದೇ ಹೆಣ್ಣು ಮಕ್ಕಳ ಮೇಲೆ ಅನ್ಯಾಯವಾದರೂ ಸಹಿಸಲು ಸಾಧ್ಯವಿಲ್ಲ. ವಿದ್ಯಾರ್ಥಿನಿಯರ ಭವಿಷ್ಯದ ಪ್ರಶ್ನೆ ಇದೆ. ಆದ್ದರಿಂದ ತನಿಖೆ ಆಗುವವರೆಗೂ ಕಾಯ್ದಿರಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಿಂದ ಬಂದ ಭಯೋತ್ಪಾದಕರು ನಮ್ಮ ದೇಶದ ಸೈನಿಕರನ್ನು ಹತ್ಯೆ ಮಾಡಿದ್ದಾರೆ: ಓವೈಸಿ ಕಿಡಿ
ಇನ್ನೂ ಪ್ರತಿಭಟನಾಕಾರರ ಮೇಲೆ ಕೇಸ್ ಹಾಕಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಪ್ರತಿಭಟನೆ ವೇಲೆ ತಪ್ಪಾಗಿ ಮಾತನಾಡಿದ್ದಕ್ಕಾಗಿ ಕೇಸ್ ಆಗಿದೆ. ಪ್ರತಿಭಟನೆ ಮಾಡುವುದು ತಪ್ಪಲ್ಲ, ಆದ್ರೆ ಪ್ರಚೋದನಕಾರಿಯಾಗಿ ಮಾತನಾಡುವುದು ತಪ್ಪು. ಈ ಬಗ್ಗೆ ಎಸ್ಪಿ ಜೊತೆಗೂ ಮಾತನಾಡಿದ್ದೇನೆ. ಎಲ್ಲಾ ಜಾತಿ ಧರ್ಮದವರು ಒಟ್ಟಿಗೆ ಇರೋಣ. ಬಿಜೆಪಿಯವರು ರಾಮ ರಾಜ್ಯದ ಪರಿಕಲ್ಪನೆ ಹೇಳುತ್ತಾರೆ. ರಾಮ ರಾಜ್ಯದಲ್ಲಿ ಎಲ್ಲರೂ ಸೌಹಾರ್ದಯುತವಾಗಿ ಇರಬೇಕು ಅನ್ನುವುದು ಕಾಂಗ್ರೆಸ್ ಸಿದ್ಧಾಂತ ಎಂದು ತಿರುಗೇಟು ನೀಡಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]