ಬೆಳಗಾವಿ: ಕಾಂಗ್ರೆಸ್ (Congress) ನೇತೃತ್ವದ ಸರ್ಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ಸತೀಶ್ ಜಾರಕಿಹೊಳಿ (Satish Jarkiholi) ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಸಚಿವರಾದ ಬಳಿಕ ಮೊದಲ ಬಾರಿಗೆ ಭಾನುವಾರ ಬೆಳಗಾವಿಗೆ (Belagavi) ಆಗಮಿಸಲಿದ್ದಾರೆ.
ಸಚಿವರಾದ ಮೇಲೆ ಬೆಳಗಾವಿಗೆ ಆಗಮಿಸುತ್ತಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹಾಗೂ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸ್ವಾಗತಿಸಲು ಇಡೀ ಬೆಳಗಾವಿ ಮಹಾನಗರ ಸಜ್ಜಾಗಿದೆ. ವಿಮಾನ ನಿಲ್ದಾಣದಿಂದಲೇ ಬೃಹತ್ ರ‍್ಯಾಲಿ ಮೂಲಕ ನಗರಕ್ಕೆ ಕರೆತರಲು ಕಾರ್ಯಕರ್ತರು ಹಾಗೂ ಅಭಿಮಾನಿಗಳು ನಿರ್ಧರಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ 135 ಕ್ಷೇತ್ರಗಳ ಮುಖ್ಯಮಂತ್ರಿಯಲ್ಲ: ಯಶ್‌ಪಾಲ್ ಸುವರ್ಣ
Advertisement
Advertisement
ಮೇ 20ರಂದು ಸತೀಶ್ ಜಾರಕಿಹೊಳಿ ಹಾಗೂ ಮೇ 27ರಂದು ಲಕ್ಷ್ಮೀ ಹೆಬ್ಬಾಳ್ಕರ್ ಸಂಪುಟದರ್ಜೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಸಚಿವರಾದ ನಂತರ ಇವರು ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಭಾನುವಾರ ಬೆಳಗ್ಗೆ 10:30ಕ್ಕೆ ಇಬ್ಬರೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಬಳಿಕ ಇಬ್ಬರನ್ನೂ ವಿಮಾನ ನಿಲ್ದಾಣದಲ್ಲೇ ಅದ್ಧೂರಿಯಾಗಿ ಸ್ವಾಗತಿಸಿ ಕರೆತರಲು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ನಿರ್ಧರಿಸಿದ್ದಾರೆ. ಇದನ್ನೂ ಓದಿ: ಬಾಗಲಕೋಟೆಯಲ್ಲಿದೆ ಸೆಂಗೊಲ್ ರಾಜದಂಡ ಹೋಲುವ ಕಲಾಕೃತಿ – ಏನಿದರ ವಿಶೇಷತೆ?
Advertisement
Advertisement
ವಿಮಾನ ನಿಲ್ದಾಣದಿಂದಲೇ ಬೈಕ್ ರ‍್ಯಾಲಿ ಮೂಲಕ ಸಚಿವದ್ವಯರನ್ನು ನಗರಕ್ಕೆ ಕರೆತರಲಾಗುತ್ತದೆ. ಬೆಳಗಾವಿಗೆ ಆಗಮಿಸಿದ ನಂತರ ಕಿತ್ತೂರು ರಾಣಿ ಚೆನ್ನಮ್ಮ, ಛತ್ರಪತಿ ಶಿವಾಜಿ ಮಹಾರಾಜ, ಡಾ.ಬಿ.ಆರ್.ಅಂಬೇಡ್ಕರ್, ಸಂಗೊಳ್ಳಿ ರಾಯಣ್ಣ, ಮಹಾತ್ಮ ಗಾಂಧೀಜಿ ಸೇರಿದಂತೆ ಮಹಾನ್ ವ್ಯಕ್ತಿಗಳ ಪುತ್ಥಳಿಗಳಿಗೆ ಸಚಿವರು ಮಾಲಾರ್ಪಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಕೇಜ್ರಿವಾಲ್, ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದೂರು ದಾಖಲು