ಬೆಂಗಳೂರು: ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹಾಗೂ ಸಿ.ಟಿ ರವಿ (CT Ravi) ಮಧ್ಯೆ ಬೆಳಗಾವಿ ಅಧಿವೇಶನದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಮುಂದೆ ಎಂಎಲ್‌ಸಿ ಉಮಾಶ್ರೀ (Umashree) ಸಾಕ್ಷ್ಯ ನುಡಿದಿದ್ದಾರೆ.
ಗಲಾಟೆ ಸಂದರ್ಭದಲ್ಲಿ ಉಮಾಶ್ರೀ ಸದನದ ಒಳಗೆ ಇದ್ದರು. ಹೀಗಾಗಿ ಇಂದು (ಜ.16) ಉಮಾಶ್ರೀ ಸಿಐಡಿ ಮುಂದೆ ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಬೀದರ್‌ನಲ್ಲಿ ಎಟಿಎಂ ಹಣ ದರೋಡೆ ಪ್ರಕರಣ – ಇಬ್ಬರು ದರೋಡೆಕೋರರು ಹೈದರಾಬಾದ್‌ನಲ್ಲಿ ಅಂದರ್?
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯಗೆ (Yathindra Siddaramaiah) ಸಿಐಡಿ ನೋಟಿಸ್ ನೀಡಲಾಗಿದೆ. ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ (Belagavi Winter Session) ನಡೆದ ಗಲಾಟೆ ಸಂದರ್ಭದಲ್ಲಿ ಸದನದ ಒಳಗೆ ಯತೀಂದ್ರ ಸಿದ್ದರಾಮಯ್ಯ ಇದ್ದರು ಅನ್ನೋ ಕಾರಣಕ್ಕೆ ನೋಟಿಸ್ ನೀಡಲಾಗಿದೆ. ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ಚಿತ್ರವಿಚಿತ್ರ ಸನ್ನಿವೇಶ – 9 ವರ್ಷದಿಂದ ಸಾಧು ತಲೆಯ ಮೇಲೆ ಕುಳಿತ ಪಾರಿವಾಳ!
ಸಿಐಡಿ (CID) ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡುವಂತೆ ತಿಳಿಸಿದ್ದಾರೆ. ಇನ್ನೂ ಯತೀಂದ್ರ ಅವರ ಜೊತೆಗೆ ಎಂಎಲ್‌ಸಿ ಡಿಬಿ ಶ್ರೀನಿವಾಸ್ ಅವರು ಇದ್ದ ಕಾರಣಕ್ಕಾಗಿ ಅವರಿಗೂ ಕೂಡ ನೋಟಿಸ್ ನೀಡಿ, ಶುಕ್ರವಾರ (ಜ.17) ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: ಸೈಫ್ ಅಲಿ ಖಾನ್‌ಗೆ ಚಾಕು ಇರಿತ ಕೇಸ್ – 1 ಕೋಟಿಗೆ ಬೇಡಿಕೆಯಿಟ್ಟಿದ್ದ ಹಂತಕನ ಫೋಟೋ ಬಹಿರಂಗ