ಕೊಪ್ಪಳ: ಸಿ.ಟಿ ರವಿ (CT Ravi) ಅವರನ್ನು ಕೊಲೆಗಡುಕ ಎಂದು ಹೇಳಿರುವ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಅವರ ಬೆಂಬಲಿಗರನ್ನು ಬಂಧಿಸಬೇಕು ಎಂದು ಗಂಗಾವತಿ (Gangavathi) ಶಾಸಕ ಜನಾರ್ದನ ರೆಡ್ಡಿ (G Janardhana Reddy) ಆಗ್ರಹಿಸಿದ್ದಾರೆ.ಇದನ್ನೂ ಓದಿ: ಕಾಡಿನಲ್ಲಿ ನಿಂತಿದ್ದ ಕಾರಿನಲ್ಲಿತ್ತು 40 ಕೋಟಿ ರೂ. ಮೌಲ್ಯದ 52 ಕೆಜಿ ಚಿನ್ನ
Advertisement
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಟಿ ರವಿ ಓರ್ವ ಸಂಭಾವಿತ ರಾಜಕಾರಣಿ. ಉತ್ತಮ ರಾಜಕಾರಣಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಅವರ ಪ್ರಾಣಕ್ಕೆ ಅಪಾಯ ತರುವ ಕೆಲಸ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತರನ್ನು ಕುಗ್ಗುವಂತೆ ಮಾಡಿದ್ದಾರೆ. ಸಭಾಪತಿಗಳೇ ಯಾವುದೇ ರೆಕಾರ್ಡ್ ಇಲ್ಲಾ ಎಂದು ಹೇಳಿದ್ದಾರೆ. ಕಾಂಗ್ರೆಸ್‌ನವರಿಗೆ ವಿನಾಶಕಾಲೇ ವಿಪರೀತ ಬುದ್ಧಿ ಬಂದಿದೆ. ಯಾವುದೋ ವಿಡಿಯೋ ತೋರಿಸಿ ಸಿ.ಟಿ ರವಿ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.
Advertisement
ಸಿ.ಟಿ ರವಿಯನ್ನು ಕೊಲೆಗಡುಕ ಎಂದು ಹೇಳಿದ್ದಾರೆ. ಹಾಗಾದರೆ ಅವರು ಕೊಲೆ ಮಾಡಿದ್ದಾರಾ? ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಟೆರರಿಸ್ಟ್ರಂತೆ ರಾತ್ರಿಯೆಲ್ಲಾ ಬೇರೆಡೆ ಓಡಾಡಿಸಿದ್ದಾರೆ. ರಾತ್ರಿಯೆಲ್ಲಾ ಓಡಾಡಿಸಿ ಹಿಂಸೆ ಕೊಡುವ ಅವಶ್ಯಕತೆ ಇತ್ತಾ? ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ರಾಜ್ಯ ಸರ್ಕಾರ ಪೊಲೀಸರನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಸಿ.ಟಿ ರವಿ ಮೇಲೆ ಹಲ್ಲೆ ಮಾಡಿದವರನ್ನು ಬಂಧನಕೊ ಮಾಡಬೇಕು ಹಾಗೂ ಕೊಲೆಗಡುಕ ಎಂದು ಹೇಳಿರುವ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಅವರ ಬೆಂಬಲಿಗರನ್ನು ಬಂಧಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಬಿಹಾರದಲ್ಲಿ ಥರ್ಮಲ್ ಪವರ್ ಪ್ಲಾಂಟ್ ಸ್ಥಾಪಿಸಲು ಅದಾನಿ ಗ್ರೂಪ್ 20,000 ಕೋಟಿ ಹೂಡಿಕೆ