ಬೆಳಗಾವಿ: ಕೋವಿಡ್ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಗೆ ಹಂಚಿಕೆ ಆಗಿದ್ದ ಆಕ್ಸಿಜನ್‍ನ್ನು ಹುಬ್ಬಳ್ಳಿ – ಧಾರವಾಡಕ್ಕೆ ತೆಗೆದುಕೊಂಡು ಹೋಗಿ ಇಲ್ಲಿಯ ಜನರಿಗೆ ಅನ್ಯಾಯ ಮಾಡಿರುವ ಜಗದೀಶ್ ಶೆಟ್ಟರ್ (Jagadish Shettar) ಕೊಡುಗೆ ಏನಿದೆ? ಈಗ ಇಲ್ಲಿಗೆ ಬಂದು ಕರ್ಮ ಭೂಮಿ ಎನ್ನುತ್ತಿದ್ದಾರೆ. ನಾವೇನು ಹುಚ್ಚರಾ? ಬೆಳಗಾವಿ ಜಿಲ್ಲೆಯ ಜನರನ್ನು ಬಕ್ರಾ ಮಾಡಲು ಬಂದಿದ್ದೀರಾ? ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ವಾಗ್ದಾಳಿ ನಡೆಸಿದ್ದಾರೆ.
ಗೋಕಾಕ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೆಟ್ಟರ್ ಬೆಳಗಾವಿಗೆ ಏನು ಮಾಡಿದ್ದಾರೆ? ಬೆಳಗಾವಿ ದೊಡ್ಡ ಜಿಲ್ಲೆ, ಜನಸಂಖ್ಯೆ ಹೆಚ್ಚಿದೆ. ಕೋವಿಡ್ ಸಂದರ್ಭದಲ್ಲಿ ಜಿಲ್ಲೆಗೆ ಆಕ್ಸಿಜನ್ ಹಂಚಿಕೆ ಮಾಡಿದ್ದನ್ನು ಹುಬ್ಬಳ್ಳಿ -ಧಾರವಾಡಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಇದೇ ಕರ್ಮ ಭೂಮಿಯಾ? ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಇಲ್ಲಿಗೆ ಏನು ಮಾಡಿದ್ದಾರೆ ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ತೆರಿಗೆ ಮೌಲ್ಯಮಾಪನ ಕೇಸ್ – ಹೈಕೋರ್ಟ್‌ನಲ್ಲೂ ಹಿನ್ನಡೆ, 4 ಅರ್ಜಿ ವಜಾ
Advertisement
Advertisement
ಆರು ಬಾರಿ ಹುಬ್ಬಳ್ಳಿ ಜನರು ಅವರನ್ನು ಆಯ್ಕೆ ಮಾಡಿ ಕಳುಹಿಸಿದ್ದರು. ವಿರೋಧ ಪಕ್ಷದ ನಾಯಕರಾದರು, ಮಂತ್ರಿಯಾದರು, ಮುಖ್ಯಮಂತ್ರಿಯಾದರು, ಬಿಜೆಪಿ ಅಧ್ಯಕ್ಷರಾದರು. ಎಲ್ಲವನ್ನೂ ಅನುಭವಿಸಿದ್ದಂತವರನ್ನು ಹುಬ್ಬಳ್ಳಿ- ಧಾರವಾಡ ಜನರು ಹೊರಗೆ ಹಾಕಿದ್ದಾರೆ. ಈಗ ಇಲ್ಲಿಗೆ ಬಂದು ಕರ್ಮ ಭೂಮಿ ಎನ್ನಲು ಏನಿದೆ? ಬೆಳಗಾವಿಗೆ ನಿಮ್ಮ ಕೊಡುಗೆ ಏನಾದರೂ ಇದೆಯಾ? ನಾಚಿಕೆಯಾಗಬೇಕು ನಿಮಗೆ ಎಂದು ಕಿಡಿಕಾರಿದ್ದಾರೆ.
Advertisement
Advertisement
ಗೋ ಬ್ಯಾಕ್ ಶೆಟ್ಟರ್ ಎನ್ನುವುದು ಅವರ ಪಕ್ಷದ ಕಾರ್ಯಕರ್ತರೇ ಮಾಡುತ್ತಿರುವ ಅಭಿಯಾನ, ಅವರ ಪಕ್ಷದ ಕಾರ್ಯಕರ್ತರ ಸ್ವಾಭಿಮಾನಕ್ಕೂ ಧಕ್ಕೆಯಾಗಿದೆ. ಮೋದಿಯವರು ಎಲ್ಲೋ ಹೋಗಿ ಚುನಾವಣೆಗೆ ನಿಂತಿದ್ದಾರೆ ಎಂದು ತಮ್ಮ ಬೆಳಗಾವಿ ಸ್ಪರ್ಧೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇವರೇನು ಮೋದಿಯಷ್ಟು ದೊಡ್ಡವರಾ? ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ – ದಾಳಿಯ ಸಂಚುಕೋರ ಅರೆಸ್ಟ್