ಉಡುಪಿ: ಇದೇ ಮೊದಲ ಬಾರಿಗೆ ಸೈಂಟ್ ಮೇರಿಸ್ ದ್ವೀಪದಲ್ಲಿ (St. Mary’s Island) ಧ್ವಜಾರೋಹಣ ಮಾಡಲಾಗಿದೆ. ಗಣರಾಜ್ಯೋತ್ಸವದ (Republic Day) ಅಂಗವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಇಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದ್ವೀಪದಲ್ಲಿ ಧ್ವಜಾರೋಹಣ ಮಾಡಿದ್ದು ನನ್ನ ಭಾಗ್ಯ. ಉಡುಪಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ದ್ವೀಪದಲ್ಲಿ ಧ್ವಜಾರೋಹಣ ನಡೆದಿದೆ. ಇದು ರೋಮಾಂಚನಕಾರಿ ಅನುಭವ ಎಂದಿದ್ದಾರೆ. ಇದನ್ನೂ ಓದಿ: ಕರ್ತವ್ಯ ಪಥದಲ್ಲಿ ಭಾರತ ಸೇನೆಯ ಶಕ್ತಿ ಪ್ರದರ್ಶನ – ಮೊದಲ ಬಾರಿಗೆ ಕಾಣಿಸಿಕೊಂಡ ಡ್ರೋನ್
ದ್ವೇಷ ಭಾಷಣ ಕಾನೂನು ಜಾರಿಗೂ ಮುನ್ನ ನೋಟಿಸ್ ವಿಚಾರವಾಗಿ, ಈಗ ಕಾಂಗ್ರೆಸ್ ಸರ್ಕಾರ ಇದೆ. ದ್ವೇಷ ಭಾಷಣ ವಿರುದ್ಧ ಕಾನೂನು ರೀತಿಯಲ್ಲಿ ಮಸೂದೆ ತಂದಿದ್ದೇವೆ. ಭವಿಷ್ಯದಲ್ಲಿ ಯಾವತ್ತಾದರೂ ಬಿಜೆಪಿ ಸರ್ಕಾರ ಬರಬಹುದು. ಅವರು ನಮ್ಮ ವಿರುದ್ಧವೂ ಇದನ್ನು ಬಳಕೆ ಮಾಡಬಹುದು. ದೇಶದ ಐಕ್ಯತೆ ಸಮಗ್ರತೆ ಒಂದೇ ಎಂಬುದು ದ್ವೇಷ ಭಾಷಣ ಮಸೂದೆಯ ಉದ್ದೇಶ ಎಂದು ಹೇಳಿದ್ದಾರೆ.
ಜನರು ಒಟ್ಟಿಗೆ ಇರಬೇಕಾದರೆ ಜಾತಿ, ಸ್ಥಳ, ಭಾಷೆ, ವ್ಯಕ್ತಿತ್ವಗಳನ್ನು ನಿಂದಿಸಬಾರದು. ಈ ಕಾರಣಕ್ಕೆ ಸಂವಿಧಾನದ ಆಶಯದಂತೆ ಮಸೂದೆ ತಂದಿದ್ದೇವೆ. ಬಿಜೆಪಿಯವರು ಏನಾದರೂ ಹೇಳಲಿ. ದೇಶದ ಸಂವಿಧಾನಕ್ಕೆ ಧಕ್ಕೆ ಬರಬಾರದು ಎಂಬುದು ಮಾತ್ರ ನಮ್ಮ ಉದ್ದೇಶ. ಕಾಂಗ್ರೆಸಿನವರು ಯಾರಾದರೂ ದ್ವೇಷ ಭಾಷಣ ಮಾಡಿದರೆ ಕಾಂಗ್ರೆಸ್‌ನವರ ಮೇಲೂ ಕಾನೂನು ಜಾರಿಯಾಗುತ್ತದೆ. ವ್ಯಕ್ತಿಗಳ ಹಿನ್ನೆಲೆಯನ್ನು ನೋಡಿ ನೋಟಿಸ್ ಕೊಟ್ಟಿರಬಹುದು. ನೋಟಿಸ್ ಕೊಟ್ಟಿರುವ ವಿಚಾರ ನನಗೆ ಗೊತ್ತಿಲ್ಲ ಎಂದಿದ್ದಾರೆ.
ಉಡುಪಿ ಪರ್ಯಾಯ ವೇಳೆ ಜಿಲ್ಲಾಧಿಕಾರಿ ಭಗವಾಧ್ವಜ ಹಾರಿಸಿದ ವಿಚಾರವಾಗಿ, ಪರ್ಯಾಯ ಒಂದು ಧಾರ್ಮಿಕ ಕಾರ್ಯಕ್ರಮ. ಸಂಸ್ಕೃತಿ, ಧಾರ್ಮಿಕತೆಗೆ ಉಡುಪಿ ಹೆಸರುವಾಸಿ ಆಗಿರುವ ಜಿಲ್ಲೆ. ಭಗವಾಧ್ವಜ ಹಾರಿಸಿದ ವಿಚಾರ ನನಗೆ ಗೊತ್ತಿದೆ. ಅದನ್ನು ಅಲ್ಲಿಗೆ ಬಿಟ್ಟುಬಿಡಿ. ಧಾರ್ಮಿಕ ಮನೋಭಾವನೆಯನ್ನು ಕೆರಳಿಸುವ ಕೆಲಸ ಮಾಡಬಾರದು. ಅಗತ್ಯ ಬಿದ್ದರೆ ನಾನು ಚರ್ಚಿಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಮೋದಿ ಗೌರವ; ರಾಷ್ಟ್ರಪತಿಗಳಿಂದ ಧ್ವಜಾರೋಹಣ

