ಬೆಂಗಳೂರು: ಮಾಜಿ ಸಚಿವ ಡಿಕೆ ಶಿವಕುಮಾರ್ ಅಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇಂದು ಸಿಎಂ ಬಿಎಸ್‍ವೈ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಅವರು 20 ನಿಮಿಷಕ್ಕೂ ಹೆಚ್ಚು ಸಮಯ ಮಾತುಕತೆ ನಡೆಸಿದರು. ಆದರೆ ಈ ವೇಳೆ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿ ತೆರಳಿದ್ದರು. ಆದರೆ ಆ ಬಳಿಕ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಬಿಎಸ್‍ವೈ ಅವರೊಂದಿಗೆ ಇರುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ರಮೇಶ್ ಆಯ್ತು, ಈಗ ಸತೀಶ್ ಜೊತೆ ಲಕ್ಷ್ಮಿ ಹೆಬ್ಬಾಳ್ಕರ್ ಸೆಣಸು!
Advertisement
https://www.instagram.com/p/B4zU3GDnalc/
Advertisement
ಕ್ಷೇತ್ರದ ಅಭಿವೃದ್ಧಿ ಕಾರ್ಯದ ನಿಮಿತ್ತ ಸಿಎಂ ಬಿಎಸ್‍ವೈ ಅವರನ್ನು ಭೇಟಿ ಮಾಡಿದ್ದಾಗಿ ಇನ್‍ಸ್ಟಾ ಪೋಸ್ಟ್ ನಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಬರೆದುಕೊಂಡಿದ್ದಾರೆ. ಆದರೆ ಈ ಹಿಂದೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅಪರೇಷನ್ ಕಮಲಕ್ಕೆ ಒಳಗಾಗಬಹುದು ಎಂಬ ಮಾತು ಕೇಳಿ ಬಂದಿತ್ತು. ಇಂದು ಅನರ್ಹ ಶಾಸಕರ ಪರ ಪ್ರಕರಣ ತೀರ್ಪು ಹೊರ ಬಿದ್ದ ಬೆನ್ನಲ್ಲೇ ಬಿಎಸ್‍ವೈ ನಿವಾಸಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಭೇಟಿ ನೀಡಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
Advertisement
ಸದ್ಯ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಳಗಾವಿ ಗೋಕಾಕ್ ಉಪಚುನಾವಣೆಯಲ್ಲಿ ಪಕ್ಷದ ಟಿಕೆಟ್‍ನ್ನು ಆಶೋಕ್ ಪೂಜಾರಿ ಅವರಿಗೆ ಬೆಂಬಲ ನೀಡಿ ಲಖನ್ ಜಾರಕಿಹೊಳಿ ಅವರಿಗೆ ಟಿಕೆಟ್ ತಪ್ಪಿಸಲು ಯತ್ನಿಸಿದ್ದಾರೆ ಎನ್ನಲಾಗಿದೆ. ಆ ಹಿಂದೆ ಸಮ್ಮಿಶ್ರ ಸರ್ಕಾರದಲ್ಲಿ ರಮೇಶ್ ಜಾರಕಿಹೊಳಿ ಅವರು ಪಕ್ಷದ ನಾಯಕರೊಂದಿಗೆ ವೈಮನಸ್ಸು ಬೆಳಸಿಕೊಳ್ಳಲು ಲಕ್ಷ್ಮಿ ಹೆಬ್ಬಾಳ್ಕರ್ ಕಾರಣ ಎಂಬ ಆರೋಪ ಕೇಳಿ ಬಂದಿತ್ತು. ಸದ್ಯ ಬೆಳಗಾವಿಯಲ್ಲಿ ಜಾರಕಿಹೊಳಿ ಸಹೋದರರಿಗೆ ಸೆಡ್ಡು ಹೊಡೆಯಲು ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಬೆಳಗಾವಿ ಬ್ರದರ್ಸ್‌ಗೆ ಮತ್ತೆ ಲಕ್ಷ್ಮಿ ಸವಾಲು?