ಬೆಳಗಾವಿ: ಉತ್ತಮ ಮಳೆಯಿಂದ ಮಲಪ್ರಭಾ ಜಲಾಶಯ ಮಟ್ಟ ಸಂಪೂರ್ಣ ಭರ್ತಿಯಾಗಿದ್ದು, ಪ್ರತಿವರ್ಷದಂತೆ ಹುಬ್ಬಳ್ಳಿ (Hubballi), ಧಾರವಾಡ (Dharawada) ಸೇರಿದಂತೆ ಸವದತ್ತಿ, ಬೈಲಹೊಂಗಲ ತಾಲೂಕುಗಳಿಗೆ ಮಲಪ್ರಭಾ ಜಲಾಶಯದಿಂದ ಕುಡಿಯುವ ನೀರು ಬಿಡುಗಡೆ ಮಾಡಲಾಗುತ್ತಿದೆ. ಬೇಸಿಗೆ ಕಾಲದಲ್ಲಿ ಜನ, ಜಾನುವಾರುಗಳಿಗೆ ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ನೀರಿನ ಸಮಸ್ಯೆ ಇರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar ) ಅವರು ಹೇಳಿದರು.
ಮಲಪ್ರಭಾ ನೀರಾವರಿ ಸಲಹಾ ಸಮಿತಿ ವತಿಯಿಂದ ನವಿಲುತೀರ್ಥ ಅಣೆಕಟ್ಟು ಸ್ಥಳದಲ್ಲಿ ಗಂಗಾ ಪೂಜೆ ನೆರವೇರಿಸಿ, ಬಾಗಿನ ಅರ್ಪಿಸಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನವಿಲುತೀರ್ಥ ಡ್ಯಾಂ ಉತ್ತರ ಕರ್ನಾಟಕದ ರೈತರ ಜೀವವಾಗಿರುವ ‘ಮಲಪ್ರಭಾ ಜಲಾಶಯ’ ಭರ್ತಿಯಾಗಿದೆ. ಈ ಶುಭ ಸಂದರ್ಭದಲ್ಲಿ ಮಲಪ್ರಭಾ ಜಲಾಶಯಕ್ಕೆ ಗಂಗಾ ಪೂಜೆ ಹಾಗೂ ‘ಬಾಗಿನ ಅರ್ಪಣೆ’ ಸಲ್ಲಿಸುವುದು ನಮ್ಮ ಭಾಗ್ಯ ಎಂದು ಹೇಳಿದರು. ಇದನ್ನೂ ಓದಿ: Bengaluru | ನಿಲ್ಲದ ವರುಣನ ಆರ್ಭಟ: ನಾಳೆ ಶಾಲೆಗಳಿಗೆ ರಜೆ ಘೋಷಣೆ
Advertisement
Advertisement
ವರುಣನ ಕೃಪೆ, ತಾಯಿ ರೇಣುಕಾ ಯಲ್ಲಮ್ಮ ಅನುಗ್ರಹದಿಂದ ಮಲಪ್ರಭಾ ನದಿಗೆ ನಾವೆಲ್ಲ ಬಾಗಿನ ಅರ್ಪಣೆ ಮಾಡುವ ಸೌಭಾಗ್ಯ ಸಿಕ್ಕಿದೆ. ಕಳೆದ ವರ್ಷ ನಾವು ಕಷ್ಟದಲ್ಲಿದ್ದೆವು. ಆದರೂ ಶಕ್ತಿ ಮೀರಿ ರೈತರನ್ನು ಕಾಪಾಡುವ ಕೆಲಸ ಮಾಡಿದ್ದೇವೆ. ಈಗ ಮಲಪ್ರಭಾ ತಾಯಿಯ ಕೃಪೆ ನಮಗೆ ಸಿಕ್ಕಿದೆ. ಬೇಸಿಗೆ ಕಾಲದಲ್ಲಿ ಬಾದಾಮಿ, ರಾಮದುರ್ಗ, ನವಲಗುಂದ ತಾಲೂಕುಗಳ ಜೊತೆಗೆ ಮಲಪ್ರಭಾ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೂ ನೀರು ಬಿಡುಗಡೆಗೆ ಜಲಾಶಯದಲ್ಲಿ ನೀರು ಸಂಗ್ರಹಣೆ ಮಾಡಲಾಗಿದೆ. ಈ ಭಾಗದ ಶಾಸಕರ ಆಶಯದಂತೆ ಮುಂದಿನ ದಿನಗಳಲ್ಲಿ ಉದ್ಯಾನವನ, ವೀಕ್ಷಕರಿಗೆ ಆಸನ ಸೇರಿದಂತೆ ಜಲಾಶಯ ಅಭಿವೃದ್ಧಿಪಡಿಸಿ ಕೆಆರ್‌ಎಸ್ ಮಾದರಿಯಲ್ಲಿ ಮಾರ್ಪಾಡು ಮಾಡಲಾಗುವುದು ಎಂದು ಅವರು ತಿಳಿಸಿದರು. ಇದನ್ನೂ ಓದಿ: 95 ನಿಮಿಷಗಳ ಥ್ರಿಲ್ಲರ್ ‘ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರ ಈ ವಾರ ತೆರೆಗೆ!
Advertisement
Advertisement
ಕೆಆರ್‌ಎಸ್, ಆಲಮಟ್ಟಿ ಅಣೆಕಟ್ಟುಗಳು ಮಾದರಿಯಲ್ಲಿ ಮಲಪ್ರಭಾ ಜಲಾಶಯದ ಸುತ್ತಮುತ್ತ ಪ್ರದೇಶವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಎಲ್ಲ ಶಾಸಕರು, ಜನಪ್ರತಿನಿಧಿಗಳು ಶ್ರಮ ವಹಿಸಲಿದ್ದಾರೆ. ನಾಲ್ಕು ಜಿಲ್ಲೆಯ 13 ತಾಲೂಕುಗಳ ಜನರು ಕುಡಿಯುವ ನೀರು, ಕೃಷಿ ಚಟುವಟಿಕೆಗಳಿಗೆ ಈ ಜಲಾಶಯದ ಅವಲಂಬಿತರಾಗಿದ್ದಾರೆ. ಈಗ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಜನರು ಸಂತಸದಲ್ಲಿದ್ದಾರೆ ಎಂದು ನವಲಗುಂದ ಶಾಸಕ ಎನ್.ಹೆಚ್. ಕೋನರೆಡ್ಡಿ ಅವರು ಹೇಳಿದರು. ಇದನ್ನೂ ಓದಿ: ಕೋಲಾರ| ಮಳೆ, ಚಳಿಯನ್ನೂ ಲೆಕ್ಕಿಸದೇ ಚಿಕನ್ ಬಿರಿಯಾನಿಗಾಗಿ ಮುಗಿಬಿದ್ದ ಜನ
ಮಲಪ್ರಭೆಯ ಇಂದಿರಾ ಗಾಂಧಿ ಜಲಾಶಯ ತುಂಬಿ ಹರಿಯುತ್ತಿದ್ದು, ಇದು ಎಲ್ಲರೂ ಸಂತಸ ಪಡುವ ವಿಷಯವಾಗಿದೆ. ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಈ ಭಾಗದ ರೈತರಿಗೆ, ದನಕರುಗಳಿಗೆ ಕುಡಿಯುವ ನೀರಿನ ಯಾವುದೇ ಅಡೆತಡೆ ಇಲ್ಲ. ಸರ್ಕಾರದಿಂದ ಜಲಾಶಯದ ಇನ್ನಷ್ಟು ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಸವದತ್ತಿ ವಿಧಾನಸಭಾ ಮತಕ್ಷೇತ್ರದ ಶಾಸಕ ವಿಶ್ವಾಸ ವೈದ್ಯ ಅವರು ತಿಳಿಸಿದರು. ಇದನ್ನೂ ಓದಿ: ಭ್ರಷ್ಟ ಸರ್ಕಾರವನ್ನ ವಜಾ ಮಾಡಲು ರಾಷ್ಟ್ರಪತಿಗಳಿಗೆ ಮನವಿ: ಬಿ.ವೈ.ವಿಜಯೇಂದ್ರ
ಬಾದಾಮಿ ಶಾಸಕ ಚಿಮ್ಮನಕಟ್ಟಿ, ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಸಭೆಯ ಸದಸ್ಯರು, ಮಲಪ್ರಭಾ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ನವಿಲುತೀರ್ಥ ವೃತ್ತದ ಅಧೀಕ್ಷಕ ಎಂಜಿನಿಯರ್ ವಿ.ಎಸ್.ಮಧುಕರ, ನೀರಾವರಿ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಹಾಡಹಗಲೇ ಚಾಕುವಿನಿಂದ ಇರಿದು ಆಟೋ ಚಾಲಕನ ಕೊಲೆ