– ಉಡುಪಿ ಪ್ರಕರಣದಲ್ಲಿ ಬಂದಿದ್ದ ರಾಷ್ಟ್ರೀಯ ಮಹಿಳಾ ಆಯೋಗ ಈಗೆಲ್ಲಿ?
ಬೆಳಗಾವಿ: ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ವೀಡಿಯೋ ಮಾಡಿ ಮಹಿಳೆಯರನ್ನು ಜೀವಂತವಾಗಿ ಕೊಲೆ ಮಾಡಿದ್ದಾರೆ. ಇಷ್ಟೆಲ್ಲಾ ನಡೆದ್ರೂ ಬಿಜೆಪಿಯವರು ಬಾಯಿಮುಚ್ಚಿಕೊಂಡು ಕುಳಿತುಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಕಿಡಿಕಾರಿದ್ದಾರೆ.
Advertisement
ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ, ಪ್ರಜ್ವಲ್ ರೇವಣ್ಣ ವಿಕೃತ ಕಾಮಿ ಎಂದು ಗೊತ್ತಿದ್ದರೂ ಸಹ ಬಿಜೆಪಿಯವರು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಇಡೀ ರಾಜ್ಯ, ದೇಶ, ವಿಶ್ವವೇ ತಲೆತಗ್ಗಿಸುವ ಈ ಘಟನೆಯ ಬಗ್ಗೆ ಬಿಜೆಪಿಯವರ ನಿಲುವು ಸ್ಪಷ್ಟಪಡಿಸಬೇಕು. ಹುಬ್ಬಳ್ಳಿಯಲ್ಲಿ ಹೋರಾಟ ಮಾಡಿದವರಿಗೆ ಈ ನೂರಾರು ಮಹಿಳೆಯರ ನೋವಿನ ಕೂಗು ಏಕೆ ಕೇಳುತ್ತಿಲ್ಲ? ಏಕೆ ಮೌನ ವಹಿಸಿದ್ದಾರೆ ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಗೌಡರ ಮನೆಗೆ ಕಪ್ಪು ಚುಕ್ಕಿ ತರಲು ದೂರು: ಸಂತ್ರಸ್ತೆಯ ವಿರುದ್ಧವೇ ಕುಟುಂಬಸ್ಥರಿಂದ ಆರೋಪ
Advertisement
Advertisement
ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಪ್ರಜ್ವಲ್ ರೇವಣ್ಣ (Prajwal Revanna) ಅವರ ವೀಡಿಯೋ ತುಣುಕುಗಳು ಹರಿದಾಡುತ್ತಿವೆ. ಇಡೀ ರಾಜ್ಯ ತಲೆ ತಗ್ಗಿಸುವ ಕೆಲಸವನ್ನು ಅವರು ಮಾಡಿದ್ದಾರೆ. ಈ ಎಲ್ಲಾ ವಿಚಾರಗಳನ್ನು ಮುಂಚೆಯೇ ಹಾಸನದ ಬಿಜೆಪಿ ನಾಯಕ ದೇವರಾಜ ಗೌಡ ಅವರು ತಿಳಿಸಿದ್ದರು. ಅವರು ಈ ರೀತಿ ಇದ್ದಾರೆ. ಮೈತ್ರಿ ಮಾಡಿಕೊಳ್ಳುವುದು ಬೇಡ, ಅವರಿಂದ ಪಕ್ಷಕ್ಕೆ ಹಾನಿಯಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೂ ತಿಳಿಸಿದ್ದರು. ಇದೆಲ್ಲಾ ಬಿಜೆಪಿಯವರಿಗೆ ಮುಂಚೆಯೇ ಗೊತ್ತಿದ್ದರೂ ಕೂಡ ತಮ್ಮ ರಾಜಕೀಯ ಲಾಭಕ್ಕಾಗಿ, ಬೇಟಿ ಬಚಾವ್-ಬೇಟಿ ಪಡಾವ್, ನಾರಿ ಶಕ್ತಿ ಎನ್ನುವ ಬಿಜೆಪಿ ನಾಯಕರು ಮೈತ್ರಿ ಮಾಡಿಕೊಂಡರು ಎಂದು ಅವರು ಕಿಡಿಕಾರಿದ್ದಾರೆ.
Advertisement
ಮೈಸೂರಿಗೆ ಅಮಿತ್ ಷಾ ಬಂದ ವೇಳೆ ಹಾಸನದ ಮಾಜಿ ಶಾಸಕ ಪ್ರೀತಂಗೌಡ, ಎ.ಟಿ ರಾಮಸ್ವಾಮಿಯವರು ಖುದ್ದಾಗಿ ಅವರನ್ನು ಭೇಟಿಯಾಗಿ, ಈ ಎಲ್ಲಾ ವಿಚಾರಗಳನ್ನು ತಿಳಿಸಿದ್ದಾರೆ. ಅಮಿತ್ ಷಾ ಅವರಿಗೂ ಪ್ರಜ್ವಲ್ ರೇವಣ್ಣ ಅವರ ಕರ್ಮಕಾಂಡ ಮುಂಚೆಯೇ ಗೊತ್ತಿತ್ತು. ಇಷ್ಟೆಲ್ಲಾ ಆದರೂ ಬಿಜೆಪಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ಈ ವಿಚಾರದಲ್ಲಿ, ವಿಪಕ್ಷ ನಾಯಕ ಆರ್.ಅಶೋಕ್ ಅವರನ್ನು ಮಾಧ್ಯಮಗಳು ಪ್ರಶ್ನಿಸಿದರೆ, ಅದನ್ನು ಅವರ ಪಕ್ಷ ನೋಡಿಕೊಳ್ಳುತ್ತದೆ ಎಂದು ಹಾರಿಕೆ ಉತ್ತರ ನೀಡಿದ್ದಾರೆ. ಹುಬ್ಬಳ್ಳಿ ಘಟನೆಗೆ ತೋರಿಸಿದಷ್ಟು ಆಸಕ್ತಿಯನ್ನು ಜಗದೀಶ್ ಶೆಟ್ಟರ್ ಏಕೆ ತೋರುತ್ತಿಲ್ಲ? ನನ್ನ ಬಗ್ಗೆ ಮಾತನಾಡಿದ ಸಂಜಯ್ ಪಾಟೀಲ್ ಈ ಘಟನೆ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.
ಉಡುಪಿಯಯಲ್ಲಿ ನಡೆದ ಪ್ರಕರಣದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗ (Commission for Women) ಬಂದಿತ್ತು. ಈಗ 2000 ವೀಡಿಯೋಗಳು ಹರದಾಡುತ್ತಿದ್ದರೂ ಅವರೆಲ್ಲಾ ಎಲ್ಲಿದ್ದಾರೆ? ನೀವು, ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಣೆ ಮಾಡುತ್ತಿಲ್ಲ ಎಂದಾದರೆ ಇಂಟರ್ ಪೋಲ್ ಸಹಾಯ ಪಡೆದು ಹೊರಗಿನಿಂದ ಕರೆಸಲಿ. ನಮಗೆ ವಿಷಯ ಗೊತ್ತಾದ ತಕ್ಷಣ ಎಸ್‍ಐಟಿ ರಚನೆ ಮಾಡಿದ್ದೇವೆ. ವಿಶೇಷ ನ್ಯಾಯಾಲಯ ಸ್ಥಾಪಿಸಿದ್ದೇವೆ. ನ್ಯಾಯ ಕೊಡಿಸುವ ಜವಾಬ್ದಾರಿಯನ್ನು ನಾವು ಹೊತ್ತುಕೊಂಡಿದ್ದೇವೆ ಎಂದು ಅವರು ಹೇಳಿದ್ದಾರೆ.
ಶೋಭಾ ಕರಂದ್ಲಾಜೆ, ಸ್ಮೃತಿ ಇರಾನಿ ಎಲ್ಲಿದ್ದೀರಾ?
ಪ್ರಧಾನಿಗಳು (Narendra Modi) ಕೆಲವು ಅಮಾನವೀಯ ಘಟನೆ ಖಂಡಿಸಿದ್ದಾರೆ. ನಿಮ್ಮ ಪಕ್ಕದಲ್ಲಿ ಕುಳಿತುಕೊಳ್ಳಲು ಅವಕಾಶ ಮಾಡಿಕೊಟ್ಟ ಸಂಸದರ ಬಗ್ಗೆ ನಿಮ್ಮ ನಿಲುವು ಏನು? ನಿಮ್ಮ ನಾರಿ ಸಮ್ಮಾನ್ ಇದೇನಾ? ಮಂಡ್ಯದ ಮಗಳು ಎಂದು ಹೇಳುವ ಸುಮಲತಾ ಈಗ ಎಲ್ಲಿದ್ದಾರೆ? ಏಕೆ ಇದರ ಬಗ್ಗೆ ಮಾತನಾಡುತ್ತಿಲ್ಲ? ನನಗೆ ವಿದೇಶದಿಂದ ಪೆÇೀನ್‍ಗಳು ಬರುತ್ತಿವೆ. ಬೇರೆ ಬೇರೆ ರಾಜ್ಯಗಳ ಮಹಿಳಾ ಮಕ್ಕಳ ಅಭಿವೃದ್ಧಿ ಸಚಿವರು ಕರೆ ಮಾಡಿ ಇದರ ಬಗ್ಗೆ ವಿಚಾರಿಸುತ್ತಿದ್ದಾರೆ ಎಂದರು.
ಮೋದಿ ಅವರು ಮಾಂಗಲ್ಯದ ಬಗ್ಗೆ ಮಾತನಾಡಿದ್ದಾರೆ. ಸದ್ಯ ಈ ಮಹಿಳೆಯರ ಮಾಂಗಲ್ಯ ಕಸಿದುಕೊಂಡಿರುವ ಬಗ್ಗೆ ಮಾತನಾಡಿ. ಕುಮಾರಸ್ವಾಮಿ ನಿಮ್ಮ ಬದ್ಧತೆಯನ್ನು ನಾವು ಪ್ರಶ್ನೆ ಮಾಡಲೇಬೇಕಾಗಿದೆ. ನಮ್ಮ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸುತ್ತದೆ. ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ಜೊತೆಗೂ ಮಾತನಾಡಿದ್ದೇವೆ. ಮಹಿಳೆಯರಿಗೆ ನ್ಯಾಯ ಒದಗಿಸಿಕೊಡುತ್ತೇವೆ. ನೋಂದವರ ಪರ ಸರ್ಕಾರ ನಿಲ್ಲುತ್ತದೆ. ಅವರಿಗೆ ಸರ್ಕಾರ ರಕ್ಷಣೆ ನೀಡುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಜೆಡಿಎಸ್‍ನಿಂದ ಪ್ರಜ್ವಲ್ ರೇವಣ್ಣ ಅಮಾನತು