ಬೆಳಗಾವಿ: ಸ್ಥಳೀಯ ಮುಖಂಡರ ಜೊತೆಗೆ ಇರುವ ಭಿನ್ನಾಭಿಪ್ರಾಯ ಜಿಲ್ಲೆಗೆ ಸೀಮಿತ. ಈ ಜಗಳ ಲೋಕಸಭೆ ಚುನಾವಣೆ, ಪಕ್ಷದ ಸಂಘಟನೆ ಮೇಲೆ ಪರಿಣಾಮ ಬೀರಲ್ಲ. ಜಾರಕಿಹೊಳಿ ದೊಡ್ಡವರು, ಅವರು ಸಮರ್ಥ ನಾಯಕರಾಗಿದ್ದು ಅವರ ಬಗ್ಗೆ ನಾನು ಏನು ಹೇಳಲ್ಲ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸಮುದ್ರ ಇದ್ದಂತೆ. ಜಿಲ್ಲಾ ಉಸ್ತುವಾರಿ ಸಚಿವರಿಂದ ಎಲ್ಲ ನಾಯಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಹೈಕಮಾಂಡ್ ಅವಕಾಶ ನೀಡಿದೆ. ಅದ್ದರಿಂದ ಪಕ್ಷದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಯಿತು. ಪಕ್ಷದ ಒಳಿತಿಗಾಗಿ ತಗ್ಗಿ, ಬಗ್ಗಿ ನಡೆಯಲು ನಾನು ಸಿದ್ಧವಾಗಿದ್ದು, ಆದರೆ ಕ್ಷೇತ್ರ ವಿಚಾರ ಬಂದಾಗ ನಾನು ನ್ಯಾಯ ಒದಗಿಸಲು ಹೋರಾಟ ನಡೆಸುತ್ತೇನೆ ಎಂದರು.
Advertisement
Advertisement
ಕಾಂಗ್ರೆಸ್ ಸಭೆಯಲ್ಲಿ ರಮೇಶ ಜಾರಕಿಹೊಳಿ, ಡಿಕೆಶಿ ಜಟಾಪಟಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ನಡೆದಿರುವುದು ಬೇರೆ, ಮಾಧ್ಯಮದಲ್ಲಿ ವರದಿ ಮಾಡಿರುವುದು ಬೇರೆ. ನಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಲ್ಲರೂ ಪಕ್ಷ ಸಂಘಟನೆಯ ದೃಷ್ಟಿಯಿಂದ ಕಾರ್ಯನಿರ್ವಹಿಸುತ್ತೆವೆ. ಆದರೆ ಪಕ್ಷದ ಸಭೆಯಲ್ಲಿ ನನ್ನ ವಿಚಾರದಲ್ಲಿ ರಮೇಶ ಜಾರಕಿಹೊಳಿ, ಡಿಕೆ ಶಿವಕುಮಾರ್ ನಡುವೆ ಯಾವುದೇ ವಾಗ್ವಾದ ನಡೆದಿಲ್ಲ. ಆದರೆ ಲೋಕಸಭೆ ಚುನಾವಣೆ ಅಭ್ಯರ್ಥಿಯಲ್ಲಿ ಆಯ್ಕೆ ಕೆಲ ಮಾತುಕತೆ ನಡೆದಿದೆ ಎಂದು ಸ್ಪಷ್ಟಪಡಿಸಿದರು.
Advertisement
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ರಾಜ್ಯ ಸಮ್ಮಿಶ್ರ ಸರ್ಕಾರವೂ ಕೂಡ ಉತ್ತಮವಾಗಿ ಆಡಳಿತ ನಡೆಸುತ್ತಿದ್ದು. ಮುಂದಿನ ಲೋಕಸಭಾ ಚುನಾವಣೆಯಲ್ಲೂ ರಾಜ್ಯದ ಜನ ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ. ಜಿಲ್ಲೆಯ ಅಭಿವೃದ್ಧಿ ಸೇರಿದಂತೆ ಎಲ್ಲಾ ಕಾರ್ಯಗಳಲ್ಲೂ ಪಕ್ಷದ ನಾಯಕರು ಉತ್ತಮ ಸಹಕಾರ ನೀಡಿದ್ದಾರೆ. ಜಾರಕಿಹೊಳಿ ಅವರು ನಮ್ಮ ನಾಯಕರಾಗಿದ್ದು, ಅವರು ಹೇಳಿದ ದಾರಿಯಲ್ಲಿ ನಾವು ನಡೆಯುತ್ತೇವೆ ಎಂದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv