ಬೆಳಗಾವಿ: ಕುಂದಾನಗರಿಯ ನಂದಿಹಳ್ಳಿ ಗ್ರಾಮದಲ್ಲಿ 1.07 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಿದರು.
ಕರ್ನಾಟಕ ನೀರಾವರಿ ನಿಗಮದ ವತಿಯಿಂದ 60 ಲಕ್ಷ ರೂ. ಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಯ ನಿರ್ಮಾಣದ ಕಾಮಗಾರಿ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ವತಿಯಿಂದ 28 ಲಕ್ಷ ರೂ.ಗಳ ವೆಚ್ಚದಲ್ಲಿ ನಂದಿಹಳ್ಳಿ ಗ್ರಾಮದಿಂದ ಯರಮಾಳವರೆಗೆ ರಸ್ತೆಯ ಅಭಿವೃದ್ಧಿ, ಲೋಕೋಪಯೋಗಿ ಇಲಾಖೆಯ ವತಿಯಿಂದ 12 ಲಕ್ಷ ರೂ. ಗಳ ವೆಚ್ಚದಲ್ಲಿ ನಂದಿಹಳ್ಳಿ ಗ್ರಾಮದಿಂದ ಬೊರಗಾಂವ ಗರ್ಲಗುಂಜಿ ರಸ್ತೆಯ ಅಭಿವೃದ್ಧಿಗೆ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಇದನ್ನೂ ಓದಿ: ಆಕಾಶದಲ್ಲಿ ಹಾರಾಡಿತು ಪೈಲಟ್ ರಹಿತ ಹೆಲಿಕಾಪ್ಟರ್
ಬ್ರಹ್ಮಲಿಂಗ ದೇವಸ್ಥಾನದ ಅಭಿವೃದ್ಧಿಗಾಗಿ ಶಾಸಕರ ಅನುದಾನದಲ್ಲಿ ದೇವಸ್ಥಾನದ ಸಮಿತಿಯವರಿಗೆ 7 ಲಕ್ಷ ರೂ. ಗಳ ಚೆಕ್ನ್ನು ಈ ಸಂದರ್ಭದಲ್ಲಿ ಹಸ್ತಾಂತರಿಸಲಾಯಿತು. ಜೊತೆಗೆ ನೂತನವಾಗಿ ನಿರ್ಮಾಣಗೊಂಡ ಪಶು ಆಸ್ಪತ್ರೆಯನ್ನು ಸಹ ಅವರು ಉದ್ಘಾಟಿಸಿದರು. ಇದನ್ನೂ ಓದಿ: ಹೆಲ್ಮೆಟ್ ಹಾಕಿದ್ರೆ ಸೇಫ್ಟಿ ಅಲ್ವಾ ಅದ್ಕೆ ಹಿಜಬ್ ಹಾಕಿದ್ರೆ ಸೇಫ್ಟಿ ಅಂದಿದ್ದು: ಜಮೀರ್ ಸಮರ್ಥನೆ