– ರಾಮರಾಜ್ಯದ ಪರಿಕಲ್ಪನೆ ಕಾಂಗ್ರೆಸ್‌ನದ್ದು ಎಂದ ಸಚಿವೆ
– ಪ್ರಹ್ಲಾದ್ ಜೋಶಿ ಸೋಲಿಸಲು ಸೂಕ್ತ ಅಭ್ಯರ್ಥಿ ನಿಲ್ಲಿಸುತ್ತೇವೆ
ಹುಬ್ಬಳ್ಳಿ: ಬಿಜೆಪಿಯವರು ಅಗತ್ಯವಿದ್ದಾಗ ಮಾತ್ರ ಜಾತ್ಯತೀತತೆ ಬಗ್ಗೆ ಮಾತನಾಡ್ತಾರೆ. ʻಕೈಮುಗಿದು ಒಳಗೆ ಬಾ ಅಥವಾ ಧೈರ್ಯವಾಗಿ ಪ್ರಶ್ನಿಸಿʼ ಅನ್ನೋದು ಎರಡೂ ಒಂದೇ ಅಂತ ಹೇಳುವ ಮೂಲಕ ವಸತಿ ಶಾಲೆಗಳ (Residential Schools) ದ್ವಾರದಲ್ಲಿದ್ದ ಬರಹ ಬದಲಾವಣೆಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಸಮರ್ಥಿಸಿಕೊಂಡರು.
ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ್ಞಾನ ದೇಗುಲಕ್ಕೆ ಜ್ಞಾನ ತೆಗೆದುಕೊಳ್ಳಲು ಬನ್ನಿ. ಆತ್ಮವಿಶ್ವಾಸ ಹೆಚ್ಚಿಸಿಕೊಂಡು ಧೈರ್ಯದಿಂದ ಜೀವನ ಸಾಗಿಸಿ, ಇದರ ಬಗ್ಗೆ ನಾನು ಜಾಸ್ತಿ ಹೇಳಿದ್ರೆ ಪರ ವಿರುದ್ಧದ ಹೇಳಿಕೆಗಳು ಹೆಚ್ಚಾಗುತ್ತೆ ಎಂದು ಹೇಳಿದರು. ಇದನ್ನೂ ಓದಿ: ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು- ಚರ್ಚೆಗೆ ಗ್ರಾಸವಾಯ್ತು ವಸತಿ ಶಾಲೆಗಳಲ್ಲಿನ ಬರಹ
Advertisement
Advertisement
ಏನಿದು ವಿವಾದ?
ವಿಜಯಪುರ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ (Morarji Residential School) ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಬರಹವನ್ನು ಬದಲಿಸಿ ಹಾಕಿ ವಿವಾದಕ್ಕೀಡಾದ ಘಟನೆ ನಡೆದಿದೆ. ಕುವೆಂಪು ಅವರ ‘ಜ್ಞಾನ ದೇಗುಲವಿದು ಕೈಮುಗಿದು ಬಳಗೆ ಬಾ’ ಎಂಬ ಸಾಲುಗಳ ಬದಲಾಗಿ ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಬದಲಾಯಿಸಿ ಶಾಲೆಯ ಪ್ರವೇಶ ದ್ವಾರದಲ್ಲಿ ಬರೆಯಲಾಗಿದೆ. ಇದು ಆಡಳಿತ ಸರ್ಕಾರ ಹಾಗೂ ಪ್ರತಿಪಕ್ಷಗಳ ನಡುವೆ ಚರ್ಚಗೆ ಗ್ರಾಸವಾಗಿದೆ. ಇದನ್ನೂ ಓದಿ: ಧೈರ್ಯವಾಗಿ ಪ್ರಶ್ನಿಸಿ ಅಂದಿದ್ದು ತಪ್ಪಿಲ್ಲ- ಕುವೆಂಪು ಬರಹ ಬದಲಿಕೆಗೆ ಪ್ರಿಯಾಂಕ್ ಖರ್ಗೆ ಸಮರ್ಥನೆ
Advertisement
Advertisement
ರಾಮರಾಜ್ಯದ ಪರಿಕಲ್ಪನೆ ಕಾಂಗ್ರೆಸ್‌ನದ್ದು:
ಇನ್ನೂ ಸುಪ್ರೀಂ ಕೋರ್ಟ್ ಸೂಚಿಸಿದ ಜಾಗದಲ್ಲಿ ರಾಮಮಂದಿರ ಕಟ್ಟಿಲ್ಲ ಎಂಬ ಲಾಡ್ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ಬಗ್ಗೆ ಸೂಕ್ತ ಉತ್ತರ ಸಿಗಬೇಕಂದ್ರೆ ನೀವು ಸಂತೋಷ್ ಲಾಡ್ ಅವರನ್ನೇ ಕೇಳಿ. ನಾವು ರಾಮ ರಾಜ್ಯದ ಪರಿಕಲ್ಪನೆ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದೇವೆ. ಮನುಷ್ಯ ನಿಧನವಾದ ನಂತರ ರಾಮ ನಾಮ ಜಪಿಸುತ್ತೇವೆ. ಆ ಸದ್ಗತಿ ಸಿಗಲಿ ಅನ್ನೋದೇ ರಾಮರಾಜ್ಯ ಪರಿಕಲ್ಪನೆ. ರಾಮ ರಾಜ್ಯದಲ್ಲಿ ಎಲ್ಲರೂ ಸಂತೋಷವಾಗಿರಬೇಕು. ಈ ಪರಿಕಲ್ಪನೆ ತಂದವರೇ ಕಾಂಗ್ರೆಸ್‌ನವರು ಎಂದು ಬೀಗಿದರು.
ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಹೆಸರು ಪ್ರಕಟಿಸುವ ಕುರಿತು ಮಾತನಾಡಿ, ಶೀಘ್ರವೇ ಅಭ್ಯರ್ಥಿಯ ಹೆಸರು ಅಂತಿಮವಾಗಲಿದೆ. ನಮ್ಮ ಎದುರಾಳಿ ಪ್ರಹ್ಲಾದ್ ಜೋಶಿ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ಜೋಶಿ ಹಿಂದೆ 4 ಬಾರಿ ಆಯ್ಕೆಯಾದವರು ಮತ್ತು ಕೇಂದ್ರದಲ್ಲಿ ಸಚಿವರಾದವರು. ಅವರನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಸೂಕ್ತ ಅಭ್ಯರ್ಥಿಯನ್ನು ಅಂತಿಮಗೊಳಿಸುತ್ತೇವೆ ಎಂದರು.
ಹೆಬ್ಬಾಳ್ಕರ್ ಅಳಿಯ ರಜತ್ ಉಳ್ಳಾಗಡ್ಡಿ ಮಠ ಶಕ್ತಿ ಪ್ರದರ್ಶನ ವಿಚಾರ ಕುರಿತು ಮಾತನಾಡಿ, ರಜತ್ ನನ್ನ ಅಳಿಯ ಅನ್ನೋ ಕಾರಣಕ್ಕೆ ಅರ್ಜಿ ಹಾಕಿಲ್ಲ. ಹೈಕಮಾಂಡ್ ಎಲ್ಲವನ್ನೂ ಗಮನಿಸಿ ಸೂಕ್ತ ಕ್ರಮ ಕೈಗೊಳ್ಳಲಿದೆ. ಎಲ್ಲರ ಅಭಿಪ್ರಾಯ ಪಡೆದ ನಂತರವೇ ಅಭ್ಯರ್ಥಿಯನ್ನ ಅಂತಿಮಗೊಳಿಸಲಾಗುತ್ತೆ. ಇಡೀ ರಾಜ್ಯದಲ್ಲಿ ಯುವಕರಿಗೆ ಮತ್ತು ಹಿರಿಯರಿಗೆ ಇಬ್ಬರಿಗೂ ಅವಕಾಶ ಕೊಡಲಾಗುತ್ತೆ.
ಮುಂದಿನ ಲೋಕಸಭಾ ಚುನಾವಣೆಗೆ ನನ್ನ ಮಗನೂ ಟಿಕೆಟ್ ಆಕಾಂಕ್ಷಿಯಾಗಿ ಅರ್ಜಿ ಕೊಟ್ಟಿದ್ದಾನೆ. ಟಿಕೆಟ್ ಕೊಡಲೇಬೇಕು ಅಂತ ನಾನು ಎಲ್ಲಿಯೂ ಒತ್ತಾಯಿಸಿಲ್ಲ ಹೈಕಮಾಂಡ್ ಮತ್ತು ಜಿಲ್ಲೆಯ ಮುಖಂಡರ ತೀರ್ಮಾನಕ್ಕೆ ನಾನು ಬದ್ಧ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 6 ಅಡಿ ಎತ್ತರದ ಟಿಪ್ಪುಸುಲ್ತಾನ್ ಕಟೌಟ್ ತೆರವಿಗೆ ನೋಟಿಸ್- DYFI ಮುಖಂಡರು ಆಕ್ರೋಶ