ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ (Gruha Lakshmi Scheme)ಜುಲೈ ಕಂತಿನ ಹಣ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆ ನಿರಂತರ ಪ್ರಕ್ರಿಯೆ ಸರ್ಕಾರ ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು (Guarantee Scheme) ನಿಲ್ಲಿಸುವ ಮಾತೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಜಮೀರ್ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಿ: ಎಜಿಗೆ ಟಿ ಜೆ ಅಬ್ರಹಾಂ ದೂರು
Advertisement
Advertisement
ಪಂಚಮಸಾಲಿ ಸಮುದಾಯಕ್ಕೆ ಮಾಜಿ ಸಚಿವ ಮುರುಗೇಶ್ ನಿರಾಣಿ (Murugesh Nirani) ಅವರ ಕೊಡುಗೆ ಏನು ಎಂದು ಸಚಿವರು ಪ್ರಶ್ನಿಸಿದ ಹೆಬ್ಬಾಳ್ಕರ್ ನಾನು ಎಂದಿಗೂ ಪಂಚಮಸಾಲಿ ಮೀಸಲಾತಿ ಪರವಾಗಿದ್ದೇನೆ. 2ಎ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಸದಾ ನನ್ನ ಬೆಂಬಲ ಇರುತ್ತದೆ ಎಂದರು.
Advertisement
ಮುರುಗೇಶ್ ನಿರಾಣಿ ಅವರು ಅಧಿಕಾರದಲ್ಲಿದ್ದಾಗ ಸಮುದಾಯದ ಬಗ್ಗೆ ಯೋಚಿಸಲಿಲ್ಲ. ಈಗ ಸುಖಾಸುಮ್ಮನೆ ನನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಬೇರೆ ಸಮಾಜಕ್ಕೆ ಯಾವುದೇ ತೊಂದರೆಯಾಗದಂತೆ ಮೀಸಲಾತಿ ನೀಡಲಿ ಎಂಬುದೇ ನಮ್ಮ ಆಗ್ರಹವಾಗಿದೆ ಎಂದು ತಿಳಿಸಿದರು.
Advertisement
ಬೆಳಗಾವಿ ಜಿಲ್ಲೆಯನ್ನು ಮೂರು ವಿಭಾಗಗಳನ್ನಾಗಿ ಮಾಡಬಹುದು. ಜಿಲ್ಲೆ ವಿಭಜನೆಗೊಂಡರೆ ಅಭಿವೃದ್ಧಿಗೆ ಮತ್ತಷ್ಟು ಒತ್ತು ನೀಡಬಹುದು. ದಸರಾ ಹಬ್ಬ ಮುಕ್ತಾಯಗೊಂಡ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುವುದು ಎಂದರು.