ಉಡುಪಿ: ರಾಜ್ಯ ಸರ್ಕಾರಕ್ಕೆ ಹಿಂದೂ ವಿರೋಧಿ ಪಟ್ಟ ಕಟ್ಟುವ ಪ್ರಯತ್ನಗಳಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಆರೋಪಿಸಿದರು.
ಉಡುಪಿ (Udupi) ಜಿಲ್ಲೆಯ ನೀರೆ ಗ್ರಾಮ ಪಂಚಾಯತ್ ನೂತನ ಕಟ್ಟಡವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಜನಪ್ರಿಯತೆಯನ್ನು ಸಹಿಸದ ಬಿಜೆಪಿ ನಾಯಕರು ಅನವಶ್ಯಕವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಅಲ್ಲದೇ ಸಮಾಜದ ಕೋಮು ಸೌಹಾರ್ದತೆಯನ್ನು ಕೆಡಿಸುತ್ತಿದ್ದಾರೆ ಎಂದರು. ಇದನ್ನೂ ಓದಿ: 4 ಶಂಕಾಸ್ಪದ ಸಾವುಗಳ ತನಿಖೆಗೆ ತಿಮರೋಡಿ ದೂರು, ವಿಠಲಗೌಡ ಆರೋಪವನ್ನು ಎಸ್‌ಐಟಿ ಪರಿಶೀಲಿಸಿ ಕ್ರಮ: ಪರಮೇಶ್ವರ್
ಸರ್ಕಾರದ ವಿರುದ್ಧ ಆರೋಪ ಮಾಡಲು ವಿಪಕ್ಷಗಳಿಗೆ ಬೇರೆ ವಿಚಾರ ಇಲ್ಲ. ರಾಜ್ಯ ಸರ್ಕಾರ ಬೀಳುತ್ತದೆ, ಗ್ಯಾರಂಟಿ ಯೋಜನೆಗಳು ಜಾರಿ ಆಗಲ್ಲ, ಒಂದು ವೇಳೆ ಜಾರಿಯಾದರೂ ನಾಲ್ಕು ತಿಂಗಳಿಗೆ ಯೋಜನೆಗಳನ್ನು ನಿಲ್ಲಿಸಲಾಗುತ್ತದೆ ಎಂದು ಅಪಪ್ರಚಾರ ಮಾಡಲಾಯಿತು. ರಾಜ್ಯದ ಜನತೆಗೆ ನಮ್ಮ ಸರ್ಕಾರ ಸಾಕಷ್ಟು ಅನುಕೂಲ ಮಾಡಿಕೊಟ್ಟಿದೆ. ಇದನ್ನು ಸಹಿಸದ ಬಿಜೆಪಿ ನಾಯಕರು ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಇನ್ಮುಂದೆ ಮಲ್ಟಿಪ್ಲೆಕ್ಸ್ ಸೇರಿ ಎಲ್ಲ ಚಿತ್ರಮಂದಿರಗಳಲ್ಲಿ ಏಕರೂಪ ದರ ನಿಗದಿ; ಪ್ರತಿ ಟಿಕೆಟ್‍ಗೆ ಇಷ್ಟೇ ಬೆಲೆ
ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ
ಬಿಜೆಪಿ ಶಾಸಕ ಸಿ.ಟಿ.ರವಿ (CT Ravi) ವಿರುದ್ಧ ಎಫ್‌ಐಆರ್ ದಾಖಲಿಸಿರುವುದಕ್ಕೆ ವಿಪಕ್ಷಗಳು ಖಂಡಿಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಅವರು ದ್ವೇಷಪೂರಿತ ಭಾಷಣ ಮಾಡಿದರೆ ಕ್ರಮ ಕೈಗೊಳ್ಳಲು ವಿಧಾನಸಭೆಯಲ್ಲಿ ಶಾಸನ ತರಲಾಗಿದೆ. ದ್ವೇಷಪೂರಿತ ಭಾಷಣವನ್ನು ಬಿಜೆಪಿ-ಕಾಂಗ್ರೆಸ್ ನಾಯಕರು ಯಾರೇ ಆಗಲಿ ಕ್ರಮ ಕೈಗೊಳ್ಳಲಾಗುತ್ತದೆ. ನಾಳೆ ಕಾಂಗ್ರೆಸ್ಸಿಗರು ಮಾತನಾಡಿದರೂ ಕ್ರಮ ಆಗುತ್ತದೆ. ಕಾನೂನು ಎಲ್ಲರಿಗೂ ಒಂದೇ ಅಲ್ವಾ? ಶಾಂತಿಯನ್ನು ಕದಡುವ ಕೆಲಸ ಮಾಡಿದರೆ ಖಂಡಿತ ಎಫ್‌ಐಆರ್ ಆಗುತ್ತದೆ ಎಂದು ಹೇಳಿದರು.
ಧರ್ಮಸ್ಥಳ ನಮ್ಮೆಲ್ಲರ ಆರಾಧ್ಯ ಸ್ಥಳ
ನಾನು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇನೆ. ಧರ್ಮಸ್ಥಳ (Dharmasthala) ನಮ್ಮೆಲ್ಲರ ಆರಾಧ್ಯ ಸ್ಥಳ, ಬಹಳಷ್ಟು ಭಕ್ತಿಯಿಂದ ನಡೆದುಕೊಳ್ಳುವ ಸ್ಥಳ. ಏನೆಲ್ಲಾ ಷಡ್ಯಂತ್ರ ಆಗಿದೆ, ಇದೆಲ್ಲಾ ಹೊರ ಬರುತ್ತೆ ಸ್ವಲ್ಪ ಕಾಯಿರಿ. ಎಸ್‌ಐಟಿ ತನ್ನ ಕೆಲಸ ಮಾಡುತ್ತಿದೆ. ಇದನ್ನು ಸಾರ್ವಜನಿಕವಾಗಿ ಹೇಳಲು ಬರಲ್ಲ. ಸ್ವಲ್ಪ ದಿನ ಕಾಯಿರಿ ಎಲ್ಲಾ ಸತ್ಯಾಸತ್ಯತೆ ಹೊರಬರುತ್ತದೆ ಎಂದರು.