ಬೆಂಗಳೂರು: ಅಂಗನವಾಡಿ ಕೇಂದ್ರಗಳಿಗೆ (Anganwadi Centers) ಕಳಪೆ ಆಹಾರ ಪೂರೈಕೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಎಚ್ಚರಿಕೆ ನೀಡಿದರು.
ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ನಾರಾಯಣಸ್ವಾಮಿ ವಿಷಯ ಪ್ರಸ್ತಾಪ ಮಾಡಿದರು. ಅಂಗನವಾಡಿ ಕೇಂದ್ರಗಳಲ್ಲಿ ಆಹಾರ ಪದಾರ್ಥಗಳ ಕಳಪೆ ಗುಣಮಟ್ಟದ ಪೂರೈಕೆಯಲ್ಲಿ ಆಗುತ್ತಿದೆ. ಇದೊಂದು ದೊಡ್ಡ ಮಾಫಿಯಾ ಇದೆ. ಇದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ. ಕೂಡಲೇ ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಅಂತ ನಾರಾಯಣಸ್ವಾಮಿ ಆಗ್ರಹಿಸಿದರು. ಇದನ್ನೂ ಓದಿ: ಮೊಟ್ಟೆ ವಿತರಣೆ ಬಗ್ಗೆ ನಿಗಾವಹಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚನೆ ಮಾಡ್ತೀವಿ – ಲಕ್ಷ್ಮಿ ಹೆಬ್ಬಾಳ್ಕರ್
ಇದಕ್ಕೆ ಉತ್ತರಿಸಿದ ಸಚಿವೆ, ರಾಜ್ಯದಲ್ಲಿ 67,570 ಅಂಗನವಾಡಿ ಕೇಂದ್ರಗಳು ಮತ್ತು 2,329 ಮಿನಿ ಅಂಗನವಾಡಿ ಕೇಂದ್ರಗಳು ಸೇರಿ ಒಟ್ಟು 69,899 ಅಂಗನವಾಡಿ ಕೇಂದ್ರಗಳಿವೆ. 39,50,179 ಮಕ್ಕಳು ಇಲ್ಲಿ ದಾಖಲಾಗಿ ಸೌಲಭ್ಯ ಪಡೆಯುತ್ತಿದ್ದಾರೆ. ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಆಗುವ ಆಹಾರ ಪದಾರ್ಥ ಕಳಪೆ ಗುಣಮಟ್ಟ ಆಗಿರೋದು ಗಮನಕ್ಕೆ ಬಂದಿದೆ. ಕಲಬುರಗಿಯಲ್ಲಿ ಇಂತಹ ಕೇಸ್ ಗಮನಕ್ಕೆ ಬಂದಿದೆ. ಈ ಕೇಂದ್ರಕ್ಕೆ ನೊಟೀಸ್ ನೀಡಲಾಗಿದೆ. ಕಳಪೆ ಮೊಟ್ಟೆ ಪ್ರಕರಣಗಳೂ ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಸಂಪೂರ್ಣ ವರದಿ ತರಿಸಿಕೊಂಡಿದ್ದು, ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಕೆಂಪು ಸುಂದರಿ ಜಾಗಕ್ಕೆ ಹುಣಸೆ ಹಣ್ಣು ಎಂಟ್ರಿ- ಡಿಮ್ಯಾಂಡ್ ಬೆನ್ನಲ್ಲೇ ದರ ಏರಿಕೆ
ಮಗುವಿನ ಆರೋಗ್ಯಕ್ಕಾಗಿ ಸರ್ಕಾರ ದಿನಕ್ಕೆ 8 ರೂ. ಕೊಡುತ್ತಿದೆ. ನಾನೇ ಒಂದು ಅಂಗನವಾಡಿ ಕೇಂದ್ರಕ್ಕೆ ಹೋಗಿ ನೋಡಿದೆ. ನನಗೇ ನಾಚಿಕೆ ಆಯ್ತು. ನಾನು ವಿಸಿಟ್ ಮಾಡಿದ ಕೇಂದ್ರ ಮುಚ್ಚಿಸಿದ್ದೇನೆ. ಯಾರೇ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದರೂ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ತೀವಿ. ಇಲಾಖೆಯಲ್ಲಿ ವಿಕೇಂದ್ರೀಕರಣದಿಂದ ಸಮಸ್ಯೆ ಅಗ್ತಿದೆ. ಹೀಗಾಗಿ ಏಕೀಕೃತ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ತೀವಿ ಎಂದು ವಿವರಿಸಿದರು.
Web Stories