ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ಲಕ್ಷ್ಮಿ ಹೆಬ್ಬಾಳ್ಕರ್

Public TV
1 Min Read
Lakshmi Hebbalkar 3

ಚಾಮರಾಜನಗರ: ಬೈಕ್ ಹಾಗೂ ಆಟೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಇಬ್ಬರು ಯುವಕರ ನೆರವಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಧಾವಿಸಿ ಮಾನವೀಯತೆ ಮೆರೆದಿದ್ದಾರೆ.

Lakshmi Hebbalkar 1

ಗೃಹಲಕ್ಷ್ಮಿ ಯೋಜನೆ ಚಾಲನಾ ಸಮಾರಂಭದ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ಬಳಿಕ ಸಚಿವರು ಮಂಡ್ಯಕ್ಕೆ ತೆರಳುತ್ತಿದ್ದರು. ನಗರದ ಹೊರವಲಯದ ದೊಡ್ಡರಾಯಪೇಟೆ ಕ್ರಾಸ್ ಬಳಿ ಬೈಕ್‌ನಲ್ಲಿ ಚಲಿಸುತ್ತಿದ್ದ ಇಬ್ಬರು ಯುವಕರು ಆಟೋ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬಿದ್ದು ನರಳಾಡುತ್ತಿದ್ದರು. ಇದನ್ನೂ ಓದಿ: ಬೈಯುವವರಿಗೂ ಸ್ವಾಗತ, ಹೊಗಳುವವರಿಗೂ ಸ್ವಾಗತ- ಪ್ರತಾಪ್ ಸಿಂಹ ಕಾಲೆಳೆದ ಸಿಎಂ

ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸಚಿವರು, ತಮ್ಮ ಕಾರನ್ನು ನಿಲ್ಲಿಸಿ ಅಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿದರು. ಈ ವೇಳೆ ಸ್ಥಳೀಯರು ದೊಡ್ಡರಾಯಪೇಟೆ ಕ್ರಾಸ್‌ನಲ್ಲಿ ಪದೇ ಪದೇ ಅಪಘಾತ (Accident) ಸಂಭವಿಸುತ್ತಿದ್ದು, ಇದಕ್ಕೆ ಪರಿಹಾರ ಕೊಡಿಸಬೇಕು ಎಂದು ಮನವಿ ಮಾಡಿದರು. ಗಾಯಾಳುಗಳಿಗೆ ನೆರವಾದ ಸಚಿವರ ಕಾರ್ಯ ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಯಿತು. ಇದನ್ನೂ ಓದಿ: ಮಂಗಳೂರಿನಲ್ಲಿ ಇಬ್ಬರು ಕುಖ್ಯಾತ ಡ್ರಗ್ ಪೆಡ್ಲರ್‌ಗಳ ಬಂಧನ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article