ಬಾಗಲಕೋಟೆ: ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಸಾಹೇಬ್ರು ದೊಡ್ಡವರು. ನನ್ನ ಕಾಲ ಕಸ, ಶೋ ಪೀಸ್, ಸ್ಲಂನಿಂದ ಬಂದವಳು ಅಂದರು. ಪದೇ ಪದೇ ನನ್ನ ಹೆಸರು ಬಳಸುತ್ತಿರುವ ಹಿಂದಿನ ಮರ್ಮ ಗೊತ್ತಿಲ್ಲ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ಕೊಟ್ಟಿದ್ದಾರೆ.
ನಗರದ ಹೊರವಲಯದ ರೆಸಾರ್ಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದರೆ ಶ್ರಮ ಹಾಗೂ ಧರ್ಮ ನನ್ನನ್ನು ಕಾಪಾಡುತ್ತದೆ. ಸಚಿವ ರಮೇಶ್ ಜಾರಕಿಹೊಳಿ ಅವರು ನನ್ನ ರಾಜಕೀಯ ಬೆಳವಣಿಗೆಗೆ ಸಹಾಯ ಮಾಡಿದ್ದಾರೆ. ಆದರೆ ನನ್ನ ಬೆಳವಣಿಗೆಗೆ ಬ್ರೇಕ್ ಹಾಕಲು ಯಾರಿಂದಲೂ ಸಾಧ್ಯವಿಲ್ಲ. ಅದನ್ನು ದೇವರು ನಿರ್ಧಾರ ಮಾಡುತ್ತಾನೆ. ನನ್ನ ಧರ್ಮ ನನ್ನ ಶ್ರಮ ಕಾಪಾಡುತ್ತದೆ ಎನ್ನುವ ಮೂಲಕ ಜಾರಕಿಹೊಳಿ ಸಹೋದರರಿಗೆ ಟಾಂಗ್ ಕೊಟ್ಟಿದ್ದಾರೆ.
Advertisement
Advertisement
ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ನಾನೊಬ್ಬಳೆ ಬೆಂಬಲಿಗಳಲ್ಲ. ರಾಜ್ಯದಲ್ಲಿ ಅನೇಕರು ಬೆಂಬಲಿಗರಿದ್ದು, ಅವರಲ್ಲಿ ನಾನೂ ಒಬ್ಬಳು. ಸಚಿವರಿಗೆ ಅವರದ್ದೇ ಆದ ದೊಡ್ಡ ಪಡೆ ಇದೆ ಎನ್ನುವ ಮೂಲಕ ಡಿ.ಕೆ.ಶಿವಕುಮಾರ್ ಪರ ಬ್ಯಾಟ್ ಬೀಸಿ, ರಮೇಶ್ ಜಾರಕಿಹೊಳಿ ಅವರಿಗೆ ಮತ್ತೊಮ್ಮೆ ತಿರುಗೇಟು ಕೊಟ್ಟಿದ್ದಾರೆ.
Advertisement
ಮೀಟೂ ಒಳ್ಳೆ ಅಭಿಯಾನವಾಗಿದ್ದು, ದೇಶ ಎಜ್ಯುಕೇಟ್ ಆಗುತ್ತಿದೆ ಎಂದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕುರಿತು ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಶೋಭಕ್ಕ ಉದ್ವೇಗದಲ್ಲಿ ಮಾತಾಡಿದ್ದಾರೆ. ಜನ ನಮ್ಮನ್ನು ನೋಡುತ್ತಿರುತ್ತಾರೆ. ಅಕ್ಕ ಮಾತಾಡುವಾಗ ಉದ್ವೇಗಕ್ಕೆ ಒಳಗಾಗಬಾರದು. ಮಾತು ಆಡಿದರೆ ಹೋಯ್ತು. ಮುತ್ತು ಒಡೆದರೆ ಹೋಯ್ತು ಅಂತ ತಿಳಿದು ಮಾತನಾಡಬೇಕು ಎಂದು ಟಾಂಗ್ ನೀಡಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv