ಚಿಕ್ಕೋಡಿ: ರಾಜಕಾರಣಿಗಳ ಜೊತೆಗೆ ಅವರ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿಕೊಳ್ಳುವುದು ಸಹಜ. ಆದರೆ ರಾಜ್ಯದ ಪ್ರಭಾವಿ ರಾಜಕಾರಣಿ ಎಂದು ಗುರುತಿಸಿಕೊಳ್ಳುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಹಾರೂಗೇರಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡ ಮಹೇಶ ತಮ್ಮಣ್ಣವರ ಅವರ ಸೈಕಲ್ ಜಾಥಾದ ಸಮಾರೋಪ ಸಮಾರಂಭದಲ್ಲಿ ವೇದಿಕೆ ಮೇಲೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸತೀಶ ಜಾರಕಿಹೊಳಿ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದು, ಇದೀಗ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: 1950ರಲ್ಲೇ ಈದ್ಗಾ ಮೈದಾನ ಮೈಸೂರು ಸಂಸ್ಥಾನದ ಅಧೀನಕ್ಕೆ ಒಳಪಟ್ಟಿತ್ತು: ದಾಖಲೆ ರಿಲೀಸ್
ವೇದಿಕೆ ಮೇಲೆ ಸುಮಾರು 5 ನಿಮಿಷಗಳ ಕಾಲ ವಿವಿಧ ಪೋಸ್ ನೀಡಿ ತಮ್ಮ ಫೋನ್ನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂತಸ ಪಟ್ಟಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ರೀಲ್ಸ್ ಮಾಡಿ, ಮಿಂಚಿದ ಗೋಲ್ಡನ್ ಕ್ವೀನ್ ಅಮೂಲ್ಯ
ಕುಡಚಿ ವಿಧಾನಸಭಾ ಕೇತ್ರದ ಕಾಂಗ್ರೆಸ್ ಪಕ್ಷ ಸಂಘಟನೆಗಾಗಿ ಹಾರೂಗೇರಿಯಲ್ಲಿ ಬೃಹತ್ ಸೈಕಲ್ ಜಾಥಾದ ಸಮಾರೋಪ ಸಮಾವೇಶ ಆಯೋಜನೆ ಮಾಡಲಾಗಿತ್ತು.