ಚಿಕ್ಕೋಡಿ: ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನನ್ನ ಬಳಿ ಸಮಯವಿಲ್ಲ ಎಂದು ಎಂದು ಬೆಳಗಾವಿ ಗ್ರಾಮೀಣ ಭಾಗದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
Advertisement
ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ಆಯೋಜಿಸಿದ್ದ ಪರಿಷತ್ ಚುನಾವಣೆಯ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ಥೂ ಥೂ ಎಂದ ವಿಚಾರವಾಗಿ ಮಾತನಾಡಿದ ಅವರು ನಾನು ಚುನಾವಣೆ ಮೂಡಿನಲ್ಲಿ ಇದ್ದೇನೆ. ನಾನು ಈ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಅಪ್ಪು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಅಶ್ವಿನಿ ಪುನೀತ್ ರಾಜ್ ಕುಮಾರ್!
Advertisement
Advertisement
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಏನೂ ಮಾತನಾಡಿದ್ದಾರೆ ಅನ್ನೋದನ್ನ ನಾನು ನೋಡಕ್ಕೂ ಹೋಗಿಲ್ಲ. ಅದನ್ನ ಕೇಳೋಕ್ಕೆ ನನ್ನ ಬಳಿ ಪುರಸತ್ತು ಇಲ್ಲ. ಅಲ್ಲದೆ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನನ್ನ ಬಳಿ ಸಮಯವಿಲ್ಲ. ಮತದಾರರು ತುಂಬಾ ಬುದ್ಧಿವಂತರಿದ್ದಾರೆ. ಎಲ್ಲವನ್ನ ಗಮನಿಸುತ್ತಿದ್ದು, ಕಾರ್ಯಕರ್ತರ ಜೊತೆಗೆ ನಾನು ಚುನಾವಣೆ ಮೂಡಿನಲ್ಲಿದ್ದೇನೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್, ರಮೇಶ್ ಜಾರಕಿಹೊಳಿ ಅವರಿಗೆ ಟಾಂಗ್ ನೀಡಿದ್ದಾರೆ. ಅಲ್ಲದೇ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣ ಇದ್ದು ಜನ ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ತಾಯಿಯಾಗ್ತಿದ್ದಾರಾ ಪ್ರಿಯಾಂಕಾ ಚೋಪ್ರಾ?