ಬೆಳಗಾವಿ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ (DCC Bank Election) ನಿರ್ದೇಶಕ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಸಹೋದರ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ (Channaraj Hattiholi) ಕಣದಿಂದ ಹಿಂದೆ ಸರಿದಿದ್ದಾರೆ.
ಚನ್ನರಾಜ್ ಹಟ್ಟಿಹೊಳಿ ಡಿಸಿಸಿ ಬ್ಯಾಂಕ್ ಚುನಾವಣೆ ಕಣದಿಂದ ಹಿಂದಕ್ಕೆ ಸರಿದಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಸತೀಶ ಜಾರಕಿಹೊಳಿಯವರ (Satish Jarkiholi) ಮನವೊಲಿಕೆ ಹಿನ್ನೆಲೆಯಲ್ಲಿ ಚುನಾವಣೆ ಕಣದಿಂದ ಚನ್ನರಾಜ್ ಹಿಂದಕ್ಕೆ ಸರಿದಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಬೆಂಗಳೂರು | 2 ವರ್ಷದ ಹಿಂದೆ ಮದುವೆಯಾಗಿದ್ದ ಟೆಕ್ಕಿ ಆತ್ಮಹತ್ಯೆ – ಪತಿ ಅರೆಸ್ಟ್
ಈ ಬಗ್ಗೆ ಅಧಿಕೃತವಾಗಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಡಿಸಿಸಿ ಬ್ಯಾಂಕ್ ನಿರ್ದೇಶಕ ಚುನಾವಣೆಗೆ ಕಳೆದ ನಾಲ್ಕೈದು ತಿಂಗಳಿಂದ ಖಾನಾಪುರ ತಾಲೂಕಿನಿಂದ ಚನ್ನರಾಜ್ ಹಟ್ಟಿಹೊಳಿ ಕಣಕ್ಕಿಳಿಯಲು ತಯಾರಿ ನಡೆಸಿದ್ದರು. ಖಾನಾಪುರದ ಪಿಕೆಪಿಎಸ್ ನಿರ್ದೇಶಕರ ಮನ ಗೆಲ್ಲಲು ಚನ್ನರಾಜ್ ಯಶಸ್ವಿಯಾಗಿದ್ದರು ಜಿಲ್ಲೆಯ ರಾಜಕಾರಣ ಹಾಗೂ ರಾಜಕೀಯ ದೃಷ್ಟಿಯಿಂದ ಚನ್ನರಾಜ್ ಸ್ಪರ್ಧೆಯಿಂದ ಹಿಂಪಡೆಯಲಿದ್ದಾರೆ ಎಂದು ತಿಳಿಸಿದರು.
ಚುನಾವಣೆ ಕಣದಿಂದ ಚನ್ನರಾಜ್ ಹಿಂದೆ ಸರಿದಿದ್ದೇಕೆ ಎಂಬುದರ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ಹಂಚಿಕೊಳ್ಳುವೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.


