ನವದೆಹಲಿ: ಬಿಹಾರದ (BJP) ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ (Lalu Prasad Yadav) ಅವರನ್ನು ಸಿಬಿಐ (CBI) ಅಧಿಕಾರಿಗಳು 2 ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ್ದಾರೆ. ದೆಹಲಿಯ ಪಂಡಾರಪಾರ್ಕ್‌ನಲ್ಲಿರುವ ಪುತ್ರಿ ಮೀಶಾ ಯಾದವ್ ನಿವಾಸದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಅಲ್ಲಿದ್ದ ಲಾಲೂ ಪ್ರಸಾದ್ ಯಾದವ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಕೋರ್ಟ್‌ಗೆ ಈಗಾಗಲೇ ಚಾರ್ಜ್‌ಶೀಟ್ ಸಲ್ಲಿಸಿರುವ ಸಿಬಿಐ ವಿಚಾರಣೆ ಮುಂದುವರಿಸಿದೆ. ಸೋಮವಾರ ಪಾಟ್ನಾದಲ್ಲಿರುವ ಮಾಜಿ ಸಿಎಂ ಮತ್ತು ಲಾಲೂ ಯಾದವ್ ಪತ್ನಿ ರಾಬ್ರಿದೇವಿ ನಿವಾಸದ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು ಅವರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದರು.
Advertisement
Advertisement
ರಾಬ್ರಿದೇವಿ ವಿಚಾರಣೆ ಬೆನ್ನಲ್ಲೇ ಮಂಗಳವಾರ ದೆಹಲಿಯಲ್ಲಿ ಲಾಲೂ ಯಾದವ್ ಅವರನ್ನು ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ 7 ಅಧಿಕಾರಗಳ ತಂಡ ಮಾಸ್ಕ್ ಧರಿಸಿದ್ದು ದೂರದಿಂದ ಕೂತು ಅವರನ್ನು ಪ್ರಶ್ನಿಸಿದ್ದಾರೆ. ಲಾಲೂ ಯಾದವ್‌ಗೆ ಕಿಡ್ನಿ ಕಸಿಯಾಗಿರುವ ಹಿನ್ನೆಲೆ ಅವರಿಗೆ ಅಲರ್ಜಿ ಮತ್ತು ಸೋಂಕಿನ ಭೀತಿ ಇರುವ ಕಾರಣ ಅಂತರ ಕಾಯ್ದುಕೊಂಡು ವಿಚಾರಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸಿಬಿಐ ಬೆನ್ನಲ್ಲೇ ಇಡಿ ಸಂಕಷ್ಟ – ತಿಹಾರ್ ಜೈಲಿನಲ್ಲಿ Manish Sisodia ವಿಚಾರಣೆ
Advertisement
ಲಾಲು ಪ್ರಸಾದ್ ಯಾದವ್ ಅವರು 2004 ಮತ್ತು 2009ರ ನಡುವೆ ರೈಲ್ವೆ ಸಚಿವರಾಗಿದ್ದಾಗ ಅವರ ಕುಟುಂಬಕ್ಕೆ ಉಡುಗೊರೆಯಾಗಿ ಅಥವಾ ಮಾರಾಟ ಮಾಡಿದ ಜಮೀನುಗಳಿಗೆ ಪ್ರತಿಯಾಗಿ ರೈಲ್ವೆಯಲ್ಲಿ ನೇಮಕಾತಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ.
Advertisement
ಫೆಬ್ರವರಿ 27 ರಂದು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಪತ್ನಿ ರಾಬ್ರಿದೇವಿ ಮತ್ತು ಇತರ 14 ಜನರಿಗೆ ನ್ಯಾಯಾಲಯವು ಸಮನ್ಸ್ ನೀಡಿತ್ತು. ವಿಶೇಷ ನ್ಯಾಯಾಧೀಶರಾದ ಗೀತಾಂಜಲಿ ಗೋಯೆಲ್ ಅವರು ಆರೋಪಿಗಳಿಗೆ ಮಾರ್ಚ್ 15 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಮೇಘಾಲಯ ಸಿಎಂ ಆಗಿ ಕಾನ್ರಾಡ್ ಸಂಗ್ಮಾ ಪ್ರಮಾಣ ವಚನ ಸ್ವೀಕಾರ