ನವದೆಹಲಿ: ಬಹುಕೋಟಿ ಮೇವು ಹಗರಣದ ಪ್ರಮುಖ ಅಪರಾಧಿ ರಾಷ್ಟ್ರೀಯ ಜನತಾ ದಳದ (ಆರ್ಜೆಡಿ) ನಾಯಕ ಹಾಗೂ ಬಿಹಾರ್ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರಿಗೆ ಕೇಂದ್ರ ತನಿಖಾ ದಳ (ಸಿಬಿಐ)ದ ವಿಶೇಷ ನ್ಯಾಯಾಲಯವು 5 ವರ್ಷ ಜೈಲು ಶಿಕ್ಷೆ ಹಾಗೂ 60 ಲಕ್ಷ ರೂ. ದಂಡ ವಿಧಿಸಿದೆ.
Advertisement
ಫೆ.15 ರಂದು ಆರ್ಜೆಡಿ ಮುಖ್ಯಸ್ಥರನ್ನು ಈ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಲಾಗಿದ್ದು, ಶಿಕ್ಷೆಯ ಪ್ರಮಾಣವನ್ನು ಇಂದು ಪ್ರಕಟಿಸಲು ನಿರ್ಧರಿಸಲಾಗಿತ್ತು. ಯಾದವ್ ಅವರು ಡೊರಾಂಡಾ ಖಜಾನೆಯಿಂದ 139 ಕೋಟಿ ಹಣವನ್ನು ಅಕ್ರಮವಾಗಿ ಪಡೆದಿದ್ದರು. ಇದನ್ನೂ ಓದಿ: ಬಹುಕೋಟಿ ಮೇವು ಹಗರಣ, ಲಾಲೂ ಪ್ರಸಾದ್ ಯಾದವ್ ದೋಷಿ – CBI ಕೋರ್ಟ್
Advertisement
ಮೇವು ಹಗರಣದ ಐದನೇ ಪ್ರಕರಣದಲ್ಲಿ ಯಾದವ್ ಅವರಿಗೆ ಶಿಕ್ಷೆ ವಿಧಿಸಲಾಗಿದೆ. ಕಳೆದ ವಾರ ಅನಾರೋಗ್ಯದ ಕಾರಣದಿಂದಾಗಿ ಯಾದವ್ ಅವರನ್ನು ಹೊತ್ವಾರ್ ಜೈಲಿನಿಂದ ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಅವರನ್ನು ಸ್ಥಳಾಂತರಿಸಲಾಗಿತ್ತು. ದುಮ್ಕಾಗೆ ಸಂಬಂಧಿಸಿದ ಇತರ ನಾಲ್ಕು ಪ್ರಕರಣಗಳಲ್ಲಿ ಈ ಹಿಂದೆ 14 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದರು.
Advertisement
Advertisement
ಡೊರಾಂಡಾ ಖಜಾನೆ ಹಗರಣ ಪ್ರಕರಣದಲ್ಲಿ ಒಟ್ಟು 170 ಜನರನ್ನು ಆರೋಪಿಗಳೆಂದು ಹೆಸರಿಸಲಾಗಿತ್ತು. ಇವರಲ್ಲಿ 55 ಮಂದಿ ಸಾವನ್ನಪ್ಪಿದ್ದಾರೆ. 7 ಮಂದಿ ಸರ್ಕಾರಿ ಸಾಕ್ಷಿಗಳಾಗಿದ್ದಾರೆ. 6 ಮಂದಿ ತಲೆಮರೆಸಿಕೊಂಡಿದ್ದಾರೆ. ಇಬ್ಬರು ತಮ್ಮ ವಿರುದ್ಧದ ಆರೋಪಗಳನ್ನು ಒಪ್ಪಿಕೊಂಡಿದ್ದಾರೆ. ಯಾದವ್ ಸೇರಿದಂತೆ ಉಳಿದ 99 ಆರೋಪಿಗಳಲ್ಲಿ 24 ಮಂದಿ ಖುಲಾಸೆಗೊಂಡಿದ್ದಾರೆ. ಉಳಿದ 46 ಮಂದಿಯನ್ನು ದೋಷಿಗಳು ಎಂದು ಘೋಷಿಸಿ, ಶಿಕ್ಷೆ ವಿಧಿಸಲಾಗಿದೆ. ಇದನ್ನೂ ಓದಿ: ನಾನು ಇಂತಹ ರಾಜಕೀಯದ ವಿರುದ್ಧ ಸತ್ತಿದ್ದೇನೆ: ಕಮಲ್ ಹಾಸನ್