ಪಾಟ್ನಾ: ಆರ್‌ಜೆಡಿ ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ತಮ್ಮ ನಿವಾಸದಲ್ಲಿ ಜಾರಿ ಬಿದ್ದು, ಅವರ ಬಲ ಭುಜದ ಮೂಳೆ ಮುರಿತಕ್ಕೊಳಗಾಗಿದೆ. ಇದೀಗ ಲಾಲೂ ಪ್ರಸಾದ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
Advertisement
ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು, ಲಾಲು ಪ್ರಸಾದ್ ಯಾದವ್ ಅವರ ಪುತ್ರನಿಗೆ ಮಂಗಳವಾರ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: ಇಬ್ಬರಲ್ಲ, 20ಕ್ಕೂ ಹೆಚ್ಚು ಮಂದಿಯಿಂದ ಸ್ಕೆಚ್ – ಗುರೂಜಿಗೆ ಬ್ಲ್ಯಾಕ್‌ಮೇಲ್ ಮಾಡಿ ಸುಲಿಗೆಗೆ ಇಳಿದಿದ್ದ ಹಂತಕರು
Advertisement
Advertisement
ಈ ಕುರಿತಂತೆ ಆರ್‌ಜೆಡಿ ವಕ್ತಾರ ಚಿತ್ರರಂಜನ್ ಗಗನ್ ಅವರು ಮಾತನಾಡಿದ್ದು, ಪ್ರಧಾನಿ ಮೋದಿ ಅವರು ಮಂಗಳವಾರ ತೇಜಸ್ವಿ ಯಾದವ್ ಅವರೊಂದಿಗೆ ಕರೆ ಮಾಡಿ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ ಮತ್ತು ಅವರು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೆಟ್ಟಿಲಿನಿಂದ ಎಡವಿ ಬಿದ್ದ ಲಾಲೂ ಪ್ರಸಾದ್ ಯಾದವ್ – ಭುಜದ ಮೂಳೆ ಮುರಿತ
Advertisement
ಲಾಲು ಪ್ರಸಾದ್ ಯಾದವ್ ಅವರು ಸೋಮವಾರ ಪಾಟ್ನಾದಲ್ಲಿರುವ ತಮ್ಮ ಪತ್ನಿ ರಾಬ್ರಿ ದೇವಿ ಅವರ ನಿವಾಸದಲ್ಲಿ ತಂಗಿದ್ದರು. ಮನೆಯಲ್ಲಿ ಮೆಟ್ಟಿಲು ಇಳಿಯುವಾಗ ಸಮತೋಲನ ಕಾಯ್ದುಕೊಳ್ಳಲು ಸಾಧ್ಯವಾಗದೇ ಎಡವಿ ಬಿದ್ದಿದ್ದಾರೆ. ಇದರಿಂದಾಗಿ ಅವರ ಭುಜ ಮತ್ತು ಬೆನ್ನಿಗೆ ಪೆಟ್ಟಾಗಿದೆ. ಬಲ ಭುಜದ ಮೂಳೆ ಮುರಿದಿದೆ ಎಂದು ವೈದ್ಯರು ತಿಳಿಸಿದ್ದರು. ಹೀಗಾಗಿ ಕೂಡಲೇ ಅವರನ್ನು ಪಾಟ್ನಾದ ಪಾರಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಲಾಲೂ ಪ್ರಸಾದ್ ಅವರಿ ಐಸಿಯುನಲ್ಲಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ.
ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯದಿಂದ ಹಲವು ವರ್ಷಗಳಿಂದ ಮೇವು ಹಗರಣ ಪ್ರಕರಣಗಳಲ್ಲಿ ದೋಷಿಯಾಗಿರುವ ಆರ್‍ಜೆಡಿ ಮುಖ್ಯಸ್ಥ ಲಾಲೂ ಈಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.