ಆರ್‌ಜೆಡಿ ಅಧ್ಯಕ್ಷ ಸ್ಥಾನದಲ್ಲೆ ಮುಂದುವರಿಯುತ್ತೇನೆ: ಲಾಲೂ ಪ್ರಸಾದ್

Public TV
1 Min Read
laluprasad yadav

ನವದೆಹಲಿ: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅಧ್ಯಕ್ಷ ಸ್ಥಾನದ ಹುದ್ದೆಯನ್ನು ತ್ಯಜಿಸಿ, ಪುತ್ರ ತೇಜಸ್ವಿ ಯಾದವ್ ಅವರು ಪಕ್ಷದ ಮುಂದಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುತ್ತಾರೆ ಎನ್ನುವ ಊಹಾಪೋಹವನ್ನು ಲಾಲೂ ಪ್ರಸಾದ್ ಯಾದವ್ ತಳ್ಳಿಹಾಕಿದ್ದಾರೆ.

ತೇಜಸ್ವಿ ಯಾದವ್ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯಾದವ್, ಇಂತಹ ಸುದ್ದಿ ವರದಿಗಳನ್ನು ಹರುಡವವರು ಮೂರ್ಖರು. ಪಕ್ಷ ಚೆನ್ನಾಗಿಯೇ ನಡೆಯುತ್ತಿದೆ. ಇದರಿಂದಾಗಿ ನಾನೇ ಪಕ್ಷದ ಅಧ್ಯಕ್ಷನಾಗಿ ಮುಂದುವರಿಯುತ್ತೇನೆ. ಮಾಧ್ಯಮಗಳಲ್ಲಿ ಪ್ರಕಟವಾದ ಸುದ್ದಿ ವದಂತಿಯಷ್ಟೆ. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ತಿಳಿಸಿದ್ದಾರೆ.

ಫೆಬ್ರವರಿ 10ರಂದು ಪಾಟ್ನಾದಲ್ಲಿ ನಡೆಯಲಿರುವ ಆರ್‌ಜೆಡಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಲಾಲೂ ಪ್ರಸಾದ್ ಅವರು ಪಕ್ಷದ ಅಧ್ಯಕ್ಷ ಸ್ಥಾನವನ್ನು ತ್ಯಜಿಸಿ ಅವರ ಪುತ್ರ ತೇಜಸ್ವಿ ಯಾದವ್ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಡಿತ್ತು. ಸದ್ಯ ತೇಜಸ್ವಿ ಯಾದವ್ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಇದನ್ನೂ ಓದಿ: ಗೋವಾ ಚುನಾವಣೆಯಲ್ಲಿ ಬಿಜೆಪಿ – ಕಾಂಗ್ರೆಸ್ ನೇರ ಪೈಪೋಟಿ: ರಾಹುಲ್ ಗಾಂಧಿ

laluprasad yadav 1

ಆರ್‌ಜೆಡಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಮತ್ತು ಇತರ ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಲಾಲೂ ಪ್ರಸಾದ್ ಕೂಡ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಇದನ್ನೂ ಓದಿ: ಆಧಾರ್ ಪೌರತ್ವದ ಪುರಾವೆಯಲ್ಲ: ಸಂಸತ್‌ನಲ್ಲಿ ಕೇಂದ್ರ ಸ್ಪಷ್ಟನೆ

Share This Article
Leave a Comment

Leave a Reply

Your email address will not be published. Required fields are marked *