– ರಾವತ್ ವೈಯಕ್ತಿಕ ಭದ್ರತಾ ಅಧಿಕಾರಿಯಾಗಿದ್ದ ಸಾಯಿ
ಚೆನ್ನೈ: ತಮಿಳುನಾಡಿನ ಊಟಿ ಬಳಿ ದುರಂತಕ್ಕೀಡಾದ ಹೆಲಿಕಾಪ್ಟರ್ ನಲ್ಲಿ ಮೃತಪಟ್ಟಿರುವ ಲ್ಯಾನ್ಸ್ ನಾಯ್ಕ್ ಸಾಯಿ ತೇಜ್ ಅವರಿಗೆ ಕೇವಲ 27 ವರ್ಷ ವಯಸ್ಸು.
Advertisement
ಸಾಯಿ ತೇಜ್ ಅವರು ರಕ್ಷಣಾ ಪಡೆಗಳ ಮುಖ್ಯಸ್ಥ(ಸಿಡಿಎಸ್) ಬಿಪಿನ್ ರಾವತ್ ಅವರ ವೈಯಕ್ತಿಕ ಭದ್ರತಾ ಅಧಿಕಾರಿ ಆಗಿದ್ದರು. ಮೂಲತಃ ಆಂಧ್ರಪ್ರದೇಶದವರಾಗಿರುವ ಸಾಯಿ ತೇಜ್, 2012ರಲ್ಲಿ ಭಾರತೀಯ ಸೇನೆಯ ಬೆಂಗಳೂರು ರೆಜಿಮೆಂಟ್‍ಗೆ ಸೇರಿದ್ದರು. ಇದನ್ನೂ ಓದಿ: ಇಂದು ಸಂಜೆ ದೆಹಲಿಗೆ ರಾವತ್ ಪಾರ್ಥಿವ ಶರೀರ – ನಾಳೆ ಮಧ್ಯಾಹ್ನವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ
Advertisement
Advertisement
ಕಳೆದ ಕೆಲ ದಿನಗಳ ಹಿಂದೆ ಇವರು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರ ವೈಯಕ್ತಿಕ ಭದ್ರತಾ ಅಧಿಕಾರಿಯಾಗಿ ಸೇರಿಕೊಂಡಿದ್ದರು. ಲ್ಯಾನ್ಸ್ ನಾಯ್ಕ್ ಸಾಯಿ ತೇಜ್ ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಮನೆಗೆ ಭೇಟಿ ನೀಡಿದ್ದರು. ಮೃತ ಸಾಯಿ ತೇಜ್ ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಅದರಲ್ಲಿ ಮೂರು ವರ್ಷದ ಗಂಡು ಮಗು ಹಾಗೂ ಎರಡು ವರ್ಷದ ಹೆಣ್ಣು ಮಗುವಿದೆ.
Advertisement
ಹೆಲಿಕಾಪ್ಟರ್ ದುರಂತಕ್ಕೂ 4 ಗಂಟೆಗಳ ಹಿಂದೆಯಷ್ಟೇ ತಮ್ಮ ಪತ್ನಿ ಜೊತೆ ಸಾಯಿ ತೇಜ್ ಮಾತನಾಡಿದ್ದರು. ಇತ್ತ ದುರಂತದಲ್ಲಿ ಸಾಯಿ ತೇಜ್ ಸಾವನ್ನಪ್ಪಿರುವ ಮಾಹಿತಿ ತಿಳಿಯುತ್ತಿದ್ದಂತೆ ಕುರಬಾಳ ಮಂಡಲದ ಯಗುವರೆಗಡ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಪಾರ್ಥಿವ ಶರೀರ ನಾಳೆ ಆಂಧ್ರಪ್ರದೇಶಕ್ಕೆ ಬರಲಿದ್ದು, ಶುಕ್ರವಾರ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಸೇನಾ ಹೆಲಿಕಾಪ್ಟರ್ ಪತನ – ಬದುಕುಳಿದಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಯಾರು ಗೊತ್ತಾ?