– ಹಿಂದಿನ ನಿಲ್ದಾಣದಲ್ಲಿ ಇಳಿದಿದ್ದ 45 ವಿದ್ಯಾರ್ಥಿಗಳು, ತಪ್ಪಿದ ಭಾರೀ ದುರಂತ
ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್ಸಿನ ಚಕ್ರಕ್ಕೆ ಸಿಲುಕಿ ನಾಡಬಾಂಬ್ ಸ್ಫೋಟಗೊಂಡ ಘಟನೆ ಶಿಕಾರಿಪುರ ತಾಲೂಕಿನ ಹಿರೇಕಲವತ್ತಿ ಗ್ರಾಮದಲ್ಲಿ ನಡೆದಿದೆ.
ಬಸ್ ಮುಡಬ ಸಿದ್ದಾಪುರದಿಂದ ಶಿಕಾರಿಪುರಕ್ಕೆ ತೆರಳುತ್ತಿತ್ತು. ಈ ವೇಳೆ ಬಸ್ ಹಿರೇಕಲವತ್ತಿ ಗ್ರಾಮದ ಬಳಿ ಬರುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ. ಜೋರಾದ ಸ್ಫೋಟದ ಶಬ್ದದಿಂದ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ ಇದರಿಂದ ಪಕ್ಕದಲ್ಲಿದ್ದ ಟಿಸಿಗೆ (ವಿದ್ಯುತ್ ಪರಿವರ್ತಕಕ್ಕೆ) ಬಸ್ ಡಿಕ್ಕಿ ಹೊಡೆದಿದೆ. ಸ್ಫೋಟಕ್ಕೂ 5 ನಿಮಿಷಗಳ ಮುನ್ನ ಹಿಂದಿನ ನಿಲ್ದಾಣದಲ್ಲಿ 45 ವಿದ್ಯಾರ್ಥಿಗಳು ಬಸ್‌ನಿಂದ ಇಳಿದಿದ್ದರು. ಇದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದನ್ನೂ ಓದಿ: Ramanagara | ಹೆಡ್ ಕಾನ್ಸ್‌ಟೇಬಲ್ ಅನುಮಾನಾಸ್ಪದ ಸಾವು – ಕೆರೆಯಲ್ಲಿ ಶವ ಪತ್ತೆ
ಬಸ್ಸಿನ ಟೈಯರ್ ಅಂಚಿಗೆ (ರಿಮ್‌ಗೆ) ನಾಡಬಾಂಬ್ ತಗುಲಿ ಸ್ಫೋಟಗೊಂಡಿದ್ದರಿಂದ ದುರಂತದ ಪ್ರಮಾಣ ಕಡಿಮೆ ಆಗಿದೆ. ಒಂದು ವೇಳೆ ಬಾಂಬ್ ಟೈಯರ್‌ಗಳ ನಡುವೆ ಅಥವಾ ಬಸ್‌ನ ಮುಖ್ಯ ಭಾಗದ ಅಡಿಯಲ್ಲಿ ಸ್ಫೋಟಗೊಂಡಿದ್ದರೆ, ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳಾಗುವ ಸಾಧ್ಯತೆ ಇತ್ತು.
ಘಟನೆಯ ನಂತರ ಪ್ರತಿಕ್ರಿಯಿಸಿದ ಬಸ್ ಚಾಲಕ ಬಸವರಾಜ್ ಅವರು, ‘ನಾಡಬಾಂಬ್ ಸ್ಫೋಟಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದೇನೆ’ ಎಂದು ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದು, ಸ್ಫೋಟದ ಹಿಂದಿನ ಉದ್ದೇಶ ಮತ್ತು ಬಾಂಬ್ ಇಟ್ಟವರು ಯಾರು ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಆಶಿಕಾ ರಂಗನಾಥ್ ಸಂಬಂಧಿ ಅಚಲ ಆತ್ಮಹತ್ಯೆ ಕೇಸ್ – ಮೊಬೈಲ್ ಎಫ್‌ಎಸ್‌ಎಲ್‌ಗೆ ರವಾನೆ

