ಬೆಂಗಳೂರು: ಭೂದಾಖಲೆಗಳನ್ನು ‘ರೈತನ ಮನೆ ಬಾಗಿಲಿಗೆ’ ತಲುಪಿಸುವುದು ಒಂದು ಅತ್ಯುತ್ತಮ ಸೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಪ್ರಶಂಶಿಸಿದರು.
Advertisement
ಕಂದಾಯ ದಾಖಲೆಗಳಾದ RTC, ಅಟ್ಲಾಸ್, ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸುವ ವಿನೂತನ ಯೋಜನೆ ‘ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ’ ಕಾರ್ಯಕ್ರಮ ಮಾರ್ಚ್ 12ಕ್ಕೆ ಚಿಕ್ಕಬಳ್ಳಾಪುರದ ಜಿಲ್ಲೆಯ ಗುಂಗೀರ್ಲಹಳ್ಳಿಯಲ್ಲಿ ಬೆಳಗ್ಗೆ 11 ಗಂಟೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಕಂದಾಯ ಸಚಿವ ಆರ್.ಅಶೋಕ್ ಚಾಲನೆ ನೀಡಿ, ರೈತರ ಮನೆ ಮನೆಗೆ ತೆರಳಿ ದಾಖಲೆಯನ್ನು ನೀಡಲಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸೋಲಿನ ನಂತರ, ಪಂಜಾಬ್‍ನ ಉನ್ನತ ಸರ್ಕಾರಿ ವಕೀಲರು ರಾಜೀನಾಮೆ!
Advertisement
Advertisement
ಅದೇ ರೀತಿ ರಾಜ್ಯಾದ್ಯಂತ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾಡಳಿತದ ಎಲ್ಲ ಅಧಿಕಾರಿಗಳು ರೈತರ ಮನೆಗೆ ತೆರಳಿ ಕಂದಾಯ ದಾಖಲೆ ನೀಡಲಿದ್ದಾರೆ. ಈ ಕುರಿತು ಅಶೋಕ್ ಅವರು ಪ್ರತಿಕ್ರಿಯಿಸಿದ್ದು, ರೈತನ ಜಮೀನಿಗೆ ಸಂಬಂಧಿಸಿದ ಭೂದಾಖಲೆಗಳನ್ನು ‘ರೈತನ ಮನೆ ಬಾಗಿಲಿಗೆ’ ತಲುಪಿಸುವುದು ಒಂದು ಅತ್ಯುತ್ತಮ ಸೇವೆಯಾಗಿದೆ. ಜಮೀನಿನ ಈ ದಾಖಲೆಗಳು ರೈತನಿಗೆ ಸುರಕ್ಷಿತ ಭಾವನೆ ಮೂಡಿಸುತ್ತದೆ. ಈ ಪ್ರಕ್ರಿಯೆಯು ಅತ್ಯಮೂಲ್ಯ ಆಸ್ತಿಯನ್ನು ರಕ್ಷಿಸಲು ಸಹಕಾರಿಯಾಗುತ್ತದೆ ಎಂದು ವಿವರಿಸಿದರು.
Advertisement
ಜಾತಿ ಮತ್ತು ಆದಾಯ ಪ್ರಮಾಣಪತ್ರಗಳು ಕೂಡ ಪ್ರಮುಖ ದಾಖಲೆಗಳಾಗಿದ್ದು, ಅದರ ಆಧಾರದ ಮೇಲೆ ನಾಗರಿಕರು ಶೈಕ್ಷಣಿಕ, ಉದ್ಯೋಗ ಮತ್ತು ಇತರೆ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಸಕಾಲದಲ್ಲಿ ಪಡೆಯಲು ಸಾಧ್ಯವಾಗುತ್ತದೆ ಎಂದರು.
ನಮ್ಮ ಉದ್ದೇಶ ಸರ್ಕಾರದ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಬೇಕು ಎನ್ನುವುದು ನಮ್ಮ ಉದ್ದೇಶ. ಹಾಗಾಗಿಯೇ ಮನೆಬಾಗಿಲಿಗೆ ಪಿಂಚಣಿ, ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಮುಂತಾದ ಕಾರ್ಯಕ್ರಮಗಳನ್ನು ನೀಡಲಾಗಿತ್ತು. ಈಗ ಕಂದಾಯ ಇಲಾಖೆ ರೈತರಿಗೆ ದಾಖಲೆ ನೀಡುವುದರ ಮೂಲಕ ಹೊಸ ಇತಿಹಾಸ ಸೃಷ್ಟಿಸಲಿದೆ ಎಂದು ಹೇಳಿದರು. ಇದನ್ನೂ ಓದಿ: ಪುನೀತ್ ಮಾಡಬೇಕಾದ ಸಿನಿಮಾ ಈಗ ವಿರಾಟ್ ಪಾಲು! – ಕೊನೆಗೂ ಈಡೇರಲಿಲ್ಲ ದಿನಕರ್ ಕನಸು!
ಸಚಿವರಾದ ಡಾ.ಸುಧಾಕರ್, ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಈ ವೇಳೆ ಉಪಸ್ಥಿತರಿರಲಿದ್ದಾರೆ.